ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಒಂದು ತಿಂಗಳಾಯ್ತು. ಜೈಲಿನ ವಿಐಪಿ ಸೆಲ್ ನಲ್ಲಿ ಒಬ್ಬಂಟಿಯಾಗಿರುವ ದರ್ಶನ್ ಅವರು ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ದಿನೇ ದಿನೇ ಸೊರಗುತ್ತಿದ್ದಾರೆ ಎನ್ನಲಾಗಿದೆ. ಮಾನಸಿಕವಾಗಿ ದರ್ಶನ್ ಕುಗ್ಗಿ ಹೋಗಿದ್ದಾರೆ. ತನ್ನನ್ನು ಭೇಟಿಯಾಗಲು ಬಂದವರ ಮುಂದೆ ದರ್ಶನ್ ಕಣ್ಣೀರು ಹಾಕ್ತಿದ್ದಾರೆ. ಐಷಾರಾಮಿ ಜೀವನ ಮಾಡುತ್ತಿದ್ದ ನಟ ದರ್ಶನ್ ಇದೀಗ ದಿನಗಳನ್ನು ಕಳೆಯೋದಕ್ಕೆ ಪೇಚಾಡುತ್ತಿದ್ದಾರೆ. ಜೈಲಿನ ಉಪ್ಪು, ಹುಳಿ, ಖಾರವಿಲ್ಲದ ಊಟ ದರ್ಶನ್ ಅವರಿಗೆ ಸೇರುತ್ತಿಲ್ಲ. ಅದರಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಹಾಗಾಗಿ ದರ್ಶನ್ ಅವರ ಪರವಾಗಿ ಅವರ ವಕೀಲರು ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.
ಜೈಲೂಟ ಸೇವಿಸಿ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಸರಿಯಾಗಿ ಊಟ, ನಿದ್ದೆ ಏನೂ ಮಾಡೋದಕ್ಕೂ ಆಗುತ್ತಿಲ್ಲ. ಹಾಗಾಗಿ ಅವರಿಗೆ ಮನೆ ಊಟ, ಹಾಸಿಗೆ ಹಾಗೂ ಓದಲು ಪುಸ್ತಕ ನೀಡುವಂತೆ ದರ್ಶನ್ ವಕೀಲರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ಇನ್ನು ಜೈಲಿನಲ್ಲಿ ನೀಡುತ್ತಿರುವ ಊಟ ದರ್ಶನ್ ಅವರಿಗೆ ಸರಿಯಾಗಿ ಜೀರ್ಣವಾಗುತ್ತಿಲ್ಲ. ಇದರಿಂದ ಭೇದಿ ಉಂಟಾಗುತ್ತಿದೆ. ಅಲ್ಲದೇ ಫುಡ್ ಪಾಯ್ಸನ್ ಕೂಡ ಆಗುತ್ತಿದೆ ಎಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆಂದು, ಹೈಕೋರ್ಟ್ ಗೆ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ದರ್ಶನ್ ಪರವಾದ ವಕೀಲರು ಉಲ್ಲೇಖ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಬಗ್ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿತ್ತು. ಅದರಂತೆ ದರ್ಶನ್ ಪರ ವಕೀಲರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು. ಇಂದು ಆ ಅರ್ಜಿಯ ವಿಚಾರಣೆ ಕೋರ್ಟ್ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ ಇದೀಗ ದರ್ಶನ್ ಅವರಿಗೆ ಜೈಲೂಟವೇ ಫಿಕ್ಸ್ ಎಂಬಂತಾಗಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗ್ತಾರಾ ವಿಜಯಲಕ್ಷ್ಮೀ ದರ್ಶನ್?
ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮ್ಮ ಪತಿ ದರ್ಶನ್ ತೂಗುದೀಪ ಅವರನ್ನು ಹೇಗಾದ್ರೂ ಮಾಡಿ ಜೈಲಿನಿಂದ ರಿಲೀಸ್ ಮಾಡಿಸಬೇಕು ಅವರಿಗೆ ಬೇಲ್ ಕೊಡಿಸಬೇಕು ಎಂಬಲ್ಲಿ ನಿಟ್ಟಿನಲ್ಲಿ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ಇತ್ತ ಮಗನ ಭವಿಷ್ಯದ ಬಗ್ಗೆಯೂ ಚಿಂತೆ ಅವರನ್ನು ಕಾಡುತ್ತಿದೆ.
ನಿನ್ನೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ತೂಗುದೀಪ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಮಗನನ್ನು ಡಿಕೆಶಿ ಅವರ ಸ್ಕೂಲ್ ಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪ್ಟಟಂತೆ ಡಿಕೆಶಿ ಅವರ ಬಳಿ ಮಾತನಾಡಿದ್ದರು ಎನ್ನಲಾಗಿದೆ. ಅಲ್ಲದೇ ದರ್ಶನ್ ಅವರ ಬೇಲ್ ಹಾಗೂ ಮನೆಯೂಟದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿತ್ತು. ಆದರೆ ಬಳಿಕ ಪ್ರತಿಕ್ರಿಯಿಸಿದ ಡಿಕೆಶಿ ದರ್ಶನ್ ಬಗ್ಗೆ ನನ್ನ ಬಳಿ ಅವರು ಮಾತನಾಡಿಲ್ಲ. ಮಗನ ಸ್ಕೂಲ್ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಪ್ರಕರಣದ ತನಿಖೆಯಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದಿದ್ದರು. ಅದರ ಬೆನ್ನಲ್ಲೇ ಇಂದು ವಿಜಿ ದರ್ಶನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.