ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯ ತೀರ್ಪನ್ನು ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪ್ರಕಟಿಸಿದೆ. ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಇದರ ಬೆನ್ನಲ್ಲೇ ಪ್ರಕರಣದ ಮಾಸ್ಟರ್ ಮೈಂಡ್ ಎ1 ಆರೋಪಿ ಪವಿತ್ರ ಗೌಡಳ ಜಾಮೀನು ಅರ್ಜಿಯನ್ನು ಕೂಡ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ. ಇನ್ನು ಪ್ರಕರಣದ ಎ8 ಆರೋಪಿ ರವಿಶಂಕರ್ ಹಾಗೂ ಎ 13 ಆರೋಪಿ ದೀಪಕ್ ಗೆ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸದ್ಯ ಜಾಮೀನು ಪಡೆದಿರುವ ಎ8 ಆರೋಪಿ ರವಿಶಂಕರ್ ತುಮಕೂರು ಜೈಲಿನಲ್ಲಿದ್ದಾರೆ. ಅವರನ್ನು ನಾಳೆ ರಿಲೀಸ್ ಮಾಡುವ ಸಾಧ್ಯತೆಯಿದೆ. ಇನ್ನು ಇಂದು ಬೆಂಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಡಿ ಬಾಸ್ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಸರ್ಕಾರದ ಪರವಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಎ8 ರವಿಶಂಕರ್ ಡ್ರೈವರ್ ಆಗಿದ್ದರು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಆತನ ಪಾತ್ರ ಇದೆ. ಆತನ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕೆಲೆಗಳು ಪತ್ತೆಯಾಗಿವೆ. ಷಡ್ಯಂತ್ರ ಸಾಬೀತಿಗೆ ಅವರು ಒಂದೇ ಬಾರಿಗೆ ಎಲ್ಲವನ್ನು ಒಪ್ಪಂದವಾಗಬೇಕಿಲ್ಲ. ಎಲ್ಲಾ ರಹಸ್ಯಗಳೂ ಎಲ್ಲರಿಗೂ ಗೊತ್ತಿರಬೇಕೆಂದಿಲ್ಲ. ಹೀಗಾಗಿ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ8 ರವಿಶಂಕರ್, ಎ11 ನಾಗರಾಜು. ಎ12 ಲಕ್ಷ್ಮಣ್ ಗೆ ಜಾಮೀನು ನೀಡಬಾರದು. ಆದರೆ ಎ.13 ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. ಅವರ ಮೇಲೆ ಸಾಕ್ಷ್ಯ ನಾಶದ ಆರೋಪ ಮಾತ್ರವೇ ಇದೆ. ಹೀಗಾಗಿ ಅವರಿಗೆ ಜಾಮೀನು ನೀಡಬಹುದು ಎಂಬುದಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.ಕೊನೆಗೆ ವಾದ ಆಲಿಸಿದ ಕೋರ್ಟ್ ಎ13 ಆರೋಪಿ ದೀಪಕ್ ಗೆ ಜಾಮೀನು ಮಂಜೂರು ಮಾಡಿದೆ. ಅಲ್ಲದ ರವಿಶಂಕರ್ ಗೂ ಬೇಲ್ ನೀಡಿದೆ. ಆದರೇ ಎ1 ಆರೋಪಿಯಾಗಿರುವಂತ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾವಾಗಿದೆ.
ಜಾಮೀನು ನಿರೀಕ್ಷೆಯಲ್ಲಿದ್ದ ಡಿ ಬಾಸ್ ಗೆ ಭಾರೀ ನಿರಾಸೆ; ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್
ಬೆಂಗಳೂರು;ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ತೀರ್ಪು ಇಂದು ಹೊರ ಬಿದ್ದಿದೆ. ದರ್ಶನ್ ಅವರ ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ಪರ ವಿರೋಧದ ವಾದ ಆಲಿಸಿದ ಕೋರ್ಟ್ ಇಂದು ತೀರ್ಪು ನೀಡಿದೆ. ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ತೀರ್ಪು ನೀಡಿದ್ದು, ಜಾಮೀನು ಸಿಕ್ಕೇ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಭಾರೀ ನಿರಾಸೆಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಟ್ಟಂತೆ ಸರ್ಕಾರದ ಪರವಾದ ವಕೀಲರಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ಹಿರಿಯ ಕ್ರಿಮಿನಲ್ ಲಾಯರ್ ಸಿ.ನಾಗೇಶ್ ವಾದ ಮಂಡಿಸಿದ್ದರು. ಪದೇ ಪದೇ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗುತ್ತಲೇ ಇತ್ತು. ಅಲ್ಲದೇ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಅದರಂತೆ ಇಂದು ತೀರ್ಪು ಹೊರ ಬಿದ್ದಿದೆ. ದರ್ಶನ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಇಂದು ಜಾಮು ಸಿಕ್ಕೇ ಸಿಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಡಿ ಬಾಸ್ ಗೆ ನಿರಾಸೆಯಾಗಿದೆ. ಸದ್ಯಕ್ಕಂತೂ ಜೈಲೇ ಗತಿ ಅನ್ನೋ ಹಾಗಾಗಿದೆ.