ಮಂಡ್ಯ; “ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ವಿಸರ್ಜನೆಯ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಹಾಗೂ ಪ್ರತಿಭಟನಾ ನಿರತ ಹಿಂದೂಗಳ ಮೇಲೆ ಲಾಠಿಚಾರ್ಜ್ ನಡೆದ ಘಟನಾ ಸ್ಥಳಕ್ಕೆ ಇಂದು ಪಕ್ಷದ ನಿಯೋಗದೊಂದಿಗೆ ಭೇಟಿ ನೀಡಿ ಗಲಭೆಗ್ರಸ್ತ ಪ್ರದೇಶಗಳ ಬಗ್ಗೆ ವಾಸ್ತವಾಂಶಗಳನ್ನು ಕಲೆ ಹಾಕಿ ಜಿಲ್ಲಾಡಳಿತದಿಂದ ಬಿ ವೈ ವಿಜಯೇಂದ್ರ ಮಾಹಿತಿ ಪಡೆದರು. ಇಂದಿನ ಸಾಮೂಹಿಕ ಗಣೇಶ ವಿಸರ್ಜನಾ ಮಹೋತ್ಸವದಲ್ಲಿಯೂ ಭಾಗವಹಿಸಿ ಹಿಂದೂ ಕಾರ್ಯಕರ್ತರಿಗೆ ಧೈರ್ಯತುಂಬುವ ಜತೆಗೆ ಹಿಂದೂ ಉತ್ಸವಗಳು, ಗಣೇಶೋತ್ಸವ ಆಚರಣೆಗಳ ಮೇಲೆ ದಾಳಿ ನಡೆಸುವ ಕಿಡಿಗೇಡಿ ಮತಾಂಧರನ್ನು ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರಕ್ಕೆ ಇನ್ನಾದರೂ ಓಲೈಕೆ ರಾಜಕಾರಣ ಬದಿಗೆ ಸರಿಸಿ ಶಾಂತಿ ಸುವ್ಯವಸ್ಥೆ ನೆಲೆಸುವ ನಿಟ್ಟಿನಲ್ಲಿ ನಡೆದುಕೊಳ್ಳಲಿ ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದ್ರು.
ಗಣೇಶೋತ್ಸವದ ಮೇಲೆ ನಡೆದ ಕಲ್ಲುತೂರಾಟದ ಘಟನೆಗಳು, ಗಾಯಗೊಂಡವರು, ಘಟನೆ ಹಿಂದಿನ ಶಕ್ತಿಗಳು ಹಾಗೂ ಘಟನೆಗೆ ಕಾರಣರಾದ ದುಷ್ಕರ್ಮಿಗಳ ಹಿನ್ನೆಲೆಯನ್ನು ಅರಿಯುವ ಕುರಿತು ಪಕ್ಷದ ಸತ್ಯಶೋಧನಾ ಸಮಿತಿ ರಚಿಸಲಾಗಿದ್ದು ಘಟನೆಯ ವಾಸ್ತವಾಂಶಗಳನ್ನು ಸಮಿತಿಯು ಸಂಗ್ರಹಿಸಲಿದೆ ಎಂದು ಇದೇ ವೇಳೆ ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್, , ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಡಾ. ಅಶ್ವತ್ಥ್ ನಾರಾಯಣ್, ಮಾಜಿ ಸಚಿವರಾದ ಸಿ ಟಿ ರವಿ, , ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ, , ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಧೀರಜ್ ಮುನಿರಾಜು, ಸಂಸದರಾದ ಯದುವೀರ್ ಒಡೆಯರ್, , ಮಾಜಿ ಸಚಿವರಾದ ಶ್ರೀ ಸಿ.ಎಸ್.ಪುಟ್ಟರಾಜು, ಶಾಸಕರಾದ ಶ್ರೀ ಎಂ ಕೃಷ್ಣಪ್ಪ, ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಲಕ್ಷ್ಮೀ ಅಶ್ವಿನ್ ಗೌಡ, ಶ್ರೀ ಶರಣು ತಳ್ಳೀಕೆರೆ, ರಾಜ್ಯ ಮಾಧ್ಯಮ ವಕ್ತಾರರಾದ ಶ್ರೀ ಅಶ್ವಥ್ ನಾರಾಯಣ ಗೌಡ, ಜಿಲ್ಲಾಧ್ಯಕ್ಷರಾದ ಶ್ರೀ ಡಾ.ಇಂದ್ರೇಶ್ ಕುಮಾರ್, ಮುಖಂಡರಾದ ಶ್ರೀ ಎಸ್.ಪಿ.ಸ್ವಾಮಿ, ಶ್ರೀ ಇಂಡವಾಳು ಸಚ್ಚಿದಾನಂದ್, ಶ್ರೀ ಅಶೋಕ್ ಜಯರಾಮ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.











