ಬೆಂಗಳೂರು; ಹೈಕೋರ್ಟ್ ಬಾನು ಮುಷ್ತಾಕ್ ಅವರಿಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಅನ್ನೋ ಸಣ್ಣ ಕಾರಣ ನೀಡಿ ನನ್ನ ಪಿಐಎಲ್ ವಜಾ ಮಾಡ್ತು ಎಂದು ಬೆಂಗಳೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಹೈಕೋರ್ಟ್ ನಲ್ಲಿ ಅರ್ಜಿ ವಜಾ ವಿಚಾರದ ಬಗ್ಗೆ ಮಾತನಾಡಿದ ಅವರು ಮುಡಾದಲ್ಲಿ 14 ಸೈಟುಗಳನ್ನು ಪಡೆದಿದ್ದು ಹಗಲುದರೋಡೆ ಆಗಿತ್ತು. ಇಂಥ ಹಗಲು ದರೋಡೆ ಪ್ರಕರಣವನ್ನು ಹೈಕೋರ್ಟ್ ನಲ್ಲಿ ವಜಾ ಮಾಡಲಾಯಿತು. ನಾನು ನ್ಯಾಯ ಸಿಗುವ ಸಣ್ಣ ಭರವಸೆಯಿಂದ ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದೆ. ಹೈಕೋರ್ಟ್ ಬಾನು ಮುಷ್ತಾಕ್ ಅವರಿಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಅನ್ನೋ ಸಣ್ಣ ಕಾರಣ ನೀಡಿ ನನ್ನ ಪಿಐಎಕ್ ವಜಾ ಮಾಡ್ತು. ಹೈಕೋರ್ಟ್ ಬಗ್ಗೆ ನಾನು ಮಾತಾಡಲ್ಲ. ಬಾನು ಮುಷ್ತಾಕ್ ಅವರ ಹೇಳಿಕೆಯನ್ನು ಭಾವಾನುವಾದ ಮಾಡಿ ಕೋರ್ಟ್ ಗೆ ಸಲ್ಲಿಕೆ ಮಾಡಿದ್ವಿ. ಇಷ್ಟಾದ್ರೂ ಸೆಕ್ಯುಲರ್ ಅಂತ ಹೇಳಿ ಪಿಐಎಲ್ ವಜಾ ಮಾಡಲಾಯ್ತು.ಕೋರ್ಟ್ ಬಗ್ಗೆ ನಾನೇನೂ ಹೇಳಲ್ಲ ಎಂದಿದ್ದಾರೆ.
ಇಂದಿರಾಗಾಂಧಿ ತಂದ ಸೆಕ್ಯುಲರ್ ಪದದ ಕಾರಣ ಇಟ್ಕೊಂಡು ನನ್ನ ಪಿಐಎಲ್ ವಜಾ ಮಾಡಲಾಯ್ತು. ಅಶೋಕ ಚಕ್ರದ ಕೆಳಗೆ ಸತ್ಯಮೇವ ಜಯತೇ ಅಂತ ಬರೆಯಲಾಗಿದೆ. ನಾಳೆ ಬೆಳಗ್ಗೆ ಆ ಸತ್ಯಮೇವ ಜಯತೇಗೆ ಅವಮಾನ ಮಾಡೋದೂ ಸರಿ ಅಂತೀರಾ?. ಸತ್ಯಂ ಶಿವಂ ಸುಂದರಂ ಹೇಳಿಕೆಯನ್ನೂ ವಾಕ್ ಸ್ವಾತಂತ್ರ್ಯ, ಸೆಕ್ಯುಲರ್ ಕಾರಣಕ್ಕೆ ತೆಗೀತೀರಾ?. ಭಾರತದ ಮೂಲ ಸಂಸ್ಕೃತಿಗೆ ಧಕ್ಕೆ ಬರುವಂಥ ಹೇಳಿಕೆ ಸೆಕ್ಯುಲರ್, ವಾಕ್ ಸ್ವಾತಂತ್ರ್ಯ ಹಕ್ಕಿನಡಿ ಇದೆ ಅಂದ್ರೆ ನಾನೇನೂ ಹೇಳೋಕ್ಕಾಗಲ್ಲ. ಬಾನು ಮುಷ್ತಾಕ್ ಭುವನೇಶ್ವರಿ ಬಗ್ಗೆ, ಅರಿಶಿನ ಕುಂಕುಮ ಹೇಳಿಕೆ ಬಗ್ಗೆ ಕನಿಷ್ಟ ಕ್ಷಮೆ ಕೋರಿಲ್ಲ, ಅದಕ್ಕಾಗಿ ನಾನು ಕೋರ್ಟ್ ಗೆ ಹೋದೆ. ಸೆಕ್ಯುಲರ್ ಚೌಕಟ್ಟಿಗೆ ಅದನ್ನು ತಂದು ಕೋರ್ಟ್ ಅರ್ಜಿ ವಜಾ ಮಾಡಿದೆ. ಭಾರತದ ಮೂಲ ಸಂಸ್ಕೃತಿಗೆ ಇದೇ ರೀತಿ ಅಪಮಾನ, ಧಕ್ಕೆ ಆಗೋದನ್ನೂ ಹೀಗೇ ಸಹಿಸಿಕೊಳ್ತೀರಾ?. ದಾರ್ಷ್ಟ್ಯ, ದ್ವೇಷದಿಂದ ಈ ರೀತಿ ಹೇಳಿಕೆಗಳನ್ನು ಕೊಡೋದಾದ್ರೆ ಪರಿಸ್ಥಿತಿ ಏನಾಗಬೇಕು?.ಸೆಕ್ಯುಲರ್ ಪರಿಧಿಯಲ್ಲಿ ನೋಡೋದು ಎಷ್ಟು ಸರಿ? ಎಂದು ಹೇಳಿದ್ದಾರೆ.
ನಾನು ಕೋರ್ಟ್ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಮಾಡ್ತಿಲ್ಲ. ಸೆಕ್ಯುಲರಿಸಂ ಚೌಕಟ್ಟಿನಲ್ಲಿ ಪಿಐಎಲ್ ವಜಾ ಆಗಿದೆ. ಅದೇ ವಾಕ್ ಸ್ವಾತಂತ್ರ್ಯ ಬಳಸಿಕೊಂಡು ಮಾತಾಡ್ತಿದೀನಿ ಅಷ್ಟೇ ಎಂದಿದ್ದಾರೆ. ಪ್ರತಾಪ್ ಸಿಂಹ ಮೂರ್ಖ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಸಿದ್ದರಾಮಯ್ಯ ಸರ್ ಏನು ಬೇಕಾದರೂ ನನ್ನ ಕರೆಯಲಿ. ಅವರಿಗೂ ಸೋಷಿಯಲ್ ಮೀಡಿಯಾದಲ್ಲಿ ಏನೇನು ಕರೀತಾರೆ ಅಂತ ನೋಡಲಿ. ಅದನ್ನು ನೋಡಿದರೆ ಅವರು ಮುಖ ಮುಚ್ಚಿಕೊಂಡು ಓಡಾಡಬೇಕಾಗುತ್ತೆ. 14 ಸೈಟ್ ನುಂಗಿದ ನೀವು ನನಗೆ ಹೇಳಲು ಬರೋದು ಬೇಡ ಎಂದು ತಿಳಿಸಿದ್ದಾರೆ.
ಪ್ರತಾಪ್ ಸಿಂಹ ಜತೆ ಸೇರಿ ಹೊಸ ಪಕ್ಷ ಕಟ್ಟೋದಾಗಿ ಯತ್ನಾಳ್ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ನನ್ನ ತಂದೆ ಜನಸಂಘದ ದೀಪದ ಚಿಹ್ನೆಯಿಂದ ಗೆದ್ದವರು. ಬಿ ಬಿ ಶಿವಪ್ಪ ಜತೆ ಇದ್ದವರಯ ನಮ್ಮ ತಂದೆ. ನಮ್ಮ ಕೌಟುಂಬಿಕ ನಿಷ್ಠೆ ಸಂಘಕ್ಕೆ, ಬಿಜೆಪಿಗೆ. ನಾನು ಮೂಲತ: ಪತ್ರಕರ್ತ, ಪಕ್ಷ ಬಿಟ್ಟು ಹೋಗಲ್ಲ. ನಾನು ಅಧಿಕಾರ ಇರಲಿ ಇಲ್ಲದಿರಲಿ ಪಕ್ಷ ಬಿಡಲ್ಲ. ಯತ್ನಾಳ್ ಜತೆ ಸೇರಿ ಹೊಸ ಪಕ್ಷ ಕಟ್ಟೋ ಯೋಚನೆ ಇಲ್ಲ. ಬಿಜೆಪಿ ಪಕ್ಷದಲ್ಲೇ ಸಾಮಾನ್ಯ ಕಾರ್ಯಕರ್ತನಾಗಿರ್ತೇನೆ. ಯತ್ನಾಳ್ ಅವರಿಗೂ ಇದನ್ನೇ ಹೇಳಿದ್ದೇನೆ ಎಂದಿದ್ದಾರೆ.











