ಬೆಂಗಳೂರು: ರೆಬೆಲ್‌ಗಳ ಬಳ್ಳಾರಿ ಪಾದಯಾತ್ರೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. ಸಭೆ ಮಾಡಿದವರು ಹಾಗೂ ಹೈಕಮಾಂಡ್ ಒಪ್ಪಿಗೆ ಕೊಟ್ರೆ ನಾವು ಕೂಡ ಪಾದೆಯಾತ್ರೆಯಲ್ಲಿ ಭಾಗಿಯಾಗ್ತೀವಿ ಅಂತಾ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಪಾದಯಾತ್ರೆ ಮಾಡೋದು ಒಳ್ಳೆಯದೆ..ರಮೇಶ್ ಜಾರಕಿಹೊಳಿ, ಯತ್ನಾಳ್ ಎಲ್ಲರನ್ನೂ ಕರೆದು ಮಾತಾಡಿದ್ದಾರೆ.ಆದಷ್ಟು ಬೇಗ ಭಿನ್ನಾಭಿಪ್ರಾಯ ಮರೆತು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡ್ತೀವಿ.ವಿಪಕ್ಷವಾಗಿ ನಾವು ಜನರ ಪರ ಹೋರಾಟ ಮಾಡಬೇಕು ಎಂದರು.
ಇದೇ ವೇಳೆ ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ನಾನು ಸಿಪಿವೈ ಮನೆಗೆ ಹೋಗಿ ಬಂದಿದ್ದೆ.ನಾನು, ಬೆಲ್ಲದ್, ಅಶ್ವಥ್ ನಾರಾಯಣ್ ಎಲ್ಲರೂ ಹೋಗಿದ್ದೆವು.ಟಿಕೆಟ್ ಕೊಡೋದು ನಾವಲ್ಲ, ಎನ್‌ಡಿಎ.ಅಲ್ಲಿ ಕುಳಿತು ಟಿಕೆಟ್ ಪಡೆಯಬೇಕು.ಸಮಾಧಾನದಿಂದ ಇರುವಂತೆ ನಾವು ಹೇಳಿದ್ದೇವೆ.ಬಂಡಾಯ ಸ್ಪರ್ಧೆ ಮಾಡೋದು ಸರಿಯಲ್ಲ.ತೀರ್ಮಾನ ಕೇಂದ್ರ ನಾಯಕರದ್ದು.ಸಿಂಗಲ್ ಅಭ್ಯರ್ಥಿ ಹಾಕಲು ನಮ್ಮ ತೀರ್ಮಾನ ಎಂದಿದ್ದಾರೆ.
ಅಂದ್ಹಾಗೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಬಿಜೆಪಿಯ ಉಸ್ತುವಾರಿಗಳ ನೇಮಕ ವಾಗಿದೆ. ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉಸ್ತುವಾರಿಗಳ ನೇಮಕವಾಗಿದೆ. ಅದರಂತೆ ಉಸ್ತುವಾರಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.33 ಸಂಘಟನಾತ್ಮಕ ಜಿಲ್ಲೆಗಳಿಗೆ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಹಾವೇರಿ, ಹುಬ್ಬಳ್ಳಿ, ಧಾರವಾಡ, ಗದಗ, ರಾಮನಗರ, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಪಿ ರಾಜೀವ್ ಉಸ್ತುವಾರಿಯಾಗಿ ನೇಮಿಸಲಾಗಿದೆ. ಇನ್ನು ಬೀದರ್, ಕಲ್ಬುರ್ಗಿ ನಗರ ಮತ್ತು ಗ್ರಾಮಾಂತರ, ಯಾದಗಿರಿಗೆ ಡಾ. ಶೈಲೇಂದ್ರ ಬೆಲ್ದಾಳೆ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗೆ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.ಕೊಡಗು, ದಕ್ಷಿಣ ಕನ್ನಡ, ಉಡುಪಿಗೆ ಮಾಜಿ ಎಂಎಲ್ಸಿ ಕ್ಯಾ. ಗಣೇಶ್ ಕಾರ್ಣಿಕ್ ಅವರಿಗೆ ಉಸ್ತುವಾರಿ ವಹಿಸಲಾಗಿದೆ.
ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿಗೆ ಎನ್ ರವಿಕುಮಾರ್ ಉಸ್ತುವಾರಿಯಾಗಿ ನೇಮಕವಾದ್ರೆ , ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗೆ ಶಾಸಕ ಮಹೇಶ್ ತೆಂಗಿನಕಾಯಿ ಉಸ್ತುವಾರಿಯಾಗಿ ಆಯ್ಕೆಯಾಗಿದ್ದಾರೆ.ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡಕ್ಕೆ ಶಾಸಕ ಚನ್ನಬಸಪ್ಪ ಉಸ್ತುವಾರಿಯಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ. ಅಲ್ಲದೇ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ.
ಇದರ ಮಧ್ಯೆ ಆರ್ ಎಸ್ ಎಸ್ ಕಚೇರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದ್ದಾರೆ.ವಿಜಯೇಂದ್ರ ನಿರ್ಗಮನದ ಬಳಿಕ ಕೇಶವಕೃಪಾಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕೊಟ್ಟಿದ್ದಾರೆ.ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್ ಎಸ್ ಎಸ್ ಕಚೇರಿ ಕೇಶವಕೃಪಾಕ್ಕೆ ಬಿ ಎಲ್ ಸಂತೋಷ್ ಭೇಟಿ ನೀಡಿದ್ದಾರೆ.ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳ ನಡುವೆಯೇ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್ ಎಸ್ ಎಸ್ ಕಚೇರಿ ಕೇಶವಕೃಪಾಕ್ಕೆ ಭೇಟಿ ನೀಡಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿದ್ದಾರೆ.ಸೌಹಾರ್ದಯುತವಾಗಿ ವಿಜಯೇಂದ್ರ ಭೇಟಿ ಮಾಡಿದ್ದಾರೆ.