ಮನೆ Latest News ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿದ ಮಂಗಳೂರು ಪೊಲೀಸರು; ಇಬ್ಬರು ಆಫ್ರಿಕನ್ ಮಹಿಳೆಯು ಸೇರಿ...

ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿದ ಮಂಗಳೂರು ಪೊಲೀಸರು; ಇಬ್ಬರು ಆಫ್ರಿಕನ್ ಮಹಿಳೆಯು ಸೇರಿ 75 ಕೋಟಿ ಮೌಲ್ಯದ 37.870 ಕೆ.ಜಿ ವಶಕ್ಕೆ

0

ಮಂಗಳೂರು ;ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಪೊಲೀಸರು  ಬೇಧಿಸಿದ್ದಾರೆ. ದಕ್ಷಿಣ ಆಫ್ರಿಕಾದ ಇಬ್ಬರು ಮಹಿಳೆಯರು ಸೇರಿ 75 ಕೋಟಿ ಮೌಲ್ಯದ 37.870 ಕೆ.ಜಿ MDMA ವಶಪಡಿಸಿಕೊಂಡಿದ್ದಾರೆ.

2024 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಹೈದರ್ @ ಹೈದರ್ ಅಲಿ ಎಂಬಾತನನ್ನು ದಸ್ತಗಿರಿ ಮಾಡಿ 15 ಗ್ರಾಂ MDMA ಯನ್ನು ಸ್ವಾಧೀನಪಡಿಸಿಕೊಂಡು ಮಂಗಳೂರು ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಡ್ರಗ್ ಪೆಡ್ಲರ್ ಗಳನ್ನು ಪತ್ತೆ ಹಚ್ಚುವ ಸಲುವಾಗಿ ಪ್ರಕರಣ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕ ವರ್ಗಾಯಿಸಲಾಗಿತ್ತು. ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಕೈಗೊಂಡು ಪ್ರಕರಣದಲ್ಲಿ ಹೈದರ್ ಅಲಿ ಮತ್ತು ಇನ್ನಿತರ ವ್ಯಕ್ತಿಗಳಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದ ನೈಜೇರಿಯಾ ದೇಶದ ವಿದೇಶಿ ಪ್ರಜೆ Peter Ikedi Belonwu ಎಂಬಾತನನ್ನು ದಸ್ತಗಿರಿ ಮಾಡಿ ಆತನಿಂದ F ಕೆಟಿ ಮೌಲ್ಯದ 6.248 ಕೆಜಿ ಮಾದಕ ವಸ್ತುವಾದ MDMA ಯನ್ನು ಈ ಹಿಂದೆ ವಶಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ಬೆಂಗಳೂರಿನ ಪೆಡ್ಲರ್ Peter Ikedi Belonwu ಎಂಬಾತನಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುವ ಕಿಂಗ್ ಫಿನ್ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚುವ ಸಲುವಾಗಿ ಕಳೆದ 6 ತಿಂಗಳಿನಿಂದ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ನಿರಂತರವಾದ ತನಿಖೆ ಹಾಗೂ ಮಾಹಿತಿಯನ್ನು ಸಂಗ್ರಹಿಸಿಕೊಂಡ ಸಮಯದಲ್ಲಿ ಈ ಪ್ರಕರಣದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಹಾಗೂ ದೇಶದ ಇತರ ಕಡೆಗಳಿಗೆ ಮಾದಕ ವಸ್ತುವಾದ MDMA ಯನ್ನು ಬೃಹತ್ ಪ್ರಮಾಣದಲ್ಲಿ ವಿದೇಶಿ ಮಹಿಳಾ ಪ್ರಜೆಗಳು ವಿಮಾನ ಮಾರ್ಗದಲ್ಲಿ ಸಾಗಾಟ ಮಾಡುವ ಮಾಹಿತಿ ದೊರೆಯಿತು. ಈ ಪ್ರಕರಣದಲ್ಲಿ ಬೆಂಗಳೂರಿನ ಡ್ರಗ್ ಪಡ್ರರ್ Peter Ikedi Belonwu ಮಾದಕ ವಸ್ತುವನ್ನು ಸಾಗಾಟ ಮಾಡಿದ ಆರೋಪಿಗಳು ದಿನಾಂಕ: 14-03-2025 ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತಂತೆ ಆರೋಪಿಗಳನ್ನು ದಸ್ತಗಿರಿ ಮಾಡಲು ಮಂಗಳೂರು ಸಿಸಿಬಿ ಪೊಲೀಸರ ತಂಡಬೆಂಗಳೂರಿಗೆ ತೆರಳಿ ಆರೋಪಿಗಳ ಪತ್ತೆ ಕಾರ್ಯದಲ್ಲಿದ್ದ ಸಮಯ ದೆಹಲಿಯಿಂದ ವಿಮಾನದಲ್ಲಿ ಬಂದಿದ್ದ ದಕ್ಷಿಣ ಆಫ್ರಿಕಾ ದೇಶದ ಇಬ್ಬರು ಮಹಿಳಾ ಪ್ರಜೆಗಳಾದ ಬಂಬಾ ಫಾಂಟ(31) ಹಾಗೂ ಅಬಿಗಲಿ ಅಡೋನಿಸ್ (30) ಎಂಬವರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹತ್ತಿರದ ನೀಲಾದ್ರಿ ನಗರ ಎಂಬಲ್ಲಿ ವಶಕ್ಕೆ ಪಡೆದುಕೊಂಡು ಅವರ ವಶದಲ್ಲಿದ್ದ ಎರಡು ಟ್ರಾಲಿ ಟ್ರಾವೆಲ್ ಬ್ಯಾಗ್ ನಲ್ಲಿ ಸಾಗಾಟ ಮಾಡಿಕೊಂಡಿದ್ದ 75 ಕೋಟಿ ಮೌಲ್ಯದ 37.878 ಕೆಜಿ ಮಾದಕ ವಸ್ತುವಾದ MDMA, 4 ಮೊಬೈಲ್ ಫೋನುಗಳು, ಟ್ರಾಲಿ ಬ್ಯಾಗ್ ಗಳು-2, ಪಾಸ್ ಪೋರ್ಟ್-2,ನಗದು ಹಣ ರೂ.18,460/- ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದೆಹಲಿಯಿಂದ ಮಾದಕ ವಸ್ತುವಾದ MDMA ಯನ್ನು ಈ ರೀತಿ ವಿಮಾನದಲ್ಲಿ ಬೆಂಗಳೂರು ಹಾಗೂ ಇತರ ಕಡೆಗಳಿಗೆ ಸಾಗಾಟ ಮಾಡಿಕೊಂಡು ನೈಜೇರಿಯನ್ ಪ್ರಜೆಗಳಿಗೆ ಹಾಗೂ ಇತರ ಜನರಿಗೆ ಬೃಹತ್ ಪ್ರಮಾಣದಲ್ಲಿ ಮಾರಾಟ ಮಾಡಿಕೊಂಡು ಹಣವನ್ನು ಸಂಪಾದಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.