ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ವಿರುದ್ಧ 2 ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ನ್ನು ಎಸ್ ಐಟಿ ಅಧಿಕಾರಿಗಳು ಸಲ್ಲಿಕೆ ಮಾಡಿದ್ದಾರೆ. 42 ಬೆಂಗಳೂರಿನ 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್ ಐಟಿ ಅಧಿಕಾರಿಗಳು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.
ಶಾಸಕ ಹೆಚ್ ಡಿ ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಕೇಸು ಗಳಿಗೆ ಸಂಬಂಧಪಟ್ಟಂತೆ ದೋಷಾರೋಪಣ ಪಟ್ಟಿ ( ಚಾರ್ಜ್ ಶೀಟ್) ಅನ್ನು ಎಸ್ ಐಟಿ ಅಧಿಕಾರಿಗಳು ಬೆಂಗಳೂರಿನ 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಅಧಿಕಾರಿಗಳು 123 ಸಾಕ್ಷ್ಯಗಳು ಕಲೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಶಾಸಕ ಹೆಚ್ ಡಿ ರೇವಣ್ಣ ಹಾಗೂ ಅವರ ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್ ಐಟಿ ಅಧಿಕಾರಿಗಳು ಸಲ್ಲಿಸಿದ್ದಾರೆ. ಇನ್ನು ಈ ಪ್ರಕರಣದ ತನಿಖೆ ನಡೆಸುವ ವೇಳೆ ಎಸ್ ಐಟಿ ಅಧಿಕಾರಿಗಲು 150ಕ್ಕೂ ಅಧಿಕ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಇನ್ನು ಪ್ರಕರಣದ ಪ್ರಮುಖ ಸಾಕ್ಷಿಗಳು, ಸಂತ್ರಸ್ತರು ನೀಡಿರುವ ಹೇಳಿಕೆಗಳನ್ನು ಎಸ್ ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ದಾಖಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಹಲವು ಭಯಾನಕ ಸಂಗತಿಗಳು ಬಯಲು; ಪ್ರತಿ ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಹಲವು ಭಯಾನಕ ಸಂಗತಿಗಳು ಬಯಲು; ಪ್ರತಿ ನಾಲ್ಕು ತಿಂಗಳಿಗೊಮ್ಮೆ HIV ಟೆಸ್ಟ್ ಮಾಡಿಸಿಕೊಳ್ತಿದ್ರಂತೆ ಮಾಜಿ ಸಂಸದ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅರೆಸ್ಟ್ ಆಗಿ ಒಂದು ತಿಂಗಳು ಕಳೆದಿದೆ. ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಜುಲೈ 8ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರ ನಡುವೆ ಪ್ರಜ್ವಲ್ ವಿರುದ್ಧ ದಾಖಲಾದ ಬೇರೆ ಬೇರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಅಧಿಕಾರಿಗಳು ಈಗಾಗಲೇ ಅನೇಕ ಬಾರಿ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ ಪ್ರಜ್ವಲ್.
ಇನ್ನು ಪ್ರಜ್ವಲ್ ವಿಚಾರಣೆ ಹಲವು ಭಯಾನಕ ವಿಚಾರಗಳು ಬಯಲಾಗಿವೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅನೇಕ ಹೆಣ್ಣಕ್ಕಳೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದರಿಂದ ಅವರಿಗೆ ಭಯ ಕಾಡುತ್ತಿತ್ತು ಅನ್ನೋದು ಗೊತ್ತಾಗಿದೆ. ಹಾಗಾಗಿ ಪ್ರತೀ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆಗೆ ಮಾಡಿಸಿಕೊಳ್ಳುತ್ತಿದ್ದರು ಅನ್ನೋದು ಗೊತ್ತಾಗಿದೆ.
ಇದು ಪ್ರಜ್ವಲ್ ಹಲವು ಮಹಿಳೆಯರ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದರು ಅನ್ನೋ ಆರೋಪಕ್ಕೆ ಸಾಕ್ಷಿಯಂತಿದೆ. ಪ್ರಜ್ವಲ್ ಅವರ ವಿರುದ್ಧ ದಾಖಲಾದ 5 ಪ್ರಕರಣಗಳಿಗೆ ಸಂಬಂಧಪಟ್ಟಂತೆ ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುವಾಗ ಈ ವಿಚಾರ ಗೊತ್ತಾಗಿದೆ.
ಅಂದ್ಹಾಗೆ ಸೋಮವಾರ ಪ್ರಜ್ವಲ್ ರೇವಣ್ಣ ಅವರ ತಾಯಿ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಾಯಿ ಭೇಟಿ ಬಳಿಕ ಪ್ರಜ್ವಲ್ ಮಂಕಾಗಿದ್ದಾರೆ ಎನ್ನಲಾಗಿದೆ. ಇತ್ತ ಇಬ್ಬರೂ ಮಕ್ಕಳು ಜೈಲು ಪಾಲಾಗಿರೋದು ಹೆತ್ತವರನ್ನು ಕಂಗೆಡಿಸಿದೆ.