ಬೆಂಗಳೂರು : ನಟ ದರ್ಶನ್ ಜೈಲು ಸೇರಿದಾಗಿನಿಂದ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಜೈಲಿನ ಊಟ ದರ್ಶನ್ ಅವರಿಗೆ ಸೇರುತ್ತಿಲ್ಲ. ಭೇದಿಯಿಂದ ಬಳಲುತ್ತಿದ್ದಾರೆ. ಅಲ್ಲದೇ ಮಲಗಲು ಹಾಸಿಗೆ ಇಲ್ಲದ ಕಾರಣ ನೆಲದಲ್ಲೇ ಮಲಗುತ್ತಿದ್ದು ನಿದ್ದೆಯಿಲ್ಲದೇ ಬಳಲಿದ್ದಾರೆ .. ಹೀಗಾಗಿ ನಟ ದರ್ಶನ್ ಪರವಾಗಿ ಅವರ ವಕೀಲರು ದರ್ಶನ್ ಗೆ ಮನೆಯೂಟ, ಮಲಗಲು ಹಾಸಿಗೆ ಹಾಗೂ ಸಮಯ ಕಳೆಯಲು ಓದಲು ಪುಸ್ತಕ ಒದಗಿಸುವಂತೆ ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.
ಮೊನ್ನೆ ಈ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಆರ್ ಕೃಷ್ಣಕಮಾರ್ ಪೀಠ ವಿಚಾರಣೆ ನಡೆಸಿತು.ಈ ಸಂದರ್ಭದಲ್ಲಿ ಇದೇ ವಾದ ಮಂಡಿಸಿದ ದರ್ಶನ್ ಪರ ವಕೀಲರು ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್ಗೆ ಮನೆ ಊಟದ ಅವಕಾಶ ನೀಡಿಲ್ಲ ಎಂದರು. ಆಗ ನ್ಯಾಯಾಧೀಶರು ಈ ಪ್ರಕರಣವನ್ನು ಕೂಡ ಇತರ ಪ್ರಕರಣಗಳಂತೆ ಪರಿಗಣಿಸಲಾಗುವುದು ಎಂದು ಹೇಳಿ ನಟ ದರ್ಶನ್ ಅವರ ರಿಟ್ ಅರ್ಜಿಯನ್ನು ಜುಲೈ 18 ಕ್ಕೆ ಮುಂದೂಡಿದ್ದರು.ಅದರಂತೆ ನಿನ್ನೆ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶರು ಇಂದು ಮಧ್ಯಾಹ್ನ 2-30ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದ್ದರು.
ಇನ್ನು ನಟ ದರ್ಶನ್ ಅವರ ರಿಟ್ ಅರ್ಜಿಗೆ ಸರ್ಕಾರ ಹಾಗೂ ತನಿಖಾಧಿಕಾರಿ ಆಕ್ಷೇಪಣೆ ಸಲ್ಲಿಸಿದ್ದರು.ಈ ವೇಳೆ ಸರ್ಕಾರ ಆಕ್ಷೇಪಣೆ ಸಲ್ಲಿಸಬಹುದು. ಆದರೆ ತನಿಖಾಧಿಕಾರಿ ಅಲ್ಲ ಎಂದು ದರ್ಶನ್ ಪರ ಹಿರಿಯ ವಕೀಲ ಕೆಎನ್ ಫಣಿಂದ್ರ ವಾದ ಮಂಡಿಸಿದರು. ಈ ವೇಳೆ ನ್ಯಾಯಾಧೀಶರು ಇಂದು ಮಧ್ಯಾಹ್ನ 2:30 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ್ದರು.
ಅದರಂತೆ ಇಂದು ಅರ್ಜಿಯ ವಿಚಾರಣೆ ನಡೆಯಿತು. .ಈ ವೇಳೆ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಮೂರ್ತಿ ಈ ಕೇಸಿನಲ್ಲಿ ನಾನು ಮಧ್ಯಂತರ ಆದೇಶ ನೀಡಲು ಬಯಸುವುದಿಲ್ಲ. ವಾದಮಂಡನೆ ಆಲಿಸಿದ ನಂತರವೇ ತೀರ್ಮಾನಿಸಬೇಕಾಗುತ್ತದೆ. ನೀವು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಅರ್ಜಿ ಸಲ್ಲಿಸುವುದು ಸೂಕ್ತ ಎನ್ನುವ ಮೂಲಕ ಸರ್ಕಾರದ ಎಸ್ಪಿಪಿ ಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿತು.
ಕೈದಿಗಳಿರುವ ಎಲ್ಲಾ ಮೂಲಭೂತ ಹಕ್ಕುಗಳು ದರ್ಶನಗೆ ಇದೆ ಸೇ. 30 ರಲ್ಲಿ ಮನೆ ಊಟ ಪಡೆಯಲು ಕೈದಿಗೆ ಅವಕಾಶವಿದೆ ಎಂದು ತಿಳಿಸಿದರು. ಪ್ರತಿದಿನವೂ ಜೈಲಿನಲ್ಲಿ 5 ಸಾವಿರ ಕೈದಿಗಳು ಊಟ ಮಾಡುತ್ತಿದ್ದಾರೆ. ಫುಡ್ ಪಾಯಿಸನ್ ಆಗಿಲ್ಲ. ಫುಡ್ ಪಾಯಿಸನ್ ಬಗ್ಗೆ ದರ್ಶನ್ ಕೂಡ ವೈದ್ಯರಿಗೆ ಹೇಳಿಲ್ಲ ಎಂದು ಸರ್ಕಾರದ ಪರ ಎಎಪಿ ಭಾನುಪ್ರಕಾಶ್ ಆಕ್ಷೇಪ ವ್ಯಕ್ತಪಡಿಸಿದರು.
ವಿಚಾರಣೆಯ ಬಳಿಕ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯ ಪೀಠವು ದರ್ಶನ್ ಅವರು ಸಲ್ಲಿಸಿದ್ದ ರಿಟ್ ಅರ್ಜಿ ಕುರಿತಂತೆ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.