ಮನೆ Latest News ಇಂದು ಮಕ್ಕಳ ದಿನಾಚರಣೆ ಹಿನ್ನೆಲೆ; ಶಾಲಾ ಮಕ್ಕಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಂವಾದ

ಇಂದು ಮಕ್ಕಳ ದಿನಾಚರಣೆ ಹಿನ್ನೆಲೆ; ಶಾಲಾ ಮಕ್ಕಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಂವಾದ

0

ಬೆಂಗಳೂರು; ಇಂದು ಮಕ್ಕಳ ದಿನಾಚರಣೆ ಹಿನ್ನೆಲೆ, ಶಾಲಾ ಮಕ್ಕಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಂವಾದ ನಡೆಸಿದ್ರು.ನಮ್ಮ ಮಕ್ಕಳು ನಮ್ಮ ಭವಿಷ್ಯ ಎಂಬ ಹೆಸರಿನಡಿ ಸಂವಾದ ಕಾರ್ಯಕ್ರಮ ನಡೆಯಿತು. ಶಾಲಾ ಮಕ್ಕಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಂವಾದ ನಡೆಸಿದ್ರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.ಸಂವಾದದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿಯಾಗಿದ್ದರು.

ಗಿಡಗಳಿಗೆ ನೀರು ಹಾಕೋ ಮೂಲಕ ಸಂವಾದಕ್ಕೆ ಚಾಲನೆ ನೀಡಲಾಯಿತು.ಮಕ್ಕಳ ಕೈಯಲ್ಲಿ ನೀರು ಹಾಕಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಇನ್ನು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ ಜೀವನದಲ್ಲಿ ಸಾಧನೆ ಮಾಡಲು ಶ್ರಮ , ತ್ಯಾಗ, ಶ್ರದ್ಧೆ ಅಗತ್ಯ. ಜೀವನದಲ್ಲಿ ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ ಎಂದು ಶಾಲಾ ಮಕ್ಕಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿ ಮಾತು ಹೇಳಿದ್ರು,

ಮಕ್ಕಳು ಕನಸನ್ನು ಕಾಣಬೇಕು. ಆ ಕನಸನ್ನು ಸಾಕಾರಗೊಳಿಸಲು ಶ್ರಮ ಪಡಬೇಕು.ಜೀವನದಲ್ಲಿ ತ್ಯಾಗ ಹಾಗೂ ಶ್ರದ್ಧೆ ಇರಬೇಕು.. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ. ಕುಳಿತಲ್ಲಿಯೇ ಕುಳಿತು ಕನಸು ಕಂಡರೆ ಪ್ರಯೋಜನವಿಲ್ಲ, ಅದಕ್ಕೆ ಪ್ರಯತ್ನ ಪಡಬೇಕು ಎಂದರು. ನೀವು ಸಾಗಿದ ಹಾದಿಯನ್ನು ಮರೆತರೆ ಫಲ ದೊರೆಯುವುದಿಲ್ಲ.ನಿಮ್ಮನ್ನು ಸಾಕಿದ ಪೋಷಕರು, ವ್ಯಕ್ತಿತ್ವ ಬೆಳೆಸಿದ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಮರೆಯಬಾರದು. ಯಾವುದನ್ನು ಬೇಕಾದರೂ ಬದಲಿಯಾಗಿ ಪಡೆಯಬಹುದು. ಪೋಷಕರು ಮತ್ತು ಶಿಕ್ಷಕರನ್ನು ಬದಲಿಯಾಗಿ ಪಡೆಯಲು ಸಾಧ್ಯವಿಲ್ಲ. ಎಷ್ಟೇ ಎತ್ತರಕ್ಕೆ ಬೆಳೆದರೂ ನೀವು ಈ ಪ್ರಾಥಮಿಕ ವಿಚಾರಗಳನ್ನು ಮರೆಯಬಾರದು ಎಂದರು.

ಜೀವನದಲ್ಲಿ ಯಾವುದೂ ಶಾಶ್ವತವಲ್ಲ. ಯಾರು ಯಾವ ಸಾಧನೆಯನ್ನು ಬೇಕಾದರೂ ಮಾಡಬಹುದು. ಸಾಧನೆಗೆ ಹಾಗೂ ಆಕಾಶಕ್ಕೆ ಮಿತಿ ಇಲ್ಲ. ಜಾಗತಿಕವಾದ ಸ್ಪರ್ಧಾತ್ಮಕ ಯುಗದಲ್ಲಿ ನೀವಿದ್ದೀರಿ. ಅಧ್ಯಾಪಕರು ಯಾವುದಾದರು ಹೊಸ ಮಾಹಿತಿ ಕೊಡುವುದನ್ನು ಮರೆಯಬಹುದು. ಆದ್ರೆ ನಿಮ್ಮ ಬಳಿ ಇರುವ ಪುಟ್ಟ ಮೊಬೈಲ್ ನಿಂದಲೇ ಅನೇಕ ವಿಚಾರಗಳನ್ನು ತಿಳಿದುಕೊಳ್ಳಬಹುದು ಎಂದರು.

ಇನ್ನು ಶಾಲಾ ಮಕ್ಕಳ ಜೊತೆ ಸಂವಾದದಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು.ಶಾಲಾ ಮಕ್ಕಳು ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ನಡೆದ ಪ್ರಶ್ನೋತ್ತರ ಚರ್ಚೆ ಮಾಡಿದ್ರು.  ಪಂಚಶೀಲನಗರದ ಪಾಲಿಕೆ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ವಿದ್ಯಾಸಾಗರ್  ಎಂಬ ವಿದ್ಯಾರ್ಥಿಯ ನಾನು ಈ ರಾಜ್ಯದ ಸಿಎಂ ಆಗಬೇಕು, ಇದಕ್ಕಾಗಿ ಏನು ಓದಬೇಕು ಎಂಬ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ರು.

ಮಕ್ಕಳಲ್ಲಿ ಜ್ಞಾನ ಹೆಚ್ಚಾಗಬೇಕೆಂಬ ಉದ್ದೇಶದಿಂದಲೇ ಕಾರ್ಯಕ್ರಮಗಳಲ್ಲಿ ನಿರೂಪಣೆ ಹಾಗೂ ಮಾತನಾಡಲು ಅವಕಾಶ ನೀಡಲಾಗುತ್ತಿದೆ. ನೀವೆಲ್ಲರೂ ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳ ಜೊತೆ ನೇರವಾಗಿ ಹಾಗೂ ಧೈರ್ಯವಾಗಿ ಮಾತನಾಡುತ್ತಿದ್ದೀರಾ?ವಿಧಾನಸೌಧನ ಸಮ್ಮೇಳನಾ ಸಭಾಂಗಣವು ದೇಶಕ್ಕೆ ಸಂವಿಧಾನ ತರುವಂತಹ ಜಾಗ, ಶಾಸಕಾಂಗ ಸಭೆ ನಡೆಸುವಂತಹ ಜಾಗ, ನೀವೇ ಇಲ್ಲಿ ಕೂತು, ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳು ಆಗಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಲಹೆ ನೀಡಿದ್ರು.

ನೀಲಸಂದ್ರದ ಪಾಲಿಕೆ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ಚರಣ್ ನೀವು 5 ಗ್ಯಾರಂಟಿ ನೀಡಿದ್ದೀರಿ, ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ನಮ್ಮ ಅಮ್ಮ ಅಕ್ಕ ತಂಗಿಯರನ್ನು ಮಾತ್ರ ಊರಿಗೆ ಕರೆದುಕೊಂಡು ಹೋಗುತ್ತಾರೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ ಎಂಬ ಪ್ರಶ್ನೆ ಕೇಳಿದ ಅದಕ್ಕೆ ಉತ್ತರಿಸಿದ ಡಿಸಿಎಂ ನಿಮ್ಮ ತಾಯಿಗೆ 2000, ಬಸ್ ಉಚಿತ, 10 ಕೆಜಿ ಅಕ್ಕಿ, ಉಚಿತ ವಿದ್ಯುತ್ ನೀಡಲಾಗುತ್ತಿದೆ. ನೀನು ಕೇಳಿರುವ ಪ್ರಶ್ನೆಗೆ ಸರ್ಕಾರದಲ್ಲಿ ಚರ್ಚಿಸಿ ಒಂದು ವಯೋಮಿತಿಯವರೆಗೆ ಯೋಚಿಸಿ ಮುಂದೆ ಕ್ರಮವಹಿಸಲಾಗುವುದು ಎಂದು ಡಿಸಿಎಂ ಡಿಕೆ ಭರವಸೆ ನೀಡಿದ್ರು