ಮನೆ Latest News ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕುವಂತೆ ಮಾಜಿ ಸಿಎಂ...

ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕುವಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ

0

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ನವರಿಗೆ ಅಜೀರ್ಣ ಆಗುವಷ್ಟು ಬಹುಮತ ಇದೆ. ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಕೊಟ್ಟಂತಾಗುತ್ತದೆ. ಅದಕ್ಕಾಗಿ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ಶ್ರೀನಿವಾಸ್ ದಾಸ ಕರಿಯಪ್ಪ ಪರವಾಗಿ ಪ್ರಚಾರ ಮಾಡುತ್ತೇನೆ. 5 ಮತ್ತು 6 ರಂದು ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನೂರಕ್ಕೆ ನೂರು ಎರಡೂ ಕ್ಷೇತ್ರಗಳಲ್ಲಿ ದೊಡ್ಡ ಅಂತರದಲ್ಲಿ ಇಬ್ಬರೂ ಅಭ್ಯರ್ಥಿಗಳು ಗೆಲ್ಲುತ್ತಾರೆ.ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜನಹಿತ ಮರೆತು ಸಿದ್ಧರಾಮಯ್ಯ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಈಗಾಗಲೇ ಅವರಿಗೆ ಅಜೀರ್ಣ ಆಗುವಷ್ಟು ಬಹುಮತ ಇದೆ. ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಕೊಟ್ಟಂತಾಗುತ್ತದೆ. ಅದಕ್ಕಾಗಿ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಯಾರೇ ಬಂದರೂ ಅವಕಾಶ ಇದೆ. ಬರಲಿ, ಸ್ವಾಗತ ಮಾಡುತ್ತೇನೆ ಎಂದ ಅವರು ಉಪಚುನಾವಣೆಯಲ್ಲಿ ಇಡೀ ಸರ್ಕಾರವೇ ತೊಡಗಿಸಿಕೊಂಡಿರುವ ವಿಚಾರದ ಬಗ್ಗೆ ಮಾತನಾಡಿದ ಅವರು

ಅದರ ಅರ್ಥ ಏನ್ರೀ?. ಇಡೀ ಸರ್ಕಾರ, ಸ್ವತಃ ಸಿಎಂ ನಾಲ್ಕೈದು ದಿನ ಅಲ್ಲಿ ಕುಳಿತಿದ್ದಾರೆ ಎಂದರೆ ಸೋಲಿನ‌ ಭಯ ಅವರನ್ನು ಕಾಡುತ್ತಿರುವುದು ಸ್ಪಷ್ಟ. ಜನ ಇದಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹಿಂದಿ ಭಾಷಾ ಪರೀಕ್ಷೆಗೆ ಕೊಕ್ ವಿಚಾರದ ಬಗ್ಗೆ ಮಾತನಾಡಿ  ಆ ಬಗ್ಗೆ ನಾನು ಸದ್ಯಕ್ಕೆ ಏನೂ ಮಾತಾಡಲು ಇಷ್ಟಪಡಲ್ಲ. ದೇಶದ ಉದ್ದಗಲಕ್ಕೆ ಹಿಂದಿ ಭಾಷೆ ಇಲ್ಲದಿದ್ದರೆ ಬೇರೆ ಭಾಷೆ ಮಾತಾಡಲು ಬರುವುದಿಲ್ಲ. ಹಾಗಾಗಿ ಹಿಂದಿ ಕಲಿಯುವುದು ತಪ್ಪು ಎಂದು ಹೇಳುವುದನ್ನು ನಾನು ಒಪ್ಪಲ್ಲ. ಆದರೆ ಕೆಲವರು ತಮ್ಮದೇ ಮಾತುಗಳನ್ನು ಆಡುತ್ತಿದ್ದಾರೆ.ಇದು ಕನ್ನಡಕ್ಕೆ ಮಾಡುವ ದ್ರೋಹ ಅಲ್ಲ. ಹಿಂದಿ ಭಾಷೆ ಕಲಿಯುವುದರಿಂದ ಕನ್ನಡಕ್ಕೆ ಏನೂ ಆಘಾತ ಆಗುವುದಿಲ್ಲ.ನಾನು ವಿನಯದಿಂದ ಕನ್ನಡಿಗರಲ್ಲಿ ಪ್ರಾರ್ಥನೆ ಮಾಡುತ್ತೇನೆ. ದಯಮಾಡಿ ಈ ಬಗ್ಗೆ ಗೊಂದಲ ಉಂಟು ಮಾಡುವ ಕೆಲಸ ಮಾಡಬೇಡಿ ಎಂದು ತಿಳಿಸಿದ್ದಾರೆ.

ಶಾಸಕ ಎಸ್.ಟಿ‌. ಸೋಮಶೇಖರ್ ಪತ್ರ ಬರೆದಿರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನನಗೆ ಯಾವುದೂ ಗೊತ್ತಿಲ್ಲಪ್ಪಾ ಎಂದಿದ್ದಾರೆ.