ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರೆಸ್ಟ್ ಜೈಲು ಸೇರಿದ್ದ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರನ್ನು ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದರು. ಇಂದಿಗೆ ಅವರ ಪೊಲೀಸ್ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆ ಕೋರ್ಟ್ ಗೆ ಹಾಜರುಪಡಿಸಲಾಯಿತು.
ಈ ವೇಳೆ ಪೊಲೀಸರು ಸೂರಜ್ ಅವರನ್ನು ಇನ್ನೂ 5 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ರು.ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಅವರ ಪೊಲೀಸ್ ಕಸ್ಟಡಿಯ ಅವಧಿಯನ್ನು ಎರಡು ದಿನಗಳ ಕಾಲ ವಿಸ್ತರಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.
ಪ್ರಕರಣದ ವಿವರ;
ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಜೂನ್ 22 ರಂದು ಹೊಳನರಸೀಪುರ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದರು. ಪೊಲೀಸ್ ಮಹಾ ನಿರ್ದೇಶಕರು, ಗೃಹಸಚಿವರಿಗೂ ದೂರು ಸಲ್ಲಿಸಿದ್ದರು.ಇದರ ಬೆನ್ನಲ್ಲೇ ಸೂರಜ್ ಆಪ್ತ ಶಿವಕುಮಾರ್ ದೂರದಾರನೇ ವಿರುದ್ಧವೇ ದೂರು ದಾಖಲಿಸಿದ್ದರು.ಡಾ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ರಿಂದ ಪೊಲೀಸರಿಗೆ ದೂರು ನೀಡಿದ್ದರು. ಲೈಂಗಿಕ ದೌರ್ಜನ್ಯ ಮಾಡಿರೊದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿದ್ದರು.
ದೂರಿನಲ್ಲಿ ಘಟನೆ ಬಗ್ಗೆ ವಿವರಿಸಿದ್ದರು.. ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ.ನೀನೇ ಹೋಗಿ ಬಾಸ್ ಅನ್ನು ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ . ಹಾಗೇ ಹೋದವನು ವಾಪಾಸ್ ಬಂದು ಬಳಿಕ ಬ್ಲಾಕ್ ಮೇಲ್ ಮಾಡಿರೋದಾಗಿ ಶಿವಕುಮಾರ್ ದೂರು ಕೊಟ್ಟಿದ್ದರು.
ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ.ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು.ನೀನು ನಿಮ್ಮ ಬಾಸ್ ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ದ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದರುಈ ವಿಚಾರವನ್ನು ನಾನು ನಮ್ಮ ಬಾಸ್ ಗೆ ತಿಳಿಸಿದೆ.ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು.ನಾನೇನು ತಪ್ಪು ಮಾಡಿಲ್ಲ,ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದ್ರು ಎಂದು ದೂರಿನಲ್ಲಿ ಪ್ರಸ್ತಾಪ ಮಾಡಿದ್ದರು.
ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್ ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದರು.. ಮೆಡಿಕೊ ಲೀಗಲ್ ಕೇಸ್ ಸೀಲ್ ಇರೊ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ.ಐದು ಕೋಟಿ ಬಳಿಕ ಮೂರು ಕೋಟಿ ,ಅಥವಾ ಕಡೆಗೆ ಎರಡೂವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ ಎಂದಿದ್ದರು.ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ ಬಗ್ಗೆ ದೂರು ನೀಡಿದ್ದರು.
ಇದಾದ ಬೆನ್ನಲ್ಲೇ ಪೊಲೀರು ಸೂರಜ್ ರೇವಣ್ಣ ಅವರನ್ನು ಅರೆಸ್ಟ್ ಮಾಡಿದ್ದರು. ಸೂರಜ್ ರೇವಣ್ಣ ಅರೆಸ್ಟ್ ಆಗುತ್ತಿದ್ದಂತೆ ಶಿವಕುಮಾರ್ ನಾಪತ್ತೆಯಾಗಿದ್ದರು. ವಿಚಾರಣೆ ವೇಳೆ ಸೂರಜ್ ಶಿವಕುಮಾರ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ನಾಪತ್ತೆಯಾಗಿ ಯಾರ ಕೈಗೆ ಸಿಗಿದಿದ್ದ ಶಿವಕುಮಾರ್ 2 ದಿಗಳ ದಿಢೀರ್ ಪ್ರತ್ಯಕ್ಷವಾಗಿ ಸೂರಜ್ ವಿರುದ್ಧವೇ ನನ್ನ ಮೇಲೆ ಸೂರಜ್ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ದೂರು ಕೊಟ್ಟಿದ್ದರು. ಹಾಗಾಗಿ ಇದೀಗ ಸೂರಜ್ ವಿರುದ್ಧ ಎರಡು ಪ್ರಕರಣ ದಾಖಲಾಗಿದೆ.