ಬೆಂಗಳೂರು: ದರ್ಶನ್ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ರೋಪಿ ಪವಿತ್ರಾ ಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಟಿ ಪವಿತ್ರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಆಸ್ಪತ್ರೆದೆ ದಾಖಲಿಸಲಾಗಿದೆ.ನಿನ್ನೆಯಷ್ಟೇ ಪವಿತ್ರ ಗೌಡರನ್ನು ರಾಜರಾಜೇಶ್ವರಿ ನಗರದ ಅವರ ಮನೆಗೆ ಕರೆದುಕೊಂಡು ಹೋಗಿ ಪೊಲೀಸರು ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಮನೆಯಿಂದ ಬರುತ್ತಿದ್ದಂತೆ ಪವಿತ್ರ ಗೌಡ ನಗುತ್ತಲೇ ಹೊರ ಬಂದಿದ್ದರು. ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
ಪವಿತ್ರ ಗೌಡ ಅವರನ್ನು ರಾತ್ರಿ ವೇಳೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಬೆಳಗ್ಗೆ ವಿಚಾರಣೆಗಾಗಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕರೆ ತರಲಾಗಿತ್ತು. ಇಂದು ವಿಚಾರಣೆ ನಡೆಸುತ್ತಿರುವಾಗಲೇ ಪವಿತ್ರ ಅವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಿ ಮತ್ತೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕರೆ ತರಲಾಗುತ್ತದೆ ಎನ್ನಲಾಗಿದೆ.