ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಬಿ ನಾಗೇಂದ್ರ ರಿಲೀಸ್ ಆಗಿದ್ದಾರೆ.
ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ನಿನ್ನೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅದರ ಬೆನ್ನಲ್ಲೇ ಇಂದು ಪರಪ್ಪನ ಅಗ್ರಹಾರ ರಿಲೀಸ್ ಆಗಿದ್ದಾರೆ.
ಇನ್ನು ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ನಾಗೇಂದ್ರ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾತನಾಡಿದ ಮಾಜಿ ಸಚಿವ ನಾಗೇಂದ್ರ ಮೂರು ತಿಂಗಳಿನಿಂದ ದುಷ್ಟ ರಾಜಕೀಯ ಮಾಡಿಕೊಂಡು ಬಿಜೆಪಿಯವರು ಬರ್ತಿದ್ದಾರೆ. ಬಿಜೆಪಿ ಇಡಿಯನ್ನ ಕೈ ಗೊಂಬೆ ಮಾಡಿಕೊಂಡಿದೆ.ಕಾಂಗ್ರೆಸ್ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದೆ.ವಾಲ್ಮೀಕಿ ಹಗರಣದಲ್ಲಿ ಸಿಎಂ,ಡಿಸಿಎಂ ಹೆಸರು ಹೇಳುವಂತೆ ನನ್ನ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ರು.ಬಿಜೆಪಿಯೇತರ ಸರ್ಕಾರವನ್ನ ಟಾರ್ಗೆಟ್ ಮಾಡಲಾಗ್ತಿದೆ.ಇವತ್ತು ಬಿಜೆಪಿಯಲ್ಲಿ 66 ಜನ ಶಾಸಕರಿದ್ದಾರೆ.ಮುಂದೆ ಅದು ಇನ್ನು ಕಡಿಮೆ ಆಗುತ್ತೆ ಎಂದರು.
ನ್ಯಾಯ ಇರುತ್ತೆ ಹಗರಣದಲ್ಲಿ ನಮ್ಮ ಪಾತ್ರ ಏನು ಇಲ್ಲ.ಮುಡಾದಲ್ಲೂ ಸಹ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಇಡಿ ಬಗ್ಗೆ ದೇಶದಲ್ಲಿ ನಂಬಿಕೆ ಇದೆ.ಮುಂದಿನ ದಿನಗಳಲ್ಲಿ ನೀವೆಲ್ಲರೂ ಸಾಕ್ಷಿ ಆಗ್ತೀರಾ.ಈ ಕೇಸ್ ಬಿದ್ದು ಹೋಗುತ್ತೆ ಎಂದರು.
ಮಾಜಿ ಸಚಿವ ಬಿ ನಾಗೇಂದ್ರ ಅವರ ಮನೆ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ
ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ನಾಗೇಂದ್ರ ಅವರ ನಿವಾಸ, ವಾಲ್ಮೀಕಿ ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು ಮತ್ತು ಬಳ್ಳಾರಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಮನೆ, ಬೆಂಗಳೂರಿನ ವಸಂತ ನಗರದಲ್ಲಿರುವ ವಾಲ್ಮಿಕಿ ಕಚೇರಿ, ಬೆಂಗಳೂರು, ಬಳ್ಳಾರಿ, ಹೈದ್ರಬಾದ್ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿರುವ ಇ ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಡಾಲರ್ಸ್ ಕಾಲೋನಿಯ ನಾಗೇಂದ್ರ ಫ್ಲ್ಯಾಟ್ ಮೇಲೂ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಇದರ ನಡುವೆ ಬೆಂಗಳೂರು ಹಾಗೂ ರಾಯಚೂರಿನಲ್ಲಿರುವ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರ ಮನೆ ಮೇಲೆ ಕೂಡ ಕೂಡ ಇಡಿ ಅಧಿಕಾರಿಗಳು ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಗೆ ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ಅವರ ನಿವಾಸಕ್ಕೆ ದಾಳಿ ಮಾಡಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ದದ್ದಲ್ ಅವರ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸದ ಮೇಲೂ ಕೂಡ ದಾಳಿ ನಡೆದಿದೆ.
ಇನ್ನು ನಿನ್ನೆಯಷ್ಟೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರು ನಿನ್ನೆ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಅಧಿಕಾರಿಗಳು ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.