ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳು ಜೈಲು ಸೇರಿದ್ದಾರೆ. ಅತ್ತ ಆರೋಪಿಗಳು ಜೈಲು ಸೇರಿದ್ರೆ ಇತ್ತ ಕೊಲೆಯಾದ ರೇಣುಕಾಸ್ವಾಮಿ ಮನೆಯವರ ಕಷ್ಟ ಹೇಳ ತೀರದಾಗಿದೆ. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಂದೆ ತಾಯಿ ಕಣ್ಣೀರು ಹಾಕುತ್ತಿದ್ದರೆ, ಗರ್ಭಿಣಿ ಪತ್ನಿ ಮುಂದೆ ತನ್ನ ಬದುಕೇನು ಅಂತಾ ಸಂಕಟ ಪಡುತ್ತಿದ್ದಾರೆ. ಇದೀಗ ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಮತ್ತು ತಂಡ ಸಹಾಯ ಹಸ್ತ ಚಾಚಿದೆ. ಇಂದು ಧ್ರುವ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಮತ್ತು ತಂಡ ರೇಣುಕಾಸ್ವಾಮಿ ಕುಟುಂಬವನ್ನು ಭೇಟಿ ಮಾಡಿತು. ಈ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರೇಣುಕಾಸ್ವಾಮಿ ಕುಟುಂಬಕ್ಕೆ ಧನಸಹಾಯ ಮಾಡಿದ್ದಾರೆ.
ಇನ್ನು ನಿನ್ನೆ ನಟ ಧ್ರುವ ಸರ್ಜಾ ರೇಣುಕಾಸ್ವಾಮಿ ಹೆತ್ತವರಿಗೆ ಕರೆ ಮಾಡಿ ಮಾತನಾಡಿದ್ದರು.ನನ್ನ ಅತ್ತಿಗೆ ಗರ್ಭಿಣಿ ಆಗಿದ್ದಾಗ್ಲೆ ನನ್ನ ಅಣ್ಣ ತೀರಿಕೊಂಡಿದ್ದ. ಹಾಗಾಗಿ ನನಗೆ ನೋವು ಏನು ಅನ್ನೋಜದು ಗೊತ್ತಿದೆ. ನಿಮಗೆ ಏನೇ ಸಹಾಯ ಬೇಕಾದರೀ ಕೇಳಿ ಎಂದು ಧ್ರುವ ಸರ್ಜಾ ಹೇಳಿದ್ದಾರೆ ಎನ್ನಲಾಗಿದೆ. ಇನ್ನು ನಿನ್ನೆ ರೇಣುಕಾಸ್ವಾಮಿ ತಂದೆ ತಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ವೇಳೆ ರೇಣುಕಾಸ್ವಾಮಿ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕೂಡ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯಗ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಪೊಲೀಸರಿಗೆ 30 ಸಾಕ್ಷ್ಯಗಳು ಲಭ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪ್ರಮುಖ ಆರೋಪಿ ಪವಿತ್ರಗೌಡ ಸೇರಿ ಒಟ್ಟು 17 ಜನ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಸ್ಫೋಟಕ ವಿಚಾರವೊಂದು ಬಯಲಾಗಿದೆ. ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಪೊಲೀಸರಿಗೆ ಬರೋಬ್ಬರಿ 30 ಸಾಕ್ಷಿಗಳು ಲಭ್ಯವಾಗಿವೆ ಎನ್ನಲಾಗಿದೆ. ಪವಿತ್ರ ಗೌಡ ಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಗಳನ್ನು ಮಾಡುತ್ತಿದ್ದ ಅನ್ನೋದು ಗೊತ್ತಾಗುತ್ತಿದ್ದಂತೆ ಆತನನ್ನು ಚಿತ್ರದುರ್ಗದಿಂದ ದರ್ಶನ್ ನಿದರ್ಶನದಂತೆ ಬೆಂಗಳೂರಿನ ಆರ್ ಆರ್ ನಗರದ ಪಟ್ಟಣಗೆರೆಯಲ್ಲಿರುವ ದರ್ಶನ್ ಆಪ್ತ ವಿನಯ್ ಕಾರ್ ಶೆಡ್ ಗೆ ಕರೆದುಕೊಂಡು ಬರಲಾಗಿತ್ತು. ಅಲ್ಲಿ ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇನ್ನು ಪ್ರಕರಣದಲ್ಲಿ ಡಿ ಬಾಸ್ ಭಾಗಿಯಾಗಿದ್ದಾರೆ ಎನ್ನೋದಕ್ಕೆ ರೇಣುಕಾಸ್ವಾಮಿಯನ್ನು ಕರೆ ತಂದಲ್ಲಿಂದ ಆತನನ್ನು ಕೊಲೆ ಮಾಡಿ ಶವ ಬಿಸಾಕೋವರೆಗೂ ಪೊಲೀಸರಿಗೆ ಬರೋಬ್ಬರಿ 30 ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗಿದೆ.