ಮನೆ Latest News ಮಾಜಿ ಸಚಿವ ಬಿ ನಾಗೇಂದ್ರಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಇಡಿ ಅಧಿಕಾರಿಗಳು; , ವಾಲ್ಮೀಕಿ ಕಚೇರಿ...

ಮಾಜಿ ಸಚಿವ ಬಿ ನಾಗೇಂದ್ರಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಇಡಿ ಅಧಿಕಾರಿಗಳು; , ವಾಲ್ಮೀಕಿ ಕಚೇರಿ ಸೇರಿದಂತೆ 18 ಕಡೆಗಳಲ್ಲಿ ದಾಳಿ

0

ಬೆಂಗಳೂರು: ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ನಾಗೇಂದ್ರ ಅವರ ನಿವಾಸ,  ವಾಲ್ಮೀಕಿ ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ಮತ್ತು ಬಳ್ಳಾರಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಮನೆ, ಬೆಂಗಳೂರಿನ ವಸಂತ ನಗರದಲ್ಲಿರುವ ವಾಲ್ಮಿಕಿ ಕಚೇರಿ, ಬೆಂಗಳೂರು, ಬಳ್ಳಾರಿ,  ಹೈದ್ರಬಾದ್‌ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ  ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ನಿವಾಸದ ಮೇಲೆ  ದಾಳಿ ಮಾಡಿರುವ ಇ ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಡಾಲರ್ಸ್​ ಕಾಲೋನಿಯ ನಾಗೇಂದ್ರ ಫ್ಲ್ಯಾಟ್​ ಮೇಲೂ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಇದರ ನಡುವೆ ಬೆಂಗಳೂರು ಹಾಗೂ ರಾಯಚೂರಿನಲ್ಲಿರುವ  ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರ ಮನೆ ಮೇಲೆ ಕೂಡ ಕೂಡ ಇಡಿ ಅಧಿಕಾರಿಗಳು ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಗೆ ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ಅವರ ನಿವಾಸಕ್ಕೆ ದಾಳಿ ಮಾಡಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ದದ್ದಲ್ ಅವರ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸದ ಮೇಲೂ ಕೂಡ ದಾಳಿ ನಡೆದಿದೆ.

ಇನ್ನು ನಿನ್ನೆಯಷ್ಟೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣಕ್ಕೆ ಸಂಬಂಧಪಟ್ಟಂತೆ  ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರು ನಿನ್ನೆ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಈ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ, ಪರಮೇಶ್ವರ್  ಇಡಿ ಅಧಿಕಾರಿಗಳು ದಾಳಇ ನಡೆಸುವ ವೇಳೆ ರಾಜ್ಯ ಸರ್ಕಾರಕ್ಕೆ ತಿಳಿಸುವುದಿಲ್ಲ.ಹಾಗಾಗಿ ಅದರ ಮಾಹಿತಿ ನಮಗಿಲ್ಲ.ಅವರು ಯಾವ ಕಾರಣಕ್ಕೆ ದಾಳಿ ನಡೆಸಿದ್ದಾರೆ ಅನ್ನೋದು ಗೊತ್ತಿಲ್ಲ.ಈ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ ಎಂದಿದ್ದಾರೆ.