ಮನೆ Latest News ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

0

ಮಂಗಳೂರು; ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

ಉಳ್ಳಾಲದ ಮೊಹಮ್ಮದ್​​​ ಸಮೀರ್​ ಅಲಿಯಾಸ್​​​ ಕಡಪರ ಸಮೀರ್(33) ಮತ್ತು ಬೋಳಿಯಾರ್ ನಿವಾಸಿ ಮೊಹಮ್ಮದ್​​​ ಮನ್ಸೂರ್(30)  ಗಾಯಗೊಂಡ ಕೈದಿಗಳು. ಇಬ್ಬರನ್ನೂ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸದ್ಯ ಅಪಾಯದಿಂದ ಪಾರಾಗಿದ್ದಾರ ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಜೈಲು ಅಧಿಕಾರಿಗಳು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇಂದು ಸಂಜೆ (ಜುಲೈ 1) 6.30ರಿಂದ 6.45ರ ಮಧ್ಯೆ ಎರಡು ಗುಂಪುಗಳ ಕೈದಿಗಳು ಜೈಲಿನ ಎ ಬ್ಯಾರಕ್​ನ ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಹೊಡೆದಾಡಿಕೊಂಡಿದ್ದಾರೆ. ಜೈಲಿನಲ್ಲಿರುವ ರೌಡಿಶೀಟರ್​​​​​​​​ ಟೋಪಿ ನೌಫಲ್ & ಗ್ಯಾಂಗ್ ವಿರುದ್ಧ ದಾಳಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಇನ್ನು ವಿಷಯ ತಿಳಿಯುತ್ತಿದ್ದಂತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಹಲ್ಲೆ ಮಾಡಿದ ತಂಡದ ಸೆಲ್​ಗಳ ಮೇಲೆ ದಾಳಿ ಮಾಡಿ, ಪರಿಶೀಲಿಸಿದ್ದಾರೆ. ಇನ್ನು ಎರಡು ಗುಂಪುಗಳ ನಡುವಿನ ಹೊಡೆದಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿದ್ದ ಕೈದಿಗಳಾದ ಮುಫದ್ ರಿಫಾತ್(28), ಮೊಹಮ್ಮದ್ ರಿಜ್ವಾನ್(34), ಇಬ್ರಾಹಿಂ ಕಲ್ಲೆಲ್(30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್, ಜೈನುದ್ದೀನ್ ಇವರೆಲ್ಲರು ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಹಾಗೂ  ಹಲ್ಲೆಗೊಳಗಾದವರು ಈ ಇಬ್ಬರ ವಿರುದ್ಧವೂ ಹಲವು ಪ್ರಕರಣ ದಾಖಲಾಗಿವೆ. ಘಟನೆ ಸಂಬಂಧ ಜೈಲು ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.