ಮನೆ Latest News ದೇವನಹಳ್ಳಿ ರೈತರ ಭೂಸ್ವಾಧಿನ ಪ್ರಕ್ರಿಯೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

ದೇವನಹಳ್ಳಿ ರೈತರ ಭೂಸ್ವಾಧಿನ ಪ್ರಕ್ರಿಯೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

0

ಬೆಂಗಳೂರು: ದೇವನಹಳ್ಳಿ ರೈತರ ಭೂಸ್ವಾಧೀನ ಪ್ರಕ್ರಿಯೆ ಕುರಿತು ಸಿಎಂ ಸಿದ್ದರಾಮಯ್ಯನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಚನ್ನರಾಯಪಟ್ಟಣ ರೈತರು ಭಾಗಿಯಾಗಿದ್ದರು.

ಹೂ ಹಣ್ಣು ತರಕಾರಿಗಳನ್ನ ಹೊತ್ತು ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ವಿಧಾನಸೌಧಕ್ಕೆ ರೈತರು ಆಗಮಿಸಿದ್ದರು. ಕೆಐಎಡಿಬಿ ಗೆ ಜಮೀನು ಭೂಸ್ವಾಧೀನ ವಿರೋಧಿಸಿ ಜನರು ಹೋರಾಟ ಮಾಡುತ್ತಿದ್ದು ಜಮೀನು ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಜೊತೆಗೆ ರೈತರು ಸಭೆಯಲ್ಲಿ ಭಾಗಿಯಾಗಿದ್ರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಸಚಿವ ಬೈರತಿ ಸುರೇಶ್, ರೈತ ಮುಖಂಡ ಬಡಗಲಪುರ ನಾಗೇಂದ್ರ, ನಟ ಪ್ರಕಾಶ್ ರೈ, ಸಭೆಯಲ್ಲಿ ಸಚಿವ ಕೆ.ಎಚ್. ಮುನಿಯಪ್ಪ, ಶಾಸಕ‌ ಬಿ.ಆರ್ ಪಾಟೀಲ್, ಸಿಎಂ ಕಾನೂನು‌ ಸಲಹೆಗಾರ ಎ.ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ‌ ರಜನೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರೈತರ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ ಚನ್ನರಾಯಪಟ್ಟಣ ಹೋರಾಟಗಾರರ ಸಭೆ ಕರೆದಿದ್ದೆ. ಅನೇಕ‌ ರೈತಪರ ಹೋರಾಟಗಾರರು ಭಾಗವಹಿಸಿದ್ರು. ಭೂಸ್ವಾಧೀನ ಸಂಬಂಧ ಇವತ್ತು ಫೈನಲ್‌ ನೋಟೀಫಿಕೇಷನ್ ಆಗಿಬಿಟ್ಟಿದೆ. ಅದರಿಂದ ಲೀಗಲ್ ಇಶ್ಯೂಸ್ ಇದೆ, ಸಮಯ ಬೇಕು ಅಂತ ಹೇಳಿದ್ದೇನೆ. ಸರ್ಕಾರಕ್ಕೆ ಹತ್ತು ದಿನ ಸಮಯ ಬೇಕು ಅಂತ ಹೇಳಿದ್ದೇನೆ.15ನೇ ತಾರೀಖು ಬೆಳಗ್ಗೆ ರೈತರ ಜೊತೆ ಸಭೆ ನಡೆಯುತ್ತೆ ಎಂದರು.

ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಕಲೆ ಹಾಕಿದ್ರು. ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿವೆ .ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ. ಈಗಾಗಲೇ ಎಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ. ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ.ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ.10ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು ಎಂದರು.