ಮನೆ Latest News ಪ್ರಚೋದನಕಾರಿ ಪೋಸ್ಟ್ ಗಳ ಮೇಲೆ ರಾಜ್ಯ ಸರ್ಕಾರದ ಹದ್ದಿನ ಕಣ್ಣು: ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...

ಪ್ರಚೋದನಕಾರಿ ಪೋಸ್ಟ್ ಗಳ ಮೇಲೆ ರಾಜ್ಯ ಸರ್ಕಾರದ ಹದ್ದಿನ ಕಣ್ಣು: ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಭದ್ರತಾ ಸಭೆ

0

ಬೆಂಗಳೂರು; ಭಾರತ ಹಾಗೂ ಪಾಕ್ ಕದನ ಹಿನ್ನೆಲೆ ಫೇಕ್ ನ್ಯೂಸ್, ಫೇಕ್ ಪೋಸ್ಟ್ ಗಳು ಪ್ರಚೋದನಕಾರಿ ಪೋಸ್ಟ್ ಗಳ ಪರಿಶೀಲನೆ ಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಆಂತರಿಕ ಭದ್ರತೆ ಹಾಗೂ ಸೈಬರ್ ಸೆಕ್ಯುರಿಟಿ ಅವಲೋಕನಕ್ಕೆ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯಿತು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಫ್ಯಾಕ್ಟ್ ಚೆಕ್ ಘಟಕಗಳನ್ನು ಮತ್ತಷ್ಟು ಚುರುಕುಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು .ಪ್ರಣಬ್ ಮೋಹಂತಿ ಸೇರಿ ಆಂತರಿಕ ಭದ್ರತಾ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು, ಐಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ ಭಾಗಿಯಾಗಿದ್ದರು.

ಇನ್ನು ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಜಿಲ್ಲೆಯ ಡಿಸಿ, ಎಸ್ಪಿ, ಪೊಲೀಸ್ ಆಯುಕ್ತರ ಜೊತೆ  ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ರು.ಕಾನೂನು ಸುವ್ಯವಸ್ಥೆ ಕುರಿತು ಮೀಟಿಂಗ್ ನಡೆಯಲಿರುವ ಸಿಎಂ ಮೀಟಿಂಗ್ ನಡೆಸಿದ್ರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಮೀಟಿಂಗ್ ನಡೆಯಿತು.

ಭಾರತದ‌ ಹಲವು ನಗರಗಳನ್ನ ಗುರಿಯಾಗಿಸಿ ಪಾಕಿಸ್ತಾನ ದಾಳಿ ಮಾಡುತ್ತಿದೆ. ಡ್ರೋನ್ ಗಳ ಮೂಲಕ ಪಾಕಿಸ್ತಾನ ದಾಳಿ ಮಾಡುತ್ತಿದ್ದು, ಮುನ್ನಚ್ಚರಿಕಾ ಕ್ರಮವಾಗಿ ರಾಜ್ಯದಲ್ಲೂ ಸರ್ಕಾರ ಕಟ್ಟೆಚ್ಚರ ವಹಿಸಿದೆ. ಡ್ಯಾಮ್ ಗಳು, ಪ್ರವಾಸಿ ತಾಣಗಳು, ಜನನಿಬಿಡ, ಕರಾವಳಿ ಪ್ರದೇಶಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಲು ಮೇಲೆ ಹದ್ದಿನ ಕಣ್ಣಉ ಇಡಲಾಗಿದೆ. ಇನ್ನು ಸಿಎಂ ನಡೆಸಿದ ಮೀಟಿಂಗ್ ನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲನಿ ರಜನೀಶ್, ಡಿಜಿ ಐಜಿಪಿ, ಐಡಿಪಿಆರ್, ಅಗ್ನಿ ಶಾಮಕ ದಳ ಕಮಿಷನರ್ ಸೇರಿ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಈ ವೇಳೆ ಕಾನೂನು ಸುವ್ಯವಸ್ಥೆಯ ಬಗ್ಗೆ ಸಿಎಂ ಹಿರಿಯ ಪೊಲೀಸ್ ಅಧಿಕಾರಿಗಳಿಂದ‌ ಸ್ಪಷ್ಟ ಮಾಹಿತಿ  ಪಡೆದ್ರು.ಕರಾವಳಿ ಭಾಗದಲ್ಲಿ ಹೆಚ್ಚಿನ ಬಿಗಿ ಭದ್ರತೆ ವಹಿಸುವಂತೆ ಕರಾವಳಿ ಗಸ್ತು ಪಡೆಗಳು ಹೆಚ್ಚು ಎಚ್ಚರಿಕೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದ್ರು.ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಸೂಚನೆ ನೀಜಿದ್ರು. ಪ್ರವಾಸಿ ತಾಣಗಳಲ್ಲಿ ಭದ್ರತೆಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ತಿಳಿಸಿದ್ರು.ಆಹಾರ ಧಾನ್ಯ ಗಳ ಸಂಗ್ರಹದ ಪ್ರಮಾಣ ಸೂಕ್ತವಾಗಿರುವಂತೆ ನೋಡಿಕೊಳ್ಳುವುದು. ಆಸ್ಪತ್ರೆಗಳಲ್ಲಿ ಹೆಚ್ಚಿನ ಅಗತ್ಯ ಔಷಧಗಳ ಶೇಖರಣೆ ಕಡೆ ಗಮನ .ಫೇಕ್ ಪೋಸ್ಟ್ ಗಳು, ಫೇಕ್ ನ್ಯೂಸ್ ಗಳನ್ನು ಹರಡುವವರ ವಿರುದ್ದ ಕಟ್ಟುನಿಟ್ಟಿನ ಕಾನೂನು ಕ್ರಮ ವಹಿಸಲು ತಿಳಿಸಿದ್ದಲ್ಲದೇ ಜನಸಂದಣಿ ಹೆಚ್ಚಾಗಿ ಸೇರುವ ಪ್ರದೇಶ, ಕಾರ್ಯಕ್ರಮಗಳ ಮೇಲೆ ಹದ್ದಿನ ಕಣ್ಣಿಡಲು‌ ಸಿಎಂ ಸೂಚನೆ ನೀಡಿದ್ರು.

ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ  ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಅಂತಾ ಅಧಿಕಾರಿಗಳಿಗೆ ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ರು. ಅಲ್ಲದೇ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಸಿಎಂ ಸಿದ್ದರಾಮಯ್ಯ ಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ .ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ ನೀಡಿ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಿ  ಎಂದು ಅಧಿಕಾರಿಗಳಿಗೆ ಖಡಕ್ ಆಗಿ ಸೂಚಿಸಿದ್ದರು.

ಇನ್ನು ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸಿಎಂ ಸೂಚನೆ ನೀಡಿದರು.ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ.ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದು ಹಿರಿಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.