ಮನೆ Latest News ತುಂಗಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಿತ್ತು ಹೋಗಿರೋ ವಿಚಾರ ;ನಾಳೆ ತುಂಗಭದ್ರಾ ಜಲಾಶಯಕ್ಕೆ‌ ಬಿ...

ತುಂಗಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಿತ್ತು ಹೋಗಿರೋ ವಿಚಾರ ;ನಾಳೆ ತುಂಗಭದ್ರಾ ಜಲಾಶಯಕ್ಕೆ‌ ಬಿ ವೈ ವಿಜಯೇಂದ್ರ ಭೇಟಿ

0

ಬೆಂಗಳೂರು; ತುಂಗಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ ಆಗಿದ್ದು, ನಾಳೆ ತುಂಗಭದ್ರಾ ಜಲಾಶಯಕ್ಕೆ‌ ಬಿವೈ ವಿಜಯೇಂದ್ರ ಭೇಟಿ ನೀಡಿದರು. ನಾಳೆ ಮಧ್ಯಾಹ್ನ 12-30ಕ್ಕೆ ತುಂಗಭದ್ರಾ ಡ್ಯಾಮ್ ವೀಕ್ಷಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಲಿದ್ದಾರೆ. ಈ ವೇಳೆ ಡ್ಯಾಮ್ ನ ಕ್ರಸ್ಟ್ ಗೇಟ್ ವೀಕ್ಷಿಸಿ ಅಧಿಕಾರಿಗಳಿಂದ ವಿಜಯೇಂದ್ರ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ಕಾಲ ಕಾಲಕ್ಕೆ ಸಮಸ್ಯೆಗಳನ್ನು ಸರಿಪಡಿಸುತ್ತಿದ್ದರೆ ಹೀಗಾಗುತ್ತಿರಲಿಲ್ಲ- ಸಂಸದ ಬಸವರಾಜ್ ಬೊಮ್ಮಾಯಿ

ಇನ್ನು ಡ್ಯಾಮ್ ನ ಕ್ರಸ್ಟ್ ಗೇಟ್ ಕಿತ್ತು ಹೋಗಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ ತುಂಗಭದ್ರಾ ಡ್ಯಾಂ ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿರುವಂಥದ್ದು.ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ.ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು.ಸಮಾನಾಂತರವಾದ ಡ್ಯಾಂ ಕಟ್ಟಬೇಕು ಅಂತ ನಮ್ಮ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು.ಡ್ಯಾಂ ಮ್ಯಾನೇಜ್ ಮೆಂಟ್ ಕಮಿಟಿ ಇರುತ್ತದೆ, ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟಿರ್ತಾರೆ.ಅವರು ರಾಜ್ಯಕ್ಕೆ ಸಲಹೆ ಕೊಡ್ತಾರೆ, ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು.ಆದರೆ ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನ್ಸುತ್ತೆ.ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರ್ತಿರಲಿಲ್ಲ.ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು.ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು.ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು.ಸರ್ಕಾರದ ನಿರ್ಲಕ್ಷ್ಯತನದಿಂದಲೇ ಹೀಗೆ ಆಗಿರಬಹುದು.ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ.ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು.ನೋಡೋಣ ಗೊತ್ತಾಗುತ್ತದೆ ಏನಾಗಿದೆ ಅಂತಾ.ಡ್ಯಾಂನಲ್ಲೇ ಇಂಜಿನಿಯರ್ ಗಳು, ತಾಂತ್ರಿಕ ತಜ್ಞರು ಇದ್ದರು.ಅವರೆಲ್ಲ ಮುಂಜಾಗ್ರತಾ ಕ್ರಮ ತಗೋಬೇಕಿತ್ತು.ಈ ವರ್ಷ ಅತೀ ಹೆಚ್ಚು ಮಳೆ ಬರುತ್ತೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ರು.ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು.ಆದ್ರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ ಎಂದರು,

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಡ್ಯಾಂಗೆ ಈ ಸ್ಥಿತಿ; ವಿಪಕ್ಷ ನಾಯಕ ಆರ್ ಅಶೋಕ್

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ  ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದು ಬಿದ್ದಿದೆ  ಎಂದು ಆರೋಪಿಸಿದ್ದಾರೆ.ಡ್ಯಾಂನ ಹೊರ ಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ.ಕಳೆದ ವರ್ಷವೆಲ್ಲಾ ಬರಗಾಲದಿಂದ ತತ್ತರಿಸಿದ್ದ ರೈತರು ,ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ೨ ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ಹೀಗಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈಗ ಬಿತ್ತನೆಯಾಗಿರುವ ಒಂದು ಬೆಳೆಯೂ ಸಹ ಕೈತಪ್ಪಬಹುದು ಎಂಬ ಆತಂಕದಲ್ಲಿದ್ದಾರೆ.ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆಯಾಗಿದೆ. ಭ್ರಷ್ಟಾಚಾರ, ರಾಜಕೀಯ ಮೇಲಾಟ, ಬಣ  ಬಡಿದಾಟ, ಪಕ್ಕದ ರಾಜ್ಯಗಳ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿಯಾಗಿರುವ ಡಿಸಿಎಂ ಇಲಾಖೆಯ ಕರ್ತವ್ಯ ನಿರ್ವಹಿಸಲು ಪಾಪ ಸಮಯ ಎಲ್ಲಿದೆ? ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ,  ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಳೆದ ವರ್ಷ ಬರಗಾಲದಿಂದ ಜಲಾಶಯ ಖಾಲಿಯಾಗಿದ್ದಾಗ ಡ್ಯಾಂನ ದುರಸ್ತಿ ಕಾರ್ಯ ಮಾಡಲು ಸಮಯವೂ ಇತ್ತು, ಅವಕಾಶವೂ ಇತ್ತು.ಆದರೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಸದಾಕಾಲ ಬ್ಯುಸಿಯಾಗಿರುವ ಡಿಸಿಎಂ ಸಾಹೇಬರಿಗೆ ಡ್ಯಾಂ ರಿಪೇರಿ ಮಾಡಿಸಲು ಸಮಯ ಎಲ್ಲಿದೆ? ಆಸಕ್ತಿ ಎಲ್ಲಿದೆ?  ಸಿಎಂ ಸಿದ್ದರಾಮಯ್ಯ ನವರೇ, ನಿಮ್ಮ ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಹೀಗೆ ಚೆಲ್ಲಾಟವಾಡುತ್ತೀರಿ? ನಿಮ್ಮ ದುರಾಡಳಿತದಿಂದ ಉತ್ತಮ ಮಳೆಯಾಗಿದ್ದರೂ ಇವತ್ತು ನಾಡಿನ ರೈತರು ಕಣ್ಣೀರಿಡುವ ಪರಿಸ್ಥಿತಿ ಬಂದಿದ. ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ನಾಡಿನ ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಟ್ವೀಟ್ ಮೂಲಕ ಅಸಮಾಧಾನ ಆರ್ ಅಶೋಕ್ ಹೊರಹಾಕಿದ್ದಾರೆ.