ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿದ್ದ ಬೆಪಿ ಶಾಸಕ ಮುನಿರತ್ನ ಬೆಂಗಳೂರಿನ 42ನೇ ACMM ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ವಿರುದ್ಧ ದಾಖಲಾಗಿದ್ದ ಒಂದು ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಒಂದು ಪ್ರಕರಣದಲ್ಲಿ ಬೇಲ್ ಸಿಕ್ಕಿದ ಬೆನ್ನಲ್ಲೇ ಮುನಿರತ್ನ ಅವರಿಗೆ ಮತ್ತೊಂದು ಪ್ರಕರಣದಲ್ಲಿ ಬಂಧನ ಭೀತಿ ಎದುರಾಗಿದೆ.
ಮಹಿಳೆಯೊಬ್ಬರು ಶಾಸಕ ಮುನಿರತ್ನ ಅವರು ನನ್ನ ಮೇಲೆ ಅತ್ಯಾಚಾರ ಮಾಡಿ ಹನಿ ಟ್ರ್ಯಾಪ್ ಮಾಡಲು ನನ್ನನ್ನು ಬಳಸಿಕೊಂಡಿದ್ದಾರೆ ಎಂದು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಗ್ಗಲಿಪುರ ಪೊಲೀಸ್ ಠಾಣೆಗೆ ಬುಧವಾರ ತಡರಾತ್ರಿ ಆಗಮಿಸಿದ್ದ ಸಂತ್ರಸ್ತ ಮಹಿಳೆ, ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್ ನಲ್ಲಿ ನನ್ನ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯವೆಸಗಿ ನನ್ನನ್ನು ಹನಿಟ್ರ್ಯಾಪ್ ಗಾಗಿ ಬಳಸಿಕೊಂಡಿದ್ದಾರೆ ಎಂದು ಶಾಸಕ ಮುನಿರತ್ನ ಸೇರಿದಂತೆ ಏಳು ಮಂದಿಯ ವಿರುದ್ಧ ಮಹಿಳೆ ದೂರು ನೀಡಿದ್ದಾರೆ.
ಮಹಿಳೆ ನೀಡಿದ ದೂರಿನಂತೆ ಮುನಿರತ್ನ, ಆತನ ಗನ್‌ಮ್ಯಾನ್ ವಿಜಯಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಒಂದು ಪ್ರಕರಣದಲ್ಲಿ ಜಾಮೀನು ಸಿಕ್ರೂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗಾಗಿ ಮುನಿರತ್ನ ಅವರು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.
ಮುನಿರತ್ನ ಅವರು ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಅರೆಸ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗಾಗಿ ಜಾಮೀನು ಸಿಕ್ಕರೂ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನೆಮ್ಮದಿ ಇಲ್ಲದಂತಾಗಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು
ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರಿನ 42ನೇ ACMM ನ್ಯಾಯಾಲಯ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ವಿರುದ್ಧ ದಾಖಲಾಗಿದ್ದ ಒಂದು ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.ಈ ಮೂಲಕ ಮುನಿರತ್ನ ಅವರಿಗೆ ಅಟ್ರಾಸಿಟಿ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
ಮುನಿರತ್ನ ಅವರಿಗೆ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿದೆ. 2, ಲಕ್ಷ ಬಾಂಡ್ , ಇಬ್ಬರು ಷ್ಯೂರಿಟಿ ಒದಗಿಸುವಂತೆ ಷರತ್ತು ವಿಧಿಸಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ನೀಡಿದೆ. ಅಲ್ಲದೇ ಸಾಕ್ಷಾಧಾರ ನಾಶಪಡಿಸಬಾರದು ಹಾಗೂ ಸಾಕ್ಷಿಗಳಿಗೆ ಬೆದರಿಕೆ