ಮನೆ Latest News ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸಿಐಡಿ ತನಿಖೆಗೆ ವಹಿಸಿ ರಾಜ್ಯ...

ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ

0

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ದಾಖಲಾದ ಎರಡನೇ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

 ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ನನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ ಬೆನ್ನಲ್ಲೇ ಪೊಲೀಸರು ಸೂರಜ್ ಅವರನ್ನು ಅರೆಸ್ಟ್ ಮಾಡಿದ್ದರು. ಅಲ್ಲದೇ ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು. ಅಲ್ಲದೇ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಅವರನ್ನು ತಮ್ಮ ಕಸ್ಟಡಿಗೆ ಪಡೆದಿದ್ದರು.

ಇದಾದ ಬೆನ್ನಲ್ಲೇ  ಸೂರಜ್ ರೇವಣ್ಣ ಅವರ ಪರವಾಗಿ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತನ ವಿರುದ್ಧ ನೀಡಿದ್ದ ಸೂರಜ್ ಆಪ್ತ ನಾಪತ್ತೆಯಾಗಿದ್ದ ಶಿವಕುಮಾರ್ ಎಂಬಾತ ಪ್ರತ್ಯಕ್ಷವಾಗಿ ಸೂರಜ್ ವಿರುದ್ಧವೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಡಾ.ಸೂರಜ್ ರೇವಣ್ಣ  ಆಪ್ತ  3 ವರ್ಷಗಳ ಹಿಂದೆ  ನನ್ನ ಮೇಲೂ ಸೂರಜ್ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದು ಅದರಂತೆ ಎಫ್‌ಐಆರ್ ದಾಖಲಾಗಿತ್ತು. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377, 342, 506ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ಜೂನ್.22ರಂದು ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮೊದಲ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಜೂನ್.23ರಂದು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿ ಆದೇಶಿಸಿತ್ತು. ಇದೀಗ ಎರಡನೇ ಪ್ರಕರಣವನ್ನು  ಕೂಡ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದು  ಸೂರಜ್ ರೇವಣ್ಣಗೆ ಒಂದರ ಮೇಲೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.