ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರುತ್ತಿದ್ದಂತೆ ಅವರನ್ನು ಹೊರಗೆ ತರಲು ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ದರ್ಶನ್ ಪತ್ನಿ ಘಟನೆಯ ಬಳಿಕ ಸತತವಾಗಿ ದೇವಸ್ಥಾನಕ್ಕೆ ಭೇಟಿ ನೀಡೋದು ಇಲ್ಲಾ ಜೈಲಿಗೆ ಭೇಟಿ ನೀಡೋದು ಬಿಟ್ರೆ ಬೇರೆಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.ಆದರೆ ಇದೀಗ ವಿಜಯಲಕ್ಷ್ಮೀ ದರ್ಶನ್ ಅರು ಬರ್ತಡೇ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು,, ಅತ್ತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಂತೆ ಇತ್ತ ವಿಜಯಲಕ್ಷ್ಮೀ ದರ್ಶನ್ ಸಿಎಂ ಸಿದ್ದರಾಮಯ್ಯ ಸೊತೆ ಸ್ಮಿತಾ ರಾಕೇಶ್ ಜೊತೆ ಬರ್ತಡೇ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಮಿತಾ ರಾಕೇಶ್ ಹಾಗೂ ವಿಜಯಲಕ್ಷ್ಮಿ ಬಹಳ ವರ್ಷಗಳಿಂದ ಸ್ನೇಹಿತರು. ಇಬ್ಬರು ಮತ್ತೊಬ್ಬ ಸ್ನೇಹಿತೆ ಶೃತಿ ಬರ್ತ್ ಡೇ ಪಾರ್ಟಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.ಮೊನ್ನೆ ಬೆಂಗಳೂರಿನಲ್ಲಿ ಮೂರು ಸ್ನೇಹಿತೆಯರು ಬರ್ತ್ ಡೇ ಪಾರ್ಟಿ ಮಾಡಿದ್ದಾರೆ. ಈ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಇನ್ಸ್ಟಾಗ್ರಾಂ ನಲ್ಲಿ ವಿಜಯಲಕ್ಷ್ಮೀ ಸ್ಟೋರಿ ಹಾಕ್ಕೊಂಡಿದ್ದು ಸದ್ಯ ಅವರು ಸಾರ್ವಜನಿಕವಾಗಿ ಕಾಣಿಸಿಕೊ ಳ್ಳುತ್ತಿರೋದು ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿ ವಿರುದ್ಧ ಡಿ ಗ್ಯಾಂಗ್ ಮೆರೆದ ಕ್ರೌರ್ಯದ ಇಂಚಿಂಚೂ ಅನಾವರಣ; ರೇಣುಕಾಸ್ವಾಮಿ ಬಿಟ್ ಬಿಡಿ ದಮ್ಮಯ್ಯ ಅಂತಾ ಬೇಡಿಕೊಳ್ಳುತ್ತಿರುವ ಫೋಟೋ ವೈರಲ್
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪಟ್ಟಂತೆ ನಿನ್ನೆ ಪೊಲೀಸರು ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಡಿ ಗ್ಯಾಂಗ್ ರೇಣುಕಾಸ್ವಾಮಿಯನ್ನು ಯಾವ ರೀತಿ ಕೊಲೆ ಮಾಡಿದೆ ಎಂಬ ಇಂಚಿಂಚೂ ಮಾಹಿತಿ ಕೂಡ ಅನಾವರಣವಾಗಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಡಿ ಗ್ಯಾಂಗ್ ಯಾವ ರೀತಿ ಹಲ್ಲೆ ಮಾಡಿ ಕೊಲೆ ಮಾಡಿತು ಅನ್ನೋದಕ್ಕೆ ಸಂಬಂಧಪಟ್ಟಂತೆ ಫೋಟೋ ರಿವೀಲ್ ಆಗಿದೆ. ಗಡ್ಡಿ ಮನುಷ್ಯನಂತಿದ್ದ ರೇಣುಕಾಸ್ವಾಮಿ ಬಿಟ್ ಬಿಡಿ ನನ್ನ ದಮ್ಮಯ್ಯ ಅಂತಾ ಬೇಡಿಕೊಳ್ಳುತ್ತಿರುವ ಫೋಟೋ ವೈರಲ್ ಆಗಿದೆ. ಫೋಟೋ ನೋಡಿದ್ರೇನೆ ಗೊತ್ತಾಗುತ್ತೆ. ಡಿ ಗ್ಯಾಂಗ್ ಯಾವ ರೀತಿ ಚಿತ್ರಹಿಂಸೆ ನೀಡಿ ಆತನನ್ನು ಕೊಲೆ ಮಾಡಿದೆ ಅಂತಾ.
ಈಗಾಗಲೇ ಪೊಲೀಸರು ದರ್ಶನ್, ಅವರ ಸ್ನೇಹಿತೆ ಪವಿತ್ರಾ ಗೌಡ ಮತ್ತು 15 ಸಹಚರರ ವಿರುದ್ಧ 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ 3,991 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಪಿತೂರಿ, ಯೋಜನೆ, ಅಪಹರಣ, ಚಿತ್ರಹಿಂಸೆ, ಕೊಲೆ, ಸಾಕ್ಷ್ಯ ನಾಶದಲ್ಲಿ ದರ್ಶನ್, ಪವಿತ್ರ ಗೌಡರ ಪಾತ್ರ ಮತ್ತು ಅವರ ಅಭಿಮಾನಿ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಅವರ ನಾಲ್ವರು ಸಹಚರರನ್ನು ಪೊಲೀಸರಿಗೆ ಶರಣಾಗುವಂತೆ ಮಾಡುವ ಮೂಲಕ ಪೊಲೀಸರನ್ನು ದಾರಿ ತಪ್ಪಿಸುವ ಯೋಜನೆಯನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಪವಿತ್ರಾಗೆ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದಕ್ಕಾಗಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಅಪ್ರೂವರ್ ಆಗಲು ಒಪ್ಪಿಕೊಂಡ ಆರೋಪಿಗಳಲ್ಲಿ ಒಬ್ಬ ನೀಡಿರುವ ಹೇಳಿಕೆಯನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ದರ್ಶನ್ ಮತ್ತು ಇತರೆ ಆರೋಪಿಗಳ ಪಾತ್ರದ ಬಗ್ಗೆ ಚಾರ್ಚ್ ಶೀಟ್ ನಲ್ಲಿ ವಿವರಿಸಲಾಗಿದೆ.











