ಮನೆ Latest News ಆಡಳಿತ ಪಕ್ಷದ ಆಂತರಿಕ ಕಚ್ಚಾಟ, ಸಿಎಂ ಕುರ್ಚಿಗೆ ಪೈಪೋಟಿ ಹೆಚ್ಚಾಗುತ್ತಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

ಆಡಳಿತ ಪಕ್ಷದ ಆಂತರಿಕ ಕಚ್ಚಾಟ, ಸಿಎಂ ಕುರ್ಚಿಗೆ ಪೈಪೋಟಿ ಹೆಚ್ಚಾಗುತ್ತಿದೆ; ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌

0

ಬೆಂಗಳೂರು; ಆಡಳಿತ ಪಕ್ಷದ ಆಂತರಿಕ ಕಚ್ಚಾಟ, ಸಿಎಂ ಕುರ್ಚಿಗೆ ಪೈಪೋಟಿ ಹೆಚ್ಚಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ತಂಡಗಳಲ್ಲಿ ದೆಹಲಿ ಕ್ಯಾಂಪ್ ಮಾಡುತ್ತಿದ್ದಾರೆ. ಇವರು ನಮ್ಮ ರಾಜ್ಯದ ಶಾಸಕರೋ ಅಥವಾ ದೆಹಲಿ ರಾಜ್ಯದ ಶಾಸಕರೋ ಎಂಬ ರೀತಿ ಕಾಂಗ್ರೆಸ್ ಶಾಸಕರು ನಡೆದುಕೊಳ್ಳುತ್ತಿದ್ದಾರೆ. ಆಡಳಿತ ಕುಸಿದು, ಭ್ರಷ್ಟಾಚಾರ ಮಿತಿಮೀರಿದೆ. ಧಾರವಾಡದಲ್ಲಿ ಪೊಲೀಸರು ಅಮಾಯಕ ವಿದ್ಯಾರ್ಥಿಯನ್ನು ಡ್ರಗ್ ಕೇಸ್ ನಲ್ಲಿ ಸಿಲುಕಿಸಿದ್ದಾರೆ. ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ತಾಯಿಯನ್ನು ಪೀಡಿಸಿ ಹಣ ಪಡೆದಿದ್ದಾರೆ. ಭ್ರಷ್ಟಾಚಾರ ಎಷ್ಟು ಕೀಳು ಮಟ್ಟಕ್ಕೆ ಹೋಗಿದೆ ಎಂಬುದಕ್ಕೆ ಇದು ಸಾಕ್ಷಿ. ಆತ್ಮಹತ್ಯೆ ಮಾಡಿಕೊಡಿರುವ ಆದಿತ್ಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಸರ್ಕಾರ ಕೊಡಬೇಕು. ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ಅಲ್ಪಸಂಖ್ಯಾತರಿಗೆ ಅನುದಾನ ಘೋಷಿಸಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಹಿಂದೂಗಳು ಹಾಗಾದರೆ ಕಾಂಗ್ರೆಸ್ ಗೆ ಮತ ಹಾಕಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪದೇ ಪದೇ ಅಲ್ಪಸಂಖ್ಯಾತರ ಓಲೈಕೆ ಯಾಕೆ?. ಸಿದ್ಧರಾಮಯ್ಯ ಸರ್ಕಾರದಿಂದ ಹಿಂದೂಗಳ ಅಪಮಾನ ಸಹಿಸಲು ಸಾಧ್ಯವಿಲ್ಲ. ಜಲಜೀವನ್ ಮಿಷನ್ ನಲ್ಲಿ ರಾಜ್ಯ ಸರ್ಕಾರದ ವೈಫಲ್ಯದಿಂದ 16 ಸಾವಿರ ಕೋಟಿ ರೂ ಖೋತಾ ಎಂಬ ಕೇಂದ್ರ ಸಚಿವ ವಿ. ಸೋಮಣ್ಣ ಆರೋಪ ವಿಚಾರದ ಬಗ್ಗೆ ಮಾತನಾಡಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಲೆಂದೇ ಒಬ್ಬ ಕ್ಯಾಬಿನೆಟ್ ಸಚಿವರನ್ನು ನೇಮಕ ಮಾಡಲಿ. ಮೂರು ವರ್ಷಗಳಲ್ಲಿ ಆರೋಪ ಬಿಟ್ಟು ಬೇರೆ ಏನು ಕೆಲಸ ರಾಜ್ಯ ಸರ್ಕಾರ ಮಾಡಿದೆ?. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ಭರವಸೆ ಕೊಟ್ಟು ಆರು ತಿಂಗಳಾಯಿತು. ಇನ್ನೂ ಕೂಡಾ ಯಾವುದೇ ಹಣ ಬಿಡುಗಡೆ ಆಗಿಲ್ಲ. ಸರ್ಕಾರಿ ನೌಕರರಿಗೆ ಮೂರು ತಿಂಗಳಿನಿಂದ ವೇತನ ಆಗಿಲ್ಲ. ಕಾಂಟ್ರಾಕ್ಟರ್ ಗಳು ಬೇರೆ ರಾಜ್ಯಕ್ಕೆ ಓಡಿ ಹೋಗುವ, ಆತ್ಮಹತ್ಯೆ ಮಾಡಿಕೊಳ್ಳುವ ಕೆಲಸ ಅಗುತ್ತಿದೆ.

ಕೇಂದ್ರ ಸರ್ಕಾರದ ಅಂಕಿ ಅಂಶಗಳನ್ನು ಒಂದು ಕಡೆ ರಾಜ್ಯ ಸರ್ಕಾರ ಇಟ್ಟುಕೊಳ್ಳಲಿ. ಮೂರು ವರ್ಷಗಳಲ್ಲಿ ನೀವೇನು ಮಾಡಿದ್ದೀರಿ ಅಂತಾ ವಿವರ ಕೊಡಿ ಎಂದಿದ್ದಾರೆ.