ಮನೆ ಪ್ರಸ್ತುತ ವಿದ್ಯಮಾನ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೌನ ಮುರಿದ ಮತ್ತೋರ್ವ ನಟಿ; ದರ್ಶನ್ ಸರ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೌನ ಮುರಿದ ಮತ್ತೋರ್ವ ನಟಿ; ದರ್ಶನ್ ಸರ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ ಎಂದ ರಚಿತಾ ರಾಮ್

0

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ತಾರೆಯರು ತುಟಿ ಪಿಟಿಕ್ ಅನ್ನುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಲೇ ಇದೆ. ಈ ಕೇಸ್ ನಲ್ಲಿ ಮೊದಲ ಧೈರ್ಯವಾಗಿ ಧ್ವನಿ ಎತ್ತಿದವರು ಎಂದ್ರೆ ಅದು ನಟಿ ರಮ್ಯಾ ಅವರು. ಆ ಬಳಿಕ ಕಿಚ್ಚ ಸುದೀಪ್, ರಿಯಲ್ ಸ್ಟಾರ್ ಉಪೇಂದ್ರ, ಹಿರಿಯ ನಟಿ ಉಮಾಶ್ರೀ ಹೀಗೆ ಒಬ್ಬೊಬ್ಬರಾಗಿ ಮಾತನಾಡಿದ್ದಾರೆ. ಇದೀಗ ಸ್ಯಾಂಡಲ್ ವುಡ್ ಬಹು ಬೇಡಿಕೆಯ ಹೀರೋಯಿನ್ ರಚಿತಾ ರಾಮ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ್ದಾರೆ. ಈ ಬಗ್ಗೆ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಅದರಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ.

 

 

ನಮಸ್ಕಾರ

ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದಾನೆ.ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..!

ಮೊದಲನೇಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ. ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ನಟ ಉಪೇಂದ್ರ ಹೇಳಿದ್ದೇನು?

ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ ….. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJustice Reforms ) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಈ ರೀತಿಯಾಗಿ ನಟ ಉಪೇಂದ್ರ ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ನಿನ್ನೆ ನಟ ಸುದೀಪ್ ಹೇಳಿದ್ದೇನು?

ಇನ್ನು ಈ ಪ್ರಕರಣದ ಬಗ್ಗೆ  ಪ್ರತಿಕ್ರಿಯೆ ನೀಡಿದ್ದ ಕಿಚ್ಚ ಸುದೀಪ್ ದರ್ಶನ್ ಅವರನ್ನು ಬ್ಯಾನ್ ಮಾಡ್ಬೇಕು ಅನ್ನಲು ನಾವ್ಯಾರು? ಇಲ್ಲಿ ಬ್ಯಾನ್ ಆಗ್ಬೇಕು ಅನ್ನೋದಕ್ಕಿಂತ ಮುಖ್ಯವಾಗಿ ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು ಅದು ಮುಖ್ಯ ಎಂದಿದ್ದಾರೆ. ಅಲ್ಲದೇ ಕೇಸ್ ನಿಂದ ಅವರು ಹೊರಗೆ ಬಂದರೆ ಬ್ಯಾನ್ ಅನ್ನೋದು ಬರೋದೇ ಇಲ್ಲ ಎಂದಿದ್ದರು. ಅಲ್ಲದೇ ಇಲ್ಲಿ ಬ್ಯಾನ್ ಮಾಡೋದು ಮುಖ್ಯ ಅಲ್ಲ. ಬದಗಲಾಗಿ ನೊಂದವರಿಗೆ ನ್ಯಾಯ ಸಿಗಬೇಕು ಅನ್ನೋದು ಮುಖ್ಯ. ಫಿಲ್ಮ್ ಚೇಂಬರ್ ನ ಮುಖ್ಯ ಉದ್ದೇಶ ಕೂಡ ನೊಂದವರಿಗೆ ನ್ಯಾಯ ಸಿಗಬೇಕು ಅನ್ನೋದು.ಇಂತಹ ವಿಚಾರದಲ್ಲಿ ಪರ ವಿರೋದ ಮಾತನಾಡೋದು ತಪ್ಪಾಗುತ್ತೆ.ರೇಣುಕಾಸ್ವಾಮಿ ಕುಟುಂಬಕ್ಕೆ,ಅವರ ಮಗುವಿಗೆ ನ್ಯಾಯ ಸಿಗಬೇಕು ಎಂದು ಸುದೀಪ್ ಹೇಳಿದ್ದರು.