ಬೆಂಗಳೂರು:ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅರೆಸ್ಟ್ ಮಾಡಲಾಗಿದೆ.
ಬುಧವಾರ ಸಂಜೆ ಪುನಿತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ರಾತ್ರಿ ಚಾಮರಾಜ ಪೇಟೆ ಪೊಲೀಸರು ಅವರನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ,
ಸಚಿವ ಜಮೀರ್ ಅಹ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪುನೀತ್ ಕೆರೆ ಹಳ್ಳಿ ವಿರುದ್ಧ ಎಫ್ ಐಆರ್
ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ಅಅವಹೇಳನಕಾರಿ ಹೇಳಿಕೆ ನೀಡಿದ್ದು ಅಲ್ಲದೇ ಧರ್ಮ ಮತ್ತು ಜಾತಿ ನಿಂದನೆ ಮಾಡಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆ ಹಳ್ಳಿ ವಿರುದ್ಧ ದೂರು ದಾಖಲಾಗಿದೆ. ಪುನೀತ್ ಕೆರೆಹಳ್ಳಿ ಅವರ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ.
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕರಾಗಿರುವ ಬಿ.ಎಸ್. ಅಶೋಕ್ ಅವರು ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ.
ನವೆಂಬರ್ 11 ರಂದು ಪುನೀತ್ ಕೆರೆ ಹಳ್ಳಿ ಅವರು ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಒಂದನ್ನು ಅಪ್ ಲೋಡ್ ಮಾಡಿದ್ದರು. ಅದರಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾಕೆ. ಇದು ಧರ್ಮ -ಧರ್ಮ ಗಳ ನಡುವೆ ದ್ವೇಷ ಬಿತ್ತುವ ಪ್ರಚೋದನಕಾರಿ ಹೇಳಿಕೆಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೇ ಪುನೀತ್ ಕೆರೆಹಳ್ಳಿ ಅವರು ಪದೇ ಪದೇ ಅವಾಚ್ಯ ಶಬ್ದ ಗಳಿಂದ ಸಚಿವರನ್ನು ನಿಂದಿಸಿದ್ದಾರೆ. ಅಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.