ದಾವಣಗೆರೆ: ಸಿಎಂ ಸಾಲ ಮಾಡಿರುವ ದಾಖಲೆಗಳನ್ನು ತೋರಿಸಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲ ಮಾಡುವುದರಲ್ಲಿ ದಾಖಲೆಯ ವೀರ. ಯಾರ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆ ಎನ್ನುವ ಎಲ್ಲಾ ದಾಖಲೆಗಳನ್ನು ಬಹಿರಂಗ ಮಾಡಲಿ ಎಂದಿದ್ದಾರೆ.
ವಾಸ್ತವಂಶವನ್ನು ಮರೆಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವ ಪರಿಸ್ಥಿತಿ ಮುಖ್ಯಮಂತ್ರಿಗೆ ಬರಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ ಎಷ್ಟು ಸಾಲ ಮಾಡಿದ್ದೇವು ಅವರ ಕಾಲದಲ್ಲಿ ಎಷ್ಟು ಸಾಲ ಮಾಡಿದ್ದಾರೆ ದಾಖಲೆಗಳನ್ನು ಬಹಿರಂಗ ಮಾಡಲಿ, ನಮ್ಮ ಕಾಲದಲ್ಲಿ 50 ಸಾವಿರ ಕೋಟಿ ಸಾಲ ಮಾಡಿದ್ದರೆ, ಅವರ ಅವಧಿಯಲ್ಲಿ 1 ಲಕ್ಷ 40 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಅವರೇ ಬಜೆಟ್ ನಲ್ಲಿ ಮಂಡಿಸಿದ್ದಾರೆ. ಈಗ ಇಲೆಕ್ಷನ್ ಸಂದರ್ಭದಲ್ಲಿ ಸುಳ್ಳು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಗಳಿಗೆ ಈ ಪರಿಸ್ಥಿತಿ ಬರಬಾರದಿತ್ತು. ವಾಸ್ತವಂಶವನ್ನು ಮರೆಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವ ಪರಿಸ್ಥಿತಿ ಬರಬಾರದಿತ್ತು. ವಾಸ್ತವಾಂಶ ಏನಿದೆ ಅದರ ಮೇಲೆ ಮಾತನಾಡಬೇಕು ಎಂದಿದ್ದಾರೆ.











