ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಮೂವರು ಮಕ್ಕಳು ನೀರು ಪಾಲಾದ ದುರ್ಘಟನೆಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಿಎಂ ಸಂತಾಪ ಸೂಚಿಸಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಅನಾಹುತ ಸಂಭವಿಸಿದೆ.ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆಯಾಗಿದೆ.ಇನ್ನು ನಗರಾಭಿವೃದ್ಧಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್ ಸಂತಾಪ ಸೂಚಿಸಿದ್ದಾರೆ.ವೈಯಕ್ತಿಕ ವಾಗಿ ತಲಾ 5 ಲಕ್ಷ ಪರಿಹಾರವನ್ನು ಅವರು ಘೋಷಣೆ ಮಾಡಿದ್ದಾರೆ. ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ನೀಡುವುದಾಗಿ ಸಚಿವರು ತಿಳಿಸಿದ್ದಾರೆ.ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸಚಿವ ಭೈರತಿ ಸುರೇಶ್ ಸೂಚನೆ ನೀಡಿದ್ದಾರೆ.
ಏನಿದು ಪ್ರಕರಣ;
ಕೋಲಾರದ ಮುಳುಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 57ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತರಲಾಗಿತ್ತು.ನಿನ್ನೆ ದಿನ ಸಂಜೆ ಮಕ್ಕಳು ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಏಳು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು . ಆ ಪೈಕಿ ಮೂವರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಣೆ ಮಾಡಿದ್ದರು. ಅಷ್ಟರಲ್ಲಿ ಶ್ರಾವಂತಿ ಎಂಬಾಕೆ ಸಾವನ್ನಪ್ಪಿದ್ದಳು.ಮೂವರು ಸಮುದ್ರಪಾಲಾಗಿದ್ದರು. ಆ ಮೂವರ ಮೃತದೇಹ ಇಂದು ಪತ್ತೆಯಾಗಿದೆ. ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಮೃತ ವಿದ್ಯಾರ್ಥಿನಿಯರು.
ಇಂದು ಮೂವರು ವಿದ್ಯಾರ್ಥಿನಿಯರ ಮೃತದೇಹವನ್ನು ಕರಾವಳಿ ಕಾವಲುಪಡೆ ಪೊಲೀಸರು ಪತ್ತೆ ಮಾಡಿದ್ದಾರೆ. ಇಲ್ಲಿನ ನವೀನ್ ಬೀಚ್ ರೆಸಾರ್ಟ್ ಬಳಿಯ ಸಮುದ್ರದಲ್ಲಿ ತೇಲುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾದರೇ ಮತ್ತೊಂದು ಮೃತದೇಹ ಅಳವೆಕೋಡಿಯಲ್ಲಿ ಪತ್ತೆಯಾಗಿದೆ. ದೀಕ್ಷಾ, ಲಾವಣ್ಯ, ವಂದನಾ ನೀರಿನಲ್ಲಿ ಕೊಚ್ಚಿ ಹೋಗಿ ಕಾಣೆಯಾಗಿದ್ದರು. ಇವರ ಹುಡುಕಾಟಕ್ಕೆ ಮೂರು ತಂಡ ರಚನೆ ಮಾಡಿ ಮುರುಡೇಶ್ವರ ಕಡಲತೀರದಲ್ಲಿ ಶೋಧ ನಡೆಸಿದ್ದು ಕೊನೆಗೂ ಮೂರು ಶವಗಳು ಪತ್ತೆಯಾಗಿದ್ದು ಆ ಮೂಲಕ ನಾಲ್ವರು ವಿದ್ಯಾರ್ಥಿನಿಯರು ಸಾವನ್ನಪ್ಪಿದಂತಾಗಿದೆ.











