ಮನೆ Latest News ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ; ಅರೆಸ್ಟ್ ಆಗಿರುವ ಮಾಜಿ ಸಚಿವ ಬಿ.ನಾಗೇಂದ್ರ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ; ಅರೆಸ್ಟ್ ಆಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನುಗಾಗಿ ಅರ್ಜಿ

0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳಿಂದ ಅರೆಸ್ಟ್ ಆಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನುಗಾಗಿ ಅರ್ಜಿ ಸಲ್ಲಿಸಿದ್ದಾರೆ.

 

ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ  ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು,  ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸಲು ಇಡಿ ಸೂಚಿಸಿದ್ದು ವಿಚಾರಣೆ ಮುಂದೂಡಿದೆ.

ಮಾಜಿ ಸಚಿವ ಬಿ.ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು

ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಪಟ್ಟಂತೆ  ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇನ್ನು ಮೊನ್ನೆ ನಾಗೇಂದ್ರ ಅವರ ಕಚೇರಿ, ನಿವಾಸ ಅವರ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದರು. ಅಲ್ಲದೇ ಅವರ ಆಪ್ತ ಹರೀಶ್ ಅವರನ್ನು ವಶಕ್ಕೆ ಪಡೆದಿದ್ದರು. ಇಂದು ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಾಗೇಂದ್ರ ಈ ಬಗ್ಗೆ ನನಗೇನು ಗೊತ್ತಿಲ್ಲ. ನಿನ್ನೆ ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ರು. ಇವತ್ತು ಇಲ್ಲಿಗೆ ಕರೆ ತಂದಿದ್ದಾರೆ ಎಂದು ಹೇಳಿದ್ದಾರೆ.

ಮಾಜಿ ಸಚಿವ ಬಿ ನಾಗೇಂದ್ರ ಅವರ ಮನೆ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ

ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ನಾಗೇಂದ್ರ ಅವರ ನಿವಾಸ,  ವಾಲ್ಮೀಕಿ ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ಮತ್ತು ಬಳ್ಳಾರಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಮನೆ, ಬೆಂಗಳೂರಿನ ವಸಂತ ನಗರದಲ್ಲಿರುವ ವಾಲ್ಮಿಕಿ ಕಚೇರಿ, ಬೆಂಗಳೂರು, ಬಳ್ಳಾರಿ,  ಹೈದ್ರಬಾದ್‌ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ  ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ನಿವಾಸದ ಮೇಲೆ  ದಾಳಿ ಮಾಡಿರುವ ಇ ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಡಾಲರ್ಸ್​ ಕಾಲೋನಿಯ ನಾಗೇಂದ್ರ ಫ್ಲ್ಯಾಟ್​ ಮೇಲೂ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಇದರ ನಡುವೆ ಬೆಂಗಳೂರು ಹಾಗೂ ರಾಯಚೂರಿನಲ್ಲಿರುವ  ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರ ಮನೆ ಮೇಲೆ ಕೂಡ ಕೂಡ ಇಡಿ ಅಧಿಕಾರಿಗಳು ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಗೆ ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ಅವರ ನಿವಾಸಕ್ಕೆ ದಾಳಿ ಮಾಡಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ದದ್ದಲ್ ಅವರ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸದ ಮೇಲೂ ಕೂಡ ದಾಳಿ ನಡೆದಿದೆ.

ಇನ್ನು ನಿನ್ನೆಯಷ್ಟೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣಕ್ಕೆ ಸಂಬಂಧಪಟ್ಟಂತೆ  ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರು ನಿನ್ನೆ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಈ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ, ಪರಮೇಶ್ವರ್  ಇಡಿ ಅಧಿಕಾರಿಗಳು ದಾಳಇ ನಡೆಸುವ ವೇಳೆ ರಾಜ್ಯ ಸರ್ಕಾರಕ್ಕೆ ತಿಳಿಸುವುದಿಲ್ಲ.ಹಾಗಾಗಿ ಅದರ ಮಾಹಿತಿ ನಮಗಿಲ್ಲ.ಅವರು ಯಾವ ಕಾರಣಕ್ಕೆ ದಾಳಿ ನಡೆಸಿದ್ದಾರೆ ಅನ್ನೋದು ಗೊತ್ತಿಲ್ಲ.ಈ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ ಎಂದಿದ್ದಾರೆ.