ಮನೆ Latest News ಕೊನೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ

ಕೊನೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ

0

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿ ಬಾಸ್ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಪೊಲೀಸರು 3,991 ಪುಟಗಳಷ್ಟು ಚಾರ್ಜ್‌ಶೀಟ್ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಾಖಲಾಗಿ ಸೆಪ್ಟೆಂಬರ್ 9 ಕ್ಕೆ 3 ತಿಂಗಳಾಗುತ್ತದೆ. ಅಂದರೆ 90 ದಿನಗಳಾಗುತ್ತವೆ.ಯಾವುದೇ ಪ್ರಕರಣ ದಾಖಲಾಗಿ 90 ದಿನಗಳ ಒಳಗಾಗಿ ಚಾರ್ಚ್ ಶೀಟ್ ಸಲ್ಲಿಸಬೇಕಾಗುತ್ತದೆ. ಹಾಗಾಗಿ ಇದೀಗ ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ ಚಂದನ್ ಅವರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈ ಚಾರ್ಜ್ ಶೀಟ್ ನಲ್ಲಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಅಲ್ಲದೇ ಈ ಬಗ್ಗೆ ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆ ಪಡೆದಿದೆ ಎನ್ನಲಾಗಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ ಎನ್ನಲಾಗಿದೆ.

ಇನ್ನು ಇಷ್ಟು ದಿನ ಜಾಮೀನಿಗೆ ಅರ್ಜಿ ಸಲ್ಲಿಸಲು ಪೊಲೀಸರು ಯಾವಾಗ ಚಾರ್ಜ್ ಶೀಟ್ ಸಲ್ಲಿಸುತ್ತಾರೆ ಎಂದು ಕಾದು ಕೂತಿದ್ದರು. ಇದೀಗ ಜಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಇನ್ನು ಆರೋಪಿಗಳು ಬೆಲ್ ಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಅಂದು ಏನ್ರೀ ಮೀಡಿಯಾ ಅಂದ ಡಿ ಬಾಸ್ ರಿಂದ , ಇಂದು ಟಿವಿ ಬೇಕು ಎಂದು ಜೈಲಾಧಿಕಾರಿಗಳಿಗೆ ಬೇಡಿಕೆ

ಬಳ್ಳಾರಿ; ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ರೆ ರಾಜ ಮರ್ಯಾದೆ ನೀಡಲಾಗುತ್ತಿದೆ ಎಂಬ ವಿಚಾರ ಬಯಲಾಗುತ್ತಿದ್ದಂತೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿದ್ದಂತೆ ನಟ ದರ್ಶನ್ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟ ಪಡುತ್ತಿದ್ದಾರೆ ಎನ್ನಲಾಗಿದೆ.ಅಲ್ಲದೇ ಸೆಲ್ ನಲ್ಲಿ ಒಬ್ಬರೇ ಇರೋದರಿಂದ ನಟ ದರ್ಶನ್ ಗೆ ಮಾತನಾಡೋದಕ್ಕೆ ಯಾರ್ ಸಿಗ್ತಾರೆ ಅಂತಾ ಕಾಯೋ ಹಾಗಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜನಂತಿದ್ದ ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿ ಕಟ್ಟಿ ಹಾಕಿದಂತಾಗಿದೆ. ಹೊರಗಡೆ ಜಗತ್ತಿನಲ್ಲಿ ಏನಾಗುತ್ತಿದೆ ಅನ್ನೋದೇ ಗೊತ್ತಾಗುತ್ತಿಲ್ಲ. ಹಾಗಾಗಿ ಜೈಲಿನ ಸಿಬ್ಬಂದಿ ಬಳಿ ಎಲ್ಲವನ್ನು ಕೇಳಿ ದರ್ಶನ್ ತಿಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ನಿರ್ಧರಿಸಿದ್ದು ಅದರ ಅಪ್ ಡೇಟ್ ಪಡೆಯಲು ದರ್ಶನ್ ಗೆ ಟಿವಿ ಬೇಕೇ ಬೇಕು. ಹಾಗಾಗಿ ಜೈಲಿನ ಸಿಬ್ಬಂದಿ ಬಳಿ ದರ್ಶನ್ ನನಗೆ ಟಿವಿ ಬೇಕು ಅಂತಾ  ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ಬೆನ್ನು ನೋವಿನ ಹಿನ್ನೆಲೆ ದರ್ಶನ್ ಗೆ ಸರ್ಜಿಕಲ್ ಚಯರ್ ನೀಡಲು ಅನುಮತಿ ಕೊಡಲಾಗಿದೆ. ಅದರ ಬೆನ್ನಲ್ಲೇ ಇದೀಗ ಟಿವಿಗೆ ಜೈಲಿನ ಸಿಬ್ಬಂದಿ ಬಳಿ ಬೇಡಿಕೆ ಇಟ್ಟಿದ್ದು ನಿಮಗೆ ಟಿವಿ ಬೇಕು ಅಂದ್ರೆ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಂದು ಜೈಲಿನ ಸಿಬ್ಬಂದಿ ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಹೊರಗಡೆ ಏನ್ ಬೆಳವಣಿಗೆಗಳು ಆಗ್ತಿವೆ ಎಂದು ನಟ ದರ್ಶನ್ ಗೆ ಗೊತ್ತಾಗದೇ ಇರೋದರಿಂದ ಜೈಲಿನ ಸಿಬ್ಬಂದಿ ಬಳಿ ಹೊರಗೇನಾಗ್ತಿದೆ ಎಂದು ಕೇಳಿ ತಿಳಿದುಕೊಳ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಜೈಲಿನ ಬಳಿ ಯಾರು ಅಭಿಮಾನಿಗಳು ಬರುವುದು ಬೇಡ ಎಂದು ಜೈಲು ಸಿಬ್ಬಂದಿ ಮೂಲಕ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.