ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಚರ್ಚೆಯಾದ ವಿಚಾರಗಳು:
*ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು.
*ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು.
*ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.
*ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.
*ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
*ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
*ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ.
*ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸುವಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇನ್ನು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ಮಾತನಾಡಿ ನಮ್ಮ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಸರ್ಕಾರ ಗಮನಹರಿಸಬೇಕೆಂದು ನಾಳೆ ರಾಜ್ಯವ್ಯಾಪಿ ಬಂದ್ ಕೊಟ್ಟಿದ್ದವು. ಆದ್ರೆ ಈಗ ನಮ್ಮ ಸಮಸ್ಯೆ ನಮ್ಮ ಕುಂದು ಕೊರತೆಗಳನ್ನು ಸಿಎಂ ಅವು ಕೇಳಿದ್ದಾರೆ. ಹಾಗೆಯೇ ಎಸಿಎಸ್, ಕಮಿಷನರ್ ಗೆ ನಮ್ಮ ಬೇಡಿಕೆ ಕುರಿತು ವರದಿ ಕೋಡೋಕೆ ಹೇಳಿದ್ದಾರೆ. ನಮ್ಮ ಬೇಡಿಕೆ ಈಡೇರಿಸೋದಾಗಿ ಸಿಎಂ ಹೇಳಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟ ಬಂದ್ ವಾಪಸ್ ಪಡೆದಿದ್ದೇವೆ ಎಂದು ಅವರು ಹೇಳಿದ್ದಾರೆ.