ಮನೆ Latest News ಉಡುಪಿ; ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಅಮಲು ಪದಾರ್ಥ ತಿನ್ನಿಸಿ ಸಾಮೂಹಿಕ ಅತ್ಯಾಚಾರ

ಉಡುಪಿ; ಕಾರ್ಕಳದಲ್ಲಿ ಯುವತಿಯನ್ನು ಅಪಹರಿಸಿ ಅಮಲು ಪದಾರ್ಥ ತಿನ್ನಿಸಿ ಸಾಮೂಹಿಕ ಅತ್ಯಾಚಾರ

0

ಉಡುಪಿಯ ಕಾರ್ಕಳದಲ್ಲಿ ಇಡೀ ರಾಜ್ಯವೇ ತಲೆತಗ್ಗಿಸುವ ಹೀನ ಕೃತ್ಯ ನಡೆದಿದೆ. 21 ವರ್ಷದ ಯುವತಿಯೊಬ್ಬಳು ಅನ್ಯಕೋಮಿನ ಯುವಕರು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕಾರ್ಕಳದ ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರ ಎಂಬಲ್ಲಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಲ್ತಾಫ್ ಹಾಗೂ ಸವೇರಾ ರಿಚರ್ಡ್‌ ಕಾರ್ಡೋಜಾ  ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಅಲ್ತಾಫ್ ಗೆ ಸಂತ್ರೆಸ್ತೆ ಇನ್ಸ್ಟಾಗ್ರಾಂ ಮೂಲಕ ಪರಿಚಿತವಾಗಿದ್ದಳು. ಇಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು. ಶುಕ್ರವಾರ ಯುವತಿಗೆ ಕರೆ ಮಾಡಿದ್ದ ಅಲ್ತಾಪ್ ಆಕೆಯನ್ನು ಪುಸಲಾಯಿಸಿ ಸುತ್ತಾಡಲು ಕರೆದಿದ್ದ. ಅದರಂತೆ ಆಕೆ ಆತನೊಂದಿಗೆ ತೆರಳಿದ್ದಳು. ಬಳಿಕ ಆತನ ಸ್ನೇಹಿತರನ್ನು ಬರಲು ಹೇಳಿದ್ದಾನೆ. ಅಲ್ಲಿಂದ ವಾಹನದಲ್ಲಿ ಆಕೆಯನ್ನು ರಂಗನಪಲ್ಕೆ ಎಂಬ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಹಾಡಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ಇನ್ನು ಅತ್ಯಾಚಾರವೆಸಗುವ ಮುನ್ನ ಅಲ್ತಾಪ್ ನ ಗೆಳೆಯ ಸವೇರಾ ರಿಚರ್ಡ್‌ 2  ಬಿಯರ್‌ ಬಾಟಲ್ ತಂದಿದ್ದ. ಅದಕ್ಕೆ ಮತ್ತು ಬರುವ  ವಸ್ತು ಸೇರಿಸಿ ಸಂತ್ರಸ್ತ ಯುವತಿಗೆ ಕುಡಿಸಿದ್ದ. ಬಳಿಕ ಅತ್ಯಾಚಾರವೆಸಗಿದ್ದಾರೆ.

ಅತ್ಯಾಚಾರವೆಸಗಿದ ಬಳಿಕ ಯುವತಿಯನ್ನು ಆರೋಪಿಗಳು ಆಕೆಯ ಮನೆಯ ಬಳಿ ಬಿಟ್ಟು ಪರಾರಿಯಾಗಿದ್ದಾರೆ.ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂತ್ರಸ್ತ ಯುವತಿಯ ಹೆತ್ತವರು ನೀಡಿದ ದೂರಿನಂತೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇನ್ನು ಘಟನೆಯ ಬಗ್ಗೆ ಉಡುಪಿ ಎಸ್ಪಿ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಕಾರ್ಕಳದಲ್ಲಿ ಯುವತಿ ಮೇಲೆ ಅತ್ಯಾಚಾರ ಘಟನೆ ಪೂರ್ವ ಯೋಜಿತ ಎಂದು ಆರೋಪಿಸಿದ್ದಾರೆ.

ಬೆಂಗಳೂರಿ‌ನಲ್ಲಿ ಈ ಬಗ್ಗ ಮಾತನಾಡಿದ  ಸುನೀಲ್ ಕುಮಾರ್, ಮತ್ತು ಬರುವ ವಸ್ತು ನೀಡಿ ಅತ್ಯಾಚಾರ ಯುವತಿಯನ್ನು ಅತ್ಯಾಚಾರ ಮಾಡಿದ್ದಾರೆ. ಲವ್ ಜಿಹಾದ್ ನಂತಹ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ ಹಿಂದೂ ಯುವತಿಯರು ಎಚ್ಚೆತ್ತುಕೊಳ್ಳಬೇಕು. ಅವರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ಇಂತಹವರಿಂದ ದೂರ ಇರಬೇಕು ಎಂದು ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗುವ ಇಂತಹ ಘಟನೆಗಳನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ  ಹಿಂದೂಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಅತ್ಯಾಚಾರ ಮಾಡುತ್ತಾರೆ, ಇಲ್ಲವೇ ಕೇಸ್ ಮುಚ್ಚಿ ಹಾಕುತ್ತಾರೆ ಎಂದು ಆರೋಪಿಸಿದ್ದಾರೆ.ಹಾವೇರಿ, ಹುಬ್ಬಳ್ಳಿ ಬಳಿಕ ಈಗ ಕಾರ್ಕಳದಲ್ಲಿ ಆಗಿದ್ದು, ಐವಾನ್ ಡಿಸೋಜಾನೇ ಬಾಂಗ್ಲಾ ದೇಶ ಮಾಡುತ್ತೇನೆ ಅಂತಾ ಹೇಳಿದ್ದಾನೆ, ಇವನ ಮೇಲೂ ಕಾಂಗ್ರೆಸ್ ನವರು ಕ್ರಮ ತೆಗೆದುಕೊಂಡಿಲ್ಲ ಎಂದು ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.

ಘಟನೆಯ ಬಗ್ಗೆ ಹಿಂದೂ ಪರ ಸಂಘಟನೆಗಳು ಕೂಡ ಆಕ್ರೋಶ ಹೊರ ಹಾಕಿದ್ದು ತಪ್ಪಿಸ್ಥರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.