ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 6 ದಿನಗಳ ಈಗಾಗಲೇ ಇಡಿ ಅಧಿಕಾರಿಗಳು ಬಿ ನಾಗೇಂದ್ರ ಅವರನ್ನು ಕಸ್ಟಡಿಗೆ ಪಡೆದಿದ್ದಾರೆ.ಅಲ್ಲದೇ ಇಂದು ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ಇಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ರು. ಅದರ ಬೆನ್ನಲ್ಲೇ ಇದೀಗ ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ.
89.65 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಪಾತ್ರವಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಈ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾವು ನಾಲ್ಕು ರಾಜ್ಯಗಳ 23 ಕಡೆಗಳಲ್ಲಿ ದಾಳಿಯನ್ನು ನಡೆಸಿದ್ದೇವೆ. ಅಲ್ಲದೇ 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿರೋದು ತನಿಖೆಯಲ್ಲಿ ಗೊತ್ತಾಗಿದೆ. ಅದು ಹಲವು ನಕಲಿ ಅಕೌಂಟ್ ಗಳಿಗೆ ಹೋಗಿ ಕ್ಯಾಶ್ ಆಗಿ ಮಾರ್ಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಬಸನಗೌಡ ಗದ್ದಲ್ ಮನೆಯಲ್ಲಿ ದಾಖಲೆ ಪತ್ತೆಯಾಗಿದೆ ಎಂದಿದ್ದಾರೆ.
ಇನ್ನು ಈ ಹಣವನ್ನು ಚುನಾವಣೆ ಹಾಗೂ ಐಷಾರಾಮಿ ಕಾರು ಖರೀದಿಗಾಗಿ ಬಳಕೆ ಮಾಡಿಕೊಂಡಿದ್ದಾರೆ. ಈ ದುಡ್ಡಿನಲ್ಲೇ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇಷ್ಟೇ ಅಲ್ಲದೆ ಚುನಾವಣೆಯಲ್ಲಿ ನಿಗಮದ ಹಣವನ್ನು ಮದ್ಯ ಖರೀದಿಗಾಗಿ ಬಳಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು
ಮಾಜಿ ಸಚಿವ ಬಿ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರಿಗೂ ಇಡಿ ಸಂಕಷ್ಟ ಎದುರಾಗಿದೆ. ಬಿ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದಿಂದ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಮಂಜುಳಾ ಅವರನ್ನು ಡಾಲರ್ಸ್ ಕಾಲೋನಿಯ ಅವರ ನಿವಾಸದಿಂದ ವಶಕ್ಕೆ ಪಡೆದು ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದರು. ಅದರಂತೆ ಬೆಳಗ್ಗಿನಿಂದ ಸಂಜೆಯವರೆಗೆ ಅವರನ್ನು ಇಡಿ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.ಬಳಿಕ ಅವರನ್ನು ಪುನಃ ಅವರ ಮನೆಗೆ ಬಿಟ್ಟು ಬಂದಿದ್ದಾರೆ ಎನ್ನಲಾಗಿದೆ.











