ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ಪಡೆದಿದ್ದರು. ಇಂದಿಗೆ ಅವರ ಇಡಿ ಕಸ್ಟಡಿಯ ಅವಧಿ ಅಂತ್ಯವಾಗುತ್ತೆ. ಹಾಗಾಗಿ ಇಂದು ಇಡಿ ಅಧಿಕಾರಿಗಳು ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಯ ನಂತರ ಇಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ ನಾಗೇಂದ್ರ ಅವರನ್ನು ಹಾಜರುಪಡಿಸಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 12 ರಂದು ಇಡಿ ಅಧಿಕಾರಿಗಳು ಬಿ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದರು. 6 ದಿನಗಳಿಂದ ನಿರಂತರ ವಿಚಾರಣೆಗೆ ಒಳಪಡಿಸಿದ್ದರು.ಅದರಂತೆ ಇಂದಿಗೆ ಅವರ ಇಡಿ ಕಸ್ಟಡಿಯ ಅವಧಿ ಅಂತ್ಯವಾಗುತ್ತೆ. ಹಾಗಾಗಿ ಇಂದು ಇಡಿ ಅಧಿಕಾರಿಗಳು ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.ಅಲ್ಲದೇ ವಿಚಾರಣೆ ವೇಳೆ ನಾಗೇಂದ್ರ ಸಮರ್ಪಕವಾಗಿ ಯಾವುದೇ ಪ್ರಶ್ನೆಗೆ ಉತ್ತರಿಸಿಲ್ಲ ಎನ್ನಲಾಗುತ್ತಿದ್ದು, ಇಡಿ ಅಧಿಕಾರಿಗಳು ಮತ್ತೆ ಅವರನ್ನು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇನ್ನು ಬಿ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಅವರ ಡಾಲರ್ಸ್ ಕಾಲೋನಿಯ ನಿವಾಸದಿಂದ ವಶಕ್ಕೆ ಪಡೆದ ಇಡಿ ಅಧಿಕಾರಿಗಳು ಶಾಂತಿನಗರದ ಇಡಿ ಕಚೇರಿಯಲ್ಲಿ ಸಂಜೆಯವರೆಗೂ ವಿಚಾರಣೆ ಮಾಡಿ ಕಳುಹಿಸಿದ್ದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ಹಾಗೂ ದದ್ದಲ್ ಪಾತ್ರ ಇರೋದು ನಿಜ; ಮಾಧ್ಯಮ ಪ್ರಕಟಣೆ ಮೂಲಕ ಇಡಿ ಮಾಹಿತಿ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 6 ದಿನಗಳ ಈಗಾಗಲೇ ಇಡಿ ಅಧಿಕಾರಿಗಳು ಬಿ ನಾಗೇಂದ್ರ ಅವರನ್ನು ಕಸ್ಟಡಿಗೆ ಪಡೆದಿದ್ದಾರೆ.ಅಲ್ಲದೇ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ಇಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ರು. ಅದರ ಬೆನ್ನಲ್ಲೇ ಇದೀಗ ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ.
89.65 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಪಾತ್ರವಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಈ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾವು ನಾಲ್ಕು ರಾಜ್ಯಗಳ 23 ಕಡೆಗಳಲ್ಲಿ ದಾಳಿಯನ್ನು ನಡೆಸಿದ್ದೇವೆ. ಅಲ್ಲದೇ 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿರೋದು ತನಿಖೆಯಲ್ಲಿ ಗೊತ್ತಾಗಿದೆ. ಅದು ಹಲವು ನಕಲಿ ಅಕೌಂಟ್ ಗಳಿಗೆ ಹೋಗಿ ಕ್ಯಾಶ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಬಸನಗೌಡ ಗದ್ದಲ್ ಮನೆಯಲ್ಲಿ ದಾಖಲೆ ಪತ್ತೆಯಾಗಿದೆ ಎಂದಿದ್ದಾರೆ.
ಇನ್ನು ಈ ಹಣವನ್ನು ಚುನಾವಣೆ ಹಾಗೂ ಐಷಾರಾಮಿ ಕಾರು ಖರೀದಿಗಾಗಿ ಬಳಕೆ ಮಾಡಿಕೊಂಡಿದ್ದಾರೆ. ಈ ದುಡ್ಡಿನಲ್ಲೇ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇಷ್ಟೇ ಅಲ್ಲದೆ ಚುನಾವಣೆಯಲ್ಲಿ ನಿಗಮದ ಹಣವನ್ನು ಮದ್ಯ ಖರೀದಿಗಾಗಿ ಬಳಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.