ಬೆಂಗಳೂರು; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ಅಕ್ರಮ ವರ್ಗಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ನಿನ್ನೆ ಇಡಿ ಅಧಿಕಾರಿಗಳು ಬಂಧಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ಯು ಟಿ ಖಾದರ್ ನಾಗೇಂದ್ರ ಬಂಧನ ಕುರಿತು ನಿನ್ನೆ ಸ್ಪೀಕರ್ ಕಚೇರಿಗೆ ಇಡಿ ಅಧಿಕಾರಗಳು ಮಾಹಿತಿ ನೀಡಿದ್ದಾರೆ.ಈ ಮೇಲ್ ಮೂಲಕ ಇಡಿ ಅಧಿಕಾರಿಗಳು ಮಾಹಿತಿ ತಲುಪಿಸಿದ್ದಾರೆ.
ಅದು ಕಾನೂನು, ನಾವು ಅದರಲ್ಲಿ ಭಾಗಿಯಾಗುವುದಿಲ್ಲ.ಸದನದಲ್ಲಿ ನಾವು ಏನು ಮಾಡಬೇಕೊ ಅದನ್ನ ಮಾಡ್ಬೇಕು.ಶಾಸಕ ದದ್ದಲ್ ಬಂಧನ ವಿಚಾರವಾಗಿ ಮಾಹಿತಿ ಬಂದಿಲ್ಲ.ಇವತ್ತು ಭಾನುವಾರ ಇ-ಮೇಲ್ ಬಂದಿರುವುದು, ನಾನು ಗಮನಿಸಿಲ್ಲ. ಅಸೆಂಬ್ಲಿ ನಡೆಯುವಾಗ ನಮ್ಮ ಅನುಮತಿ ಪಡೆಯುವುದು ಕಡ್ಡಾಯ ಎಂದು ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ.
ಜುಲೈ 18ರವರೆಗೆ ಮಾಜಿ ಸಚಿವ ಬಿ ನಾಗೇಂದ್ರಗೆ ಇಡಿ ಕಸ್ಟಡಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಮಾಜಿ ಸಚಿವ ಬಿ ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅವರನ್ನು ಇಂದು ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಇಡಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಜಡ್ಜ್ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶ ಗಜಾನನ ಭಟ್, ನಾಗೇಂದ್ರ ಅವರನ್ನು ಜುಲೈ 18 ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ಇನ್ನು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿ ಬಳಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ನಾಗೇಂದ್ರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದಿದ್ದಾರೆ.
ಮಾಜಿ ಸಚಿವ ಬಿ.ನಾಗೇಂದ್ರರನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು
ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಪಟ್ಟಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇನ್ನು ಮೊನ್ನೆ ನಾಗೇಂದ್ರ ಅವರ ಕಚೇರಿ, ನಿವಾಸ ಅವರ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದರು. ಅಲ್ಲದೇ ಅವರ ಆಪ್ತ ಹರೀಶ್ ಅವರನ್ನು ವಶಕ್ಕೆ ಪಡೆದಿದ್ದರು. ಇಂದು ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಾಗೇಂದ್ರ ಈ ಬಗ್ಗೆ ನನಗೇನು ಗೊತ್ತಿಲ್ಲ. ನಿನ್ನೆ ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ರು. ಇವತ್ತು ಇಲ್ಲಿಗೆ ಕರೆ ತಂದಿದ್ದಾರೆ ಎಂದು ಹೇಳಿದ್ದಾರೆ.