ಮನೆ Latest News ಅಡುಗೆ ಅನಿಲ ಕೊರತೆ ಬಗ್ಗೆ ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ....

ಅಡುಗೆ ಅನಿಲ ಕೊರತೆ ಬಗ್ಗೆ ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

0

ಬೆಂಗಳೂರು: “ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

“ಅಡುಗೆ ಅನಿಲ್ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿ ಜನರು, ರೈತರು ಹಾಗೂ ಹೊಟೇಲ್ ಗಳಿಗೆ ಸೌದೆ ಒಲೆ ಬಳಸಲು ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ” ಎಂದರು.

“ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು

“ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೋ ಹೇಗೋ ಈಗಾಗಲೇ ಗ್ಯಾಸ್ ಚಾಲಿತ ಆಟೋ ಬಂದ್ ಆಗಿದ್ದು, ಸಮಸ್ಯೆ ಹೆಚ್ಚುತ್ತಿದೆ” ಎಂದು ತಿಳಿಸಿದರು.