ಮನೆ Latest News ಮಂಡಿನೋವಿನ ನಡುವೆಯೂ ವಿಧಾನಸೌಧದಲ್ಲಿ ಬಜೆಟ್ ಮೀಟಿಂಗ್ ಮಾಡಿದ ಸಿಎಂ ಸಿದ್ದರಾಮಯ್ಯ

ಮಂಡಿನೋವಿನ ನಡುವೆಯೂ ವಿಧಾನಸೌಧದಲ್ಲಿ ಬಜೆಟ್ ಮೀಟಿಂಗ್ ಮಾಡಿದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು; ಮಂಡಿನೋವಿನ ನಡುವೆಯೂ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮೀಟಿಂಗ್ ಮಾಡಿದರು. ಮುಂದಿನ ತಿಂಗಳು ಬಜೆಟ್ ಇರೋದ್ರಿಂದ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಸಿದ್ರು.ಇನ್ನು ಮಂಡಿನೋವಿನ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್ ನಲ್ಲಿ ಸಭೆಗೆ ಆಗಮಿಸಿದ್ರು.

ಸಿಎಂ ಸಿದ್ದರಾಮಯ್ಯ ರೈತರು ಮತ್ತು ರೈತರ ಸಂಘ ಸಂಸ್ಥೆಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಸಚಿವ ವೆಂಕಟೇಶ್, ಬಿ ಆರ್ ಪಾಟೀಲ್ ಭಾಗಿಯಾಗಿದ್ದರು.

ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ, ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಈ ವೇಳೆ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು. ಇನ್ನು ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೋರಲಿನಿಂದ ಅಭಿನಂದಿಸಿದರು.

ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ. ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು. ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ. ರೈತರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.