ಮನೆ ರಾಜಕೀಯ/ರಾಜ್ಯ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ; ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯಿತು?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ; ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯಿತು?

0

 

ಬೆಂಗಳೂರು; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಸಚಿವರು ಸೇರಿದಂತೆ , ಶಾಸಕರು ಭಾಗಿಯಾಗಿದ್ದರು. ಸಭೆಯಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ, ಎದೆಗುಂದಬೇಡಿ ಎಂದು ಸಿಎಂಗೆ ಶಾಸಕರು ಒಕ್ಕೊರಲ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.

ಶಾಸಕಾಂಗ ಸಭೆಯಲ್ಲಿ ಸಿಎಂಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.ಸಿದ್ದರಾಮಯ್ಯಗೆ ಧೈರ್ಯ ತುಂಬಿ ಶಾಸಕರು ಮಾತನಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಶಾಸಕರು ಹಾಗೂ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.ನನ್ನ ಪರವಾಗಿ ಹೋರಾಡುತ್ತಿದ್ದೀರಿ, ನಿಮಗೆ ಧನ್ಯವಾದ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ನಾವು ನಿಮ್ಮೊಂದಿಗೆ ಇದ್ದೇವೆ ಎದೆಗುಂದಬೇಡಿ ಎಂದು ಶಾಸಕಾಂಗ ಸಭೆಯಲ್ಲಿ ಸಿಎಂಗೆ ಶಾಸಕರ ಒಮ್ಮತದ ಬೆಂಬಲ ವ್ಯಕ್ತವಾಗಿದೆ.

ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳಿ ಎಂದು ನಾವು ಒತ್ತಾಯಿಸೋಣ.ರಾಷ್ಟ್ರಪತಿಗಳನ್ನ ಭೇಟಿ ಮಾಡಿ ಒತ್ತಾಯಿಸೋಣ ಎಂದು ಶಾಸಕರು ಹೇಳಿದ್ದಾರೆ.ಶಾಸಕಾಂಗ ಸಭೆಯಲ್ಲಿ ರಾಜ್ಯಪಾಲರ ನಡೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಶಾಸಕರು. ಹೈಕಮಾಂಡ್ ಜೊತೆ ಚರ್ಚಿಸಿ ದೆಹಲಿಯಲ್ಲಿ ಹೋರಾಟ ನಡೆಸೋಣ ಎಂದು ಸಿಎಂ ಸಿದ್ದರಾಮ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ ಶಾಸಕಾಂಗ ಸಭೆಯಲ್ಲಿ ಬಹಳ ವಿಚಾರ ಚರ್ಚೆಮಾಡಿದ್ದೇವೆ. ಸರ್ವಾನುಮತದಿಂದ ಸಿದ್ದರಾಮಯ್ಯ ಜೊತೆಯಲ್ಲಿ ನಿಂತು ಅವರ ಬೆನ್ನಿಗೆ ನಿಂತು ಶಾಸಕರು ಬೆಂಬಲ ವ್ಯಕ್ತಪಡಿಸಿದೆ.ಆರ್ ವಿ ದೇಶಪಾಂಡೆ ಸೂಚಿಸಿ ತನ್ವೀರ್ ಸೆಠ್ ಅನುಮೋದಿಸಿದ್ದಾರೆ.ರಾಜ್ಯಪಾಲರು ರಾಜಕಾರಣ ಮಾಡಿ ಸರಿಯಾದ ತನಿಖೆಯೇ ಇಲ್ಲದೆ ಪ್ರಾಸಿಕ್ಯುಷನ್ ಕೊಟ್ಟಿರುವುದು.ಸರ್ವಾನುಮತದಿಂದ ಇದನ್ನು ನಾವು ಖಂಡಿಸಿದ್ದೇವೆ.ಸರ್ಕಾರಕ್ಕೆ ಜನ ಬೆಂಬಲ ಕೊಟ್ಟಿದ್ದಾರೆ.ಸರ್ಕಾರ ಅಭದ್ರ ಮಾಡಲು ತೊಂದರೆ ಕೊಡ್ತಿದ್ದಾರೆ.ಈ ಸರ್ಕಾರ ಏನೂ ಮಾಡಲು ಸಾಧ್ಯವಿಲ್ಲ.ನಾವೆಲ್ಲ ಗಟ್ಟಿಯಾಗಿ ನಿಂತಿದ್ದೇವೆ ಸಿದ್ದರಾಮಯ್ಯ ಜೊತೆಗೆ ಇದ್ದೇವೆ.ದೆಹಲಿ ನಾಯಕರ ಭೇಟಿಗೆ ತೆರಳುತ್ತಿದ್ದೇವೆ.ನಾವೇ ಹೋಗ್ತಾ ಇದ್ದೇವೆ ಅವರೇನೂ ಕರೆದಿಲ್ಲ.ಎಲ್ಲ ವಿಚಾರಗಳನ್ನು ನಾವು ಹೈಕಮಾಂಡ್ ಮುಂದೆ ತಿಳಿಸುತ್ತೇವೆ.ಸರ್ಕಾರದ ವಿರುದ್ದ ನಮ್ಮ ಸಿಎಂ ವಿರುದ್ದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಇಂದಿನ ಶಾಸಕಾಂಗ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು

  • ಬೆಂಗಳೂರು ನಗರದಲ್ಲಿ 250 ಅಡಿ ಎತ್ತರದ ಆಕಾಶ ಗೋಪುರವನ್ನು ನಿರ್ಮಾಣ ಮಾಡಲು ತಾತ್ವಿಕ ಅನುಮೋದನೆ
  • ಬೆಂಗಳೂರು ನಗರದ ಹೆಬ್ಬಾಳ ಮೇಲ್ಸ್ತುವೆ (ಎಸ್ಟೀಮ್ ಮಾಲ್) ಇಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ ಮೇಲೆತುವೆ ವರೆಗೆ ಸುರಂಗ ಮಾರ್ಗವನ್ನು ರೂ.12,690 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತಾತ್ತಿಕ ಅನುಮೋದನೆ
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ
  • 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ “ಹೊಂಬೆಳಕು” ಯೋಜನೆಯಡಿ ರಾಜ್ಯದ ಆಯ್ದ 50 ಗ್ರಾಮ ಪಂಚಾಯತಿಗಳ 200 ಗ್ರಾಮಗಳಲ್ಲಿ ರೂ.25 ಕೋಟಿ ವೆಚ್ಚದಲ್ಲಿ ಸೋಲಾರ್ ಬೀದಿ ದೀಪ ಅಳವಡಿಕೆಗೆ ತಾತ್ವಿಕ ಒಪ್ಪಿಗೆ
  • ರಾಜ್ಯದಲ್ಲಿ ಹೊಸದಾಗಿ 592 ಅಂಗನವಾಡಿ ಕಟ್ಟಡಗಳನ್ನು ರೂ.85 ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನ
  • ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಅನ್ನು ರೂ. 397 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ
  • ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಾಳಿಕೋಟಿ ಪಟ್ಟಣಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಸೇತುವೆ ನಿರ್ಮಾಣ ಕಾಮಗಾರಿಯನ್ನು ರೂ.28 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನ
  • ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯದಿಂದ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿ ಯೋಜನೆಯಡಿ ಅನುಮೋದನೆಗೊಂಡ ಒಟ್ಟು ರೂ.1,385 ಕೋಟಿ ವೆಚ್ಚದ ಕಾಮಗಾರಿಗಳಲ್ಲಿ ಮೊದಲ ಹಂತದಲ್ಲಿ ರೂ.700 ಕೋಟಿ ವೆಚ್ಚದ ಕಾಮಗಾರಿಗಳ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ
  • ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಕೇಂದ್ರ ಸರ್ಕಾರದ (RAMP) ಕಾರ್ಯಕ್ರಮವನ್ನು ರೂ.147 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ತೀರ್ಮಾನ
  • ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು, ಕುರೇಕುಪ್ಪ, ಮೂಸೆನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿನ 3,667 ಎಕರೆ ಜಮೀನನ್ನು ಜೆ.ಎಸ್.ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಸಂಸ್ಥೆಯ ಪರವಾಗಿ ಕ್ರಯಪತ್ರ ನೀಡಲು ತೀರ್ಮಾನ
  • ರಾಜ್ಯದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್ ಹಾಗೂ ಆರೋಗ್ಯ ಇಲಾಖೆಯ ಇತರೆ ಎಲ್ಲಾ ಆರೋಗ್ಯ ಸಂಬಂಧಿತ ಡಿಜಿಟಲ್ ಉಪಕ್ರಮಗಳ ಅನುಷ್ಠಾನದ ಉದ್ದೇಶಕ್ಕಾಗಿ “ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿ”ಯನ್ನು ಸ್ಥಾಪಿಸಲು ನಿರ್ಧಾರ