ಮನೆ Latest News ಕೊಲ್ಲಿ ಯುದ್ಧದಿಂದಾಗಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ ಭರವಸೆ

ಕೊಲ್ಲಿ ಯುದ್ಧದಿಂದಾಗಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ ಭರವಸೆ

0

ಶಿವಮೊಗ್ಗ : ಕೊಲ್ಲಿ ಯುದ್ಧದಿಂದಾಗಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ  ಕನ್ನಡಿಗರಿಗೆ ತೊಂದರೆಯಾಗದಂತೆ  ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು. ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ  ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು  ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದಿದ್ದಾರೆ.

ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ  ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ. ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.