ಮನೆ Latest News ನಟ ದರ್ಶನ್ ಗೆ ಶಾಕ್ ಮೇಲೆ ಶಾಕ್; ಮನೆಯೂಟ ನೀಡಲು ಜೈಲಾಧಿಕಾರಿಗಳು ನಿರಾಕರಣೆ

ನಟ ದರ್ಶನ್ ಗೆ ಶಾಕ್ ಮೇಲೆ ಶಾಕ್; ಮನೆಯೂಟ ನೀಡಲು ಜೈಲಾಧಿಕಾರಿಗಳು ನಿರಾಕರಣೆ

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಈಗಾಗಲೇ ಅನೇಕ ಬಾರಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಮೊನ್ನೆ ದರ್ಶನ್ ಅವರ ಮನೆಯೂಟದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದರ್ಶನ್ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು. ನೀವು ಸೆಲೆಬ್ರೆಟಿ ಅನ್ನೋ ಕಾರಣಕ್ಕೆ ನಿಮಗೆ ಮನೆಯೂಟ ಕೊಡಲು ಸಾಧ್ಯವಿಲ್ಲ. ಜೈಲಿನಲ್ಲಿ ಎಲ್ಲಾ ಕೈದಿಗಳಿಗೂ ಅದೇ ಊಟವನ್ನು ಕೊಡಲಾಗುತ್ತೆ. ಅವರಿಗೆ ಯಾರಿಗೂ ಸಮಸ್ಯೆಯಾಗಿಲ್ಲ. ನಿಮಗೆ ಹೇಗೆ ಸಮಸ್ಯೆಯಾಗುತ್ತೆ ಎಂದು ಪ್ರಶ್ನೆ ಮಾಡಿತ್ತು. ಅಲ್ಲದೇ ಪೌಷ್ಟಿಕಾಂಶಯುಕ್ತ ಆಹಾರವನ್ನೇ ನೀಡಲಾಗುತ್ತೆ ಅಂತಾ ಹೇಳಿತ್ತು. ಇದರ ಜೊತೆಗೆ ಮನೆಯೂಟಕ್ಕೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಹೇಳಿತ್ತು. ಅದರಂತೆ ದರ್ಶನ್ ಪರ ವಕೀಲರು ಜೈಲು ಅಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಜೈಲಾಧಿಕಾರಿಗಳು ದರ್ಶನ್ ಅವರಿಗೆ ಶಾಕ್ ಕೊಟ್ಟಿದ್ದಾರೆ. ದರ್ಶನ್ ಅವರಿಗೆ ಮನೆಯೂಟ ನೀಡಲು ಜೈಲಾಧಿಕಾರಿಗಳು ನಿರಾಕರಿಸಿದ್ದಾರೆ.

ಮೊನ್ನೆ  ಹೈಕೋರ್ಟ್ ಗೆ ದರ್ಶನ್ ಅವರು ಸಲ್ಲಿಸಿದ್ದ ಮನೆ ಊಟದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ಈ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ತಿಳಿಸಿತ್ತು. ಇನ್ನು ಜೈಲು ಅಧಿಕಾರಿಗಳಿಗೆ  ಅರ್ಜಿ ಸಲ್ಲಿಸಲು ನಟ ದರ್ಶನ್ ಪರ ವಕೀಲರಿಗೆ ಸೂಚನೆ ನೀಡಿತ್ತು. ಅಲ್ಲದೇ ಅರ್ಜಿಯ ವಿಚಾರಣೆಯನ್ನು ಆಗಸ್ಟ್.20ಕ್ಕೆ ಮುಂದೂಡಿತ್ತು.  ಆ ಬಳಿಕ ದರ್ಶನ್ ಪರ ವಕೀಲರು ಜೈಲು ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಮನವಿಯನ್ನು ಸಲ್ಲಿಸಿದ್ದರು. ಆದರೆ ಈಗ ಜೈಲು ಅಧಿಕಾರಿಗಳು  ಜೈಲೂಟ ನೀಡಲು ನಿರಾಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯಕ್ಕಂತೂ ನಟ ದರ್ಶನ್ ಗಿಲ್ಲ ಮನೆಯೂಟ; ದರ್ಶನ್ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಯಾಕೋ ನಟ ದರ್ಶನ್ ಅವರ ಟೈಮೇ ಸರಿಯಿಲ್ಲ ಅನ್ಸುತ್ತೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದ ನಟ ದರ್ಶನ್ ಮನೆಯೂಟ ಬೇಕು ಜೈಲೂಟ ಸೆಟ್ ಆಗ್ತಿಲ್ಲ, ಆರೋಗ್ಯ ಕೈ ಕೊಡುತ್ತಿದೆ ಅಂತಾ ಕೋರ್ಟ್ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಮೊದಲಿಗೆ ಹೈಕೋರ್ಟ್ ಗೆ ಅರ್ಜಿ ಹಾಕಿದ್ರು. ಅಲ್ಲಿಂದ ಮತ್ತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಜುಲೈ 25 ರಂದು ದರ್ಶನ್ ಅರ್ಜಿ ವಜಾಗೊಂಡಿತ್ತು. ಹಾಗಾಗಿ ಮತ್ತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ತಾಂತ್ರಿಕ ಕಾರಣಗಳಿಂದ ವಾಪಾಸ್ ಪಡೆದಿದ್ದರು. ಮತ್ತೆ ನಿನ್ನೆ ಹೈಕೋರ್ಟ್ ಗೆ ಮನೆಯೂಟ, ಮಲಗಲು ಹಾಸಿಗೆ, ಓದಲು ಪುಸ್ತಕ ಪಡೆಯಲು ಅನುಮತಿ ನೀಡುವಂತೆ ಜೈಲಿನ ಅಧೀಕ್ಷಕರಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು.

ಇನ್ನು ಈ ಅರ್ಜಿಯಲ್ಲಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರು ಮತ್ತು ಕಾಮಾಕ್ಷಿಪಾಳ್ಯದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ , ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿತ್ತು. ಇಂದು ಆ ಅರ್ಜಿಯ ವಿಚಾರಣೆ ನಡೆಯಿತು. ಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕ ಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.

ಎರಡೂ ಕಡೆಯ ವಾದ ವಿವಾದವನ್ನು ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ವಿಚಾರಣೆಯನ್ನು ಆಗಸ್ಟ್ 20 ಕ್ಕೆ ಮುಂದೂಡಿದೆ.ಹಾಗಾಗಿ ಸದ್ಯಕ್ಕಂತೂ ಡಿ ಬಾಸ್ ಗೆ ಜೈಲೂಟವೇ ಫಿಕ್ಸ್ ಎಂಬಂತಾಗಿದೆ.

ಮನೆಯೂಟಕ್ಕಾಗಿ ಮತ್ತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದ ನಟ ದರ್ಶನ್ ಅಲ್ಲಿನ ವಾತಾವರಣ, ಆಹಾರ ಎಲ್ಲದಕ್ಕೂ ಹೊಂದಿಕೊಳ್ಳಲು ಆಗದೇ ಪರದಾಡುತ್ತಿದ್ದಾರೆ. ಅಲ್ಲದೇ ಅವರ ತೂಕ ಕೂಡ ಸುಮಾರು 10 ಕೆ ಜಿ ಯಷ್ಟು ಕಡಿಮೆ ಆಗಿದೆ ಎನ್ನಲಾಗುತ್ತಿದೆ. ಜೊತೆಗೆ ಜೈಲಿನ ಆಹಾರ ಸೇವನೆಯಿಂದ ಅವರಿಗೆ ಬೇಧಿ ಕಾಣಿಸಿಕೊಳ್ಳುತ್ತಿದೆ. ನಿದ್ದೆನೂ ಮಾಡೋಕೆ ಆಗುತ್ತಿಲ್ಲ. ಸಮಯ ಕಳೆಯೋದೇ ಕಷ್ಟ ಆಗುತ್ತಿದೆ. ಹಾಗಾಗಿ ಅವರಿಗೆ ಮನೆ ಊಟ, ಹಾಸಿಗೆ ಹಾಗೂ ಓದಲು ಪುಸ್ತಕ ನೀಡಬೇಕು ಎಂದು ದರ್ಶನ್‌ ವಕೀಲರು  ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು. ಅದರಂತೆ ಮ್ಯಾಜಿಸ್ಟ್ರೇಟ್  ಕೋರ್ಟ್ ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ಜುಲೈ 25 ರಂದು ವಜಾಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲ ಅರುಣ್ ಅವರು ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ್ದರು.ನಿನ್ನೆ  ಆ ಅರ್ಜಿಯ ವಿಚಾರಣೆ ನಡೆಯೋದಿತ್ತು. ಅಷ್ಟರಲ್ಲಿ ದರ್ಶನ್ ಪರ ಆ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ.

ಅದರ ಬೆನ್ನಲ್ಲೇ ಇಂದು ಮತ್ತೆ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಮತ್ತೆ ಅರ್ಜಿಯನ್ನು ಸಲ್ಲಿಸಿದ್ದಾರೆ. ದರ್ಶನ್ ಗೆ ಮನೆಯೂಟಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಮಲಗಲು ಹಾಸಿಗೆ ಕೂಡ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ಹೈಕೋರ್ಟ್  ಈ ಅರ್ಜಿಯ ವಿಚಾರಣೆ ನಡೆಸಿ ದರ್ಶನ್ ಗೆ ಮನೆಯೂಟಕ್ಕೆ ಅವಕಾಶ ಕಲ್ಪಿಸುತ್ತಾ ಅನ್ನೋದನ್ನು ಕಾದು ನೋಡ್ಬೇಕಾಗಿದೆ.