ಮೈಸೂರು: ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತರೆಡು ಬಜೆಟ್ ಮಂಡಿಸುತ್ತೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈ ಕಮಾಂಡ್ ಬಿಟ್ಟ ವಿಚಾರ ಎಂದಿದ್ದಾರೆ. ಯಾರೊ ಏನೋ ಹೇಳುತ್ತಾರೆ ಎಂಬುದು ಮುಖ್ಯ ಅಲ್ಲ ನನಗೆ ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ ಎಂದ ಅವರು ಹೈಕಮಾಂಡ್ ನನಗೆ ಸಂಪೂರ್ಣ ವಿಶ್ವಾಸ ಇದೆ. ಮೈಸೂರಿನ ಜನ ಮಾತ್ರ ಅಲ್ಲ ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ. ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್ ಎಂದು ತಿಳಿಸಿದ್ದಾರೆ.
ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತರೆಡು ಬಜೆಟ್ ಮಂಡಿಸುತ್ತೇನೆ. ನನಗೆ ಹೈಕಮಾಂಡ್ ಮೇಲೆ ಸಂಪೂರ್ಣವಾದ ವಿಶ್ವಾಸ ಇದೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ನನಗೆ ಬಜೆಟ್ ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ.ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ನೀವು ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್. ಜನ ಅವಕಾಶ ಕೊಟ್ಟರೆ ಮಂಡಿಸುತ್ತೇನೆ ಎಂದು ಇದೇ ವೇಳೆ ಅವರು ಹೇಳಿದ್ದಾರೆ.











