ಬೆಂಗಳೂರು: ಐದು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಇರ್ತಾರೆ ಎಂಬ ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಅಲ್ಲಿಗೆ ಯಾವ ತರ ರಾಜಕಾರಣ ಇದೆ ನೋಡಿ.ಯಾರು ಯಾರು ಯಾವ ಹೇಳಿಕೆ ಕೊಡ್ತಾರೆ.ಆ ಹೇಳಿಕೆ ಮೇಲೆ ನೀವು ತೀರ್ಮಾನಕ್ಕೆ ಬನ್ನಿ.ಇಲ್ಲಿ ಕುಮಾರಸ್ವಾಮಿ ಹತ್ರ ಇವರದ್ದು ಯಾರದ್ದು ಏನು ನಡೆಯಲ್ಲ.ಎಫ್ಐಆರ್ ಮಾಡಿ ಬೆದರಿಸುವ ತಂತ್ರನಾ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು ಬೆದರಿಕೆ ಅಲ್ದೆ ಇನ್ನೇನು, ಎನಿದೆ ಎಫ್ಐಆರ್ ನಲ್ಲಿ? ಅದರ ಬಗ್ಗೆ ನಾನು ಚರ್ಚೆ ಮಾಡೋದು ಅನವಶ್ಯಕ. ಕಾಲವೇ ನಿರ್ಧಾರ ಮಾಡುತ್ತೆ.ಕಾಲ ಕಾಲ ಪ್ರತಿಯೊಂದಕ್ಕೂ ಉತ್ತರ ನೀಡುತ್ತೆ ಎಂದಿದ್ದಾರೆ.
ಇನ್ನು ತಮ್ಮ ವಿರುದ್ದ ಎಫ್ಐಆರ್ ಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮುಡಾ ವಿಚಾರ ಡೈವರ್ಟ್ ಮಾಡಲು ಎಫ್ಐಆರ್ ಹಾಕಲಾಗಿದೀಯಾ ಎಂಬ ಬಗ್ಗೆ ಮಾತನಾಡಿದ ಅವರು ಪ್ರತಿಯೊಂದು ಡೈವರ್ಟ್ ಮಾಡಲಿಕ್ಕೆ ನಡೆಯುತ್ತಿರೋದು.ಈ ಸರ್ಕಾರ ಎಲ್ಲವನ್ನೂ ಬಿಟ್ಟಿರುವ ಸರ್ಕಾರ.ಯಾವ ಭಯ ಭಕ್ತಿಯೂ ಇಲ್ಲ,ಗೌರವವೂ ಇಲ್ಲ.ಇದು ಬಂಡ ಸರ್ಕಾರ ಇದು.ಈ ಸರ್ಕಾರದ ಬಗ್ಗೆ ಚರ್ಚೆ ಮಾಡೋದು ಅರ್ಥ ಇಲ್ಲ. ಅದರಿಂದ ನಾನು ಹೇಳ್ತಾ ಇರೋದು. ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕಾಲವೇ ಉತ್ತರ ನೀಡುತ್ತೆ ಎಂದಿದ್ದಾರೆ.
ಸಿಎಂ ಆಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಇರ್ತಾರೆ; ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿಕೆ
ಬೆಂಗಳೂರು; ಸಿಎಂ ಆಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಇರ್ತಾರೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿಕೆ ನೀಡಿದ್ದಾರೆ.
ವಿಪಕ್ಷಗಳು ಮುಡಾ ಹಗರಣದಲ್ಲಿ ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರು ಅವರೇ ಸಿಎಂ ಆಗಿ ಐದು ವರ್ಷ ಇರ್ತಾರೆ.ಅವರ ಮೇಲೆ ಚಾಮುಂಡೇಶ್ವರಿ ತಾಯಿಯ ಅಶೀರ್ವಾದವಿದೆ.ಅವರು ಎಲ್ಲ ಸಮಸ್ಯೆಯಿಂದ ಬೇಗ ಹೊರ ಬರ್ತಾರೆ. ಅವರೇ ನಮ್ಮ ನಾಯಕರು. ಸಿದ್ದರಾಮಯ್ಯ ಅವರು ಐದು ವರ್ಷ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದಿದ್ದಾರೆ.
ಜಾತಿಗಣತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನಡೆ ಅನುಸರಿಸಬೇಕು.ಕೇಂದ್ರ ಸರ್ಕಾರ ಕೂಡ ಜಾತಿಗಣತಿ ಮಾಡಿಸುತ್ತಿದೆ. ಅವರ ವರದಿ ಬರುವರಗೆ ಸರ್ಕಾರ ಕಾಯಬೇಕು.ಕೇಂದ್ರದಿಂದ ವರದಿ ಬಂದ್ರೆ ಯಾವುದೇ ಗೊಂದಲ ಆಗುವುದಿಲ್ಲ.ಜನಗಣತಿ ಮಾಡಿಸಲು ಇನ್ನೂ ಒಂದು ವರ್ಷ ಆಗಬಹುದು. ಅಲ್ಲಿಯವರೆಗೆ ಸಿಎಂ ತಾಳ್ಮೆಯಿಂದ ಕಾಯಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಂಸದ ಡಿ ಕೆ ಸುರೇಶ್ ಸಲಹೆ ನೀಡಿದ್ದಾರೆ.