ಬೆಂಗಳೂರು: ಶಿಸ್ತಿಗಿಂತ ಪಕ್ಷದಲ್ಲಿ ಬೇರೆ ಆದ್ಯತೆ ಇಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ. ಯತ್ನಾಳ್ ಉಚ್ಚಾಟನೆ ವಿಚಾರದ ಬಗ್ಗೆ ಮಾತನಾಡಿದ ಅವರು ಕಳೆದ ಒಂದು ವರ್ಷದಿಂದ ನಮ್ಮ ಪಕ್ಷದಲ್ಲಿ ಆಗುತ್ತಿರುವ ಚರ್ಚೆಗೆ ಕಾರ್ಯಕರ್ತರು ಬೇಸತ್ತಿದ್ರು. ಶಿಸ್ತಿಗಿಂತ ಪಕ್ಷದಲ್ಲಿ ಬೇರೆ ಆದ್ಯತೆ ಇಲ್ಲ ಎಂದಿದ್ದಾರೆ.
ಕೇಂದ್ರ ಶಿಸ್ತು ಸಮಿತಿ ನಿರ್ಧಾರ ಮಾಡಿ ಕ್ರಮ ಕೈಗೊಂಡಿದೆ. ಗೌರವಾನ್ವಿತ ಯತ್ನಾಳ್ ರನ್ನು 6 ವರ್ಷಗಳ ಉಚ್ಚಾಟಿಸಿದೆ. ನಾಲ್ಕು ಗೋಡೆಗಳ ಮಧ್ಯೆ ಚರ್ಚೆಯಾಗಬೇಗಿತ್ತು. ಇದು ನಮ್ಮಲ್ಲರಿಗೂ ಪಾಠವಾಗಬೇಕು. ವಿಜಯೇಂದ್ರ ಮೂಲಕ ಪಕ್ಷ ಸಂಘಟನೆ ಆಗಲಿದೆ. ರಾಜ್ಯಾಧ್ಯಕ್ಷರಿಗೂ ಹಲವು ಸವಾಲುಗಳು ಕೂಡ ಇವೆ. ಯತ್ನಾಳ್ ಅವ್ರ ಮೇಲಿನ ಕ್ರಮ ನಿರೀಕ್ಷಿತ. ಮನುಷ್ಯ ನಡೆಯುವಾಗ ಎಡವುದು ಸಹಜ. ಯಾವ ಕಾರ್ಯಕರ್ತನು ಸಂಭ್ರಮ ಪಡುವ ಸಮಯವಲ್ಲ.ಬೇರೆಯವ್ರ ಮೇಲಿನ ಕ್ರಮದ ಬಗ್ಗೆ ಹೈಕಮಾಂಡ್ ನೋಡಿಕೊಳ್ಳಲಿದೆ ಎಂದಿದ್ದಾರೆ.
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ
ಬೆಂಗಳೂರು: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.
ಪದೇ ಪದೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರಹಾಕುತ್ತಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇದೀಗ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಮಹತ್ವದ ಕ್ರಮ ತೆಗೆದುಕೊಂಡಿದೆ. ಅವರನ್ನು 6 ವರ್ಷಗಳ ಕಾಲ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
ಇನ್ನು ಆದೇಶ ಪ್ರತಿಯಲ್ಲಿ “ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಫೆಬ್ರವರಿ 5 ರಂದು ನೀಡಿದ್ದ ನೋಟಿಸ್ ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ. ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆಯ ಭರವಸೆಯ ನೀಡಿದ್ದರೂ ಪಕ್ಷದ ಶಿಸ್ತನ್ನು ಮತ್ತೆ ಮತ್ತೆ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.”
“ಈ ಹಿನ್ನಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ನಿಮ್ಮನ್ನು ಹೊರಹಾಕಲು ನಿರ್ಧರಿಸಲಾಗಿದೆ. ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಸ್ಥಾನದಿಂದ ನಿಮ್ಮನ್ನು ವಜಾ ಮಾಡಲಾಗಿದೆ,” ಎಂದು ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಅತ್ತ ಅಮಾನತು ಮಾಡುತ್ತಿದ್ದಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಯತ್ನಾಳ್ ಸತ್ಯವಂತರಿಗಿದು ಕಾಲವಲ್ಲ ದುಷ್ಟಜನರಿಗೆ ಸುಭಿಕ್ಷ ಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ ಸತ್ಯವಂತರಿಗಿದು ಕಾಲವಲ್ಲ ಎಂದು ಪುರಂದರ ದಾಸರ ಪದವನ್ನು ಬರೆದಿದ್ದಾರೆ.