ಬೆಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕುರಿತ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಸಿರುವ ವಿಚಾರದ ಬಗ್ಗೆ ಮಾಧ್ಯಮರು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಧಾನಸಬೆ ವಿಪಕ್ಷ ನಾಯಕ ಆರ್ ಅಶೋಕ್ ನಾನು ಪಕ್ಷದ ಅಧ್ಯಕ್ಷರನ್ನು ಈಗಾಗಲೇ ಭೇಟಿ ಮಾಡಿದ್ದೇನೆ, ಏನು ವರದಿ ಕೊಡಬೇಕೋ ಕೊಟ್ಟಿದ್ದೇನೆ.ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. 45 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ, ಬೆಂಗಳೂರು, ದಕ್ಷಿಣ ಕರ್ನಾಟಕ ಭಾಗದಲ್ಲಿ ನಾನೂ ಕೂಡಾ ಪಕ್ಷ ಕಟ್ಟಿದ್ದೇನೆ. ನಾನು ಪಕ್ಷದ ಅಧ್ಯಕ್ಷರನ್ನು ಈಗಾಗಲೇ ಭೇಟಿ ಮಾಡಿದ್ದೇನೆ, ಏನು ವರದಿ ಕೊಡಬೇಕೋ ಕೊಟ್ಟಿದ್ದೇನೆ. ಎರಡು ದಿನಗಳ ಹಿಂದೆ ಶಿವರಾಜ್ ಸಿಂಗ್ ಚೌಹಾನ್ ಅವರನ್ನೂ ಭೇಟಿ ಮಾಡಿದ್ದೇನೆ. ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಅಂತಿಮವಾಗಿ ಪಕ್ಷ ನಿರ್ಧಾರ ಮಾಡುತ್ತದೆ. ಕಾಂಗ್ರೆಸ್ ನಲ್ಲಿ ಪವರ್ ಗೇಮ್ ನಡೆಯುತ್ತಿದೆ ಎಂದಿದ್ದಾರೆ.
ಇದೇ ವೇಳೆ ಮುಡಾ ಮತ್ತು ವಾಲ್ಮೀಕಿ ಫಂಡ್ ಗಳನ್ನು ಸರ್ಕಾರ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಟ್ವೀಟ್ ವಿಚಾರದ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ 60% ಕಮಿಷನ್ ಸರ್ಕಾರ. ಎಲ್ಲಾ ಇಲಾಖೆಗಳಲ್ಲಿಯೂ ಅವರು 60% ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಮೈಸೂರಿನಲ್ಲಿ ಮುಡಾದಲ್ಲಿ ಮೂರು ಸಾವಿರ ಕೋಟಿಗೂ ಹೆಚ್ಚು ಹಗರಣ ಆಗಿದೆ. ವಾಲ್ಮೀಕಿ ನಿಗಮದಲ್ಲಿ ಚೆಕ್ ನಲ್ಲಿ 197 ಕೋಟಿ ಹಗರಣ ಆಗಿದೆ. ಅದೂ ಕೂಡಾ ದೊಡ್ಡ ಹಗರಣ. ಅದರ ಬಗ್ಗೆ ಸಿಬಿಐ ತನಿಖೆ ಆಗುತ್ತಿದೆ, ಇಡಿ ತನಿಖೆ ಆಗುತ್ತಿದೆ. ಈ ಎಲ್ಲಾ ಹಣ ಎಲ್ಲಿಗೆ ಹೋಗಿದೆ? ಈ ಎಲ್ಲಾ ಹಣ ಈಗ ಬೆಳಗಾವಿ ಕಾಂಗ್ರೆಸ್ ಸಮಾವೇಶಕ್ಕೆ ಹೋಗಿದೆ. ಕಾಂಗ್ರೆಸ್ ನವರು ಕರ್ನಾಟಕವನ್ನು ಲೂಟಿ ಮಾಡಿದ್ದಾರೆ. ಇದು ಹಿಂದೆಂದೂ ನೋಡದ ಕೆಟ್ಟ ಸರ್ಕಾರ ಎಂದರು.
ಹೊನ್ನಾವರದಲ್ಲಿ ಹಸುವಿನ ತಲೆ ಕಡಿದಿರುವ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇಲ್ಲವೇ ಇಲ್ಲ. ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆ ನಾವು ನೋಡಬಹುದು, ಅದೇ ರೀತಿಯ ಘಟನೆ ಮಂಗಳೂರಿನಲ್ಲಿ ಕೂಡಾ ಆಗಿದೆ. ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ಮುಸ್ಲಿಂ ಅಲ್ಪಸಂಖ್ಯಾತರು ಭಯೋತ್ಪಾದಕರಂತೆ ವರ್ತಿಸುತ್ತಿದ್ದಾರೆ. ಒಳ್ಳೆಯ ಮುಸ್ಲಿಮರು ಕೂಡಾ ಇದ್ದಾರೆ. ಆದರೆ ಹೊನ್ನಾವರದಲ್ಲಿ ಕೆಟ್ಟ ಪರಿಸ್ಥಿತಿ ಆಗಿದೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕ ಸರ್ಕಾರದಲ್ಲಿ ಗೃಹ ಸಚಿವರು ಯಾರು? ನನಗೆ ಗೊತ್ತಿಲ್ಲ. ಬೆಳಗಾವಿ ಅಧಿವೇಶನದಲ್ಲಿ ನಡೆದ ಸಿ.ಟಿ. ರವಿ ಪ್ರಕರಣವನ್ನು ಯಾರು ಹ್ಯಾಂಡಲ್ ಮಾಡುತ್ತಿದ್ದಾರೆ? ಜಿಲ್ಲಾ ಉಸ್ತುವಾರಿ ಸಚಿವರು ನಾನು ಹ್ಯಾಂಡಲ್ ಮಾಡುತ್ತಿಲ್ಲ ಎನ್ನುತ್ತಿದ್ದಾರೆ, ಲಕ್ಷ್ಮೀ ಹೆಬ್ಬಾಳ್ಕರ್ ನಾನು ಹ್ಯಾಂಡಲ್ ಮಾಡುತ್ತಿಲ್ಲ ಎನ್ನುತ್ತಿದ್ದಾರೆ. ಪರಮೇಶ್ವರ್ ನನಗೆ ಇಶ್ಯೂ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಗೃಹ ಇಲಾಖೆಯನ್ನು ಯಾರು ಹ್ಯಾಂಡಲ್ ಮಾಡುತ್ತಿದ್ದಾರೆ? ಗೃಹ ಇಲಾಖೆ ಫೈಲ್ಯೂರ್ ಆಗಿದೆ. ಕರ್ನಾಟಕ ಲೂಟಿಕೋರರ ಸರ್ಕಾರ ಆಗಿದೆ. ಸಾರ್ವಜನಿಕರ ಬಗ್ಗೆ ಯಾರಿಗೂ ಕಾಳಜಿ ಇಲ್ಲ, ಕರ್ನಾಟಕದಲ್ಲಿ ಅಭಿವೃದ್ಧಿ ಇಲ್ಲದಾಗಿದೆ. ಕೇವಲ ಲೂಟಿ ಮಾತ್ರ ನಡೆಯುತ್ತಿದೆ ಎಂದರು.