ಬೆಂಗಳೂರು: ಸರಕಾರಿ ಪ್ರದೇಶದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳ ನಿರ್ಬಂಧ ಕೋರಿ ಪ್ರಿಯಾಂಕ ಖರ್ಗೆ ಸಿಎಂಗೆ ಪತ್ರ ಬರೆದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸಂಘದ ಬಗ್ಗೆ ಗೊತ್ತಿಲ್ಲದವರು ಪ್ರಚಾರಕ್ಕೆ ಮಾತ್ರ ಇರೋರು ಇಂಥ ಹೇಳಿಕೆ ಕೊಡ್ತಾರೆ. ಪ್ರಿಯಾಂಕ್ ಖರ್ಗೆ ನಡೆ ಮೂರ್ಖತನದ ಪರಮಾವಧಿ.bಸಂಘವನ್ನು ನಿಷೇಧ ಮಾಡ್ತೇವೆ ಅನ್ನೋ ಮಾತಾಡಿದ್ದಾರೆ. ಆ ಶಕ್ತಿ ಕಾಂಗ್ರೆಸ್ ಗೆ ಇಲ್ಲ. ಚಟಕ್ಕೋಸ್ಕರ, ಚಪಲಕ್ಕೋಸ್ಕರ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಪ್ರಿಯಾಂಕ್ ಖರ್ಗೆ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರಬೇಕು. ಗಾಂಧಿ ಕುಟುಂಬವನ್ನು ಓಲೈಸಲು ಪ್ರಿಯಾಂಕ್ ಖರ್ಗೆ ಮುಂದಾಗಿದ್ದಾರೆ. ಪುಣ್ಯಾತ್ಮ ನೀನು ಸಚಿವ ಆಗಿರೋ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದೆ, ಗೂಂಡಾಗಿರಿ, ಮರಳು ಮಾಫಿಯಾ ಇದೆ. ಅದರತ್ತ ಪ್ರಿಯಾಂಕ್ ಖರ್ಗೆ ಮೊದಲು ಗಮನ ಹರಿಸಲಿ. ಒಬ್ಬ ಸಚಿವ ಆಗಿ ಪ್ರಿಯಾಂಕ್ ಖರ್ಗೆ ಉಡಾಫೆ ಪ್ರದರ್ಶನ ಮಾಡಿದ್ದಾರೆ. ಆರ್ ಎಸ್ ಎಸ್ ಸಾಧನೆಗಳನ್ನು ಸದನದಲ್ಲಿ ಚರ್ಚೆ ಮಾಡೋಣ. ಆರೆಸೆಸ್ ಸಾಧನೆಗಳನ್ನು ನಾವು ಹೇಳಿದರೂ ಅದನ್ನು ಅರ್ಥ ಮಾಡಿಕೊಳ್ಳು ಯೋಗ್ಯತೆ ಕಾಂಗ್ರೆಸ್ ನವ್ರಿಗೆ ಇಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ಟಕ್ಕರ್ ಕೊಟ್ಟಿದ್ದಾರೆ.
ಇನ್ನು ಈ ಬಗ್ಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದು ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್ ಎಸ್ಎಸ್ ನ ನಿಷೇಧಕ್ಕೆ ಕರೆ ಕೊಟ್ಟಿರುವುದು ಇವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ. ಮನ ಮನೆಗಳನ್ನು ಬೆಸೆದುಕೊಳ್ಳುತ್ತಿರುವ ಸಂಘ ಚಿಂತನೆ ವ್ಯಾಪಿಸಿದ ಮತ್ತು ವ್ಯಾಪಿಸುತ್ತಿರುವ ರೀತಿ ಅನನ್ಯ ಸಂಘವನ್ನು ನಿಷೇಧ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ ಎಂದಿದ್ದಾರೆ.
ವಿರೋಧಿಗಳು ಪ್ರೀತಿಸುವ, ಗೌರವಿಸುವ ಜಗತ್ತಿನ ಏಕೈಕ ಸಂಘಟನೆಯೇ ಆರ್ ಎಸ್ಎಸ್. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟು ಸ್ವಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಪ್ರಿಯಾಂಕ್ ಖರ್ಗೆ ಶ್ರಮಿಸಲಿ. ಅಷ್ಟಕ್ಕೂ, ನಿಷೇಧಗೊಳಿಸಬೇಕಾಗಿದ್ದರೆ ಕೂಡಲೇ ಎಸ್ ಡಿಪಿಐ ನಂತಹ ದೇಶ ವಿರೋಧಿ ಸಂಘಟನೆಗಳನ್ನು ನಿಷೇಧ ಮಾಡಲಿ. ಅನ್ಯ ಕೋಮಿನ ಹಬ್ಬಗಳಂದು ತಲ್ವಾರ್ ತೋರಿಸಿ ಬೀದಿಗಳಲ್ಲಿ ಹೆಲ್ಮೆಟ್ ಧರಿಸದೇ ಓಡಾಡುವ ಪುಂಡರ ಹೆಡೆಮುರಿ ಕಟ್ಟಲಿ. ಬಕ್ರೀದ್ ಸೇರಿದಂತೆ ಇತರ ಹಬ್ಬಗಳಲ್ಲಿ ಆಗುವ ಪ್ರಾಣಿಬಲಿಯನ್ನು ನಿಷೇಧಿಸಲಿ. ಆಂಗ್ಲ, ವಿಜ್ಞಾನ, ಗಣಿತ, ಸಮಾಜ ಹೇಳಿ ಕೊಡದೇ ದ್ವೇಷ, ಬೇರೆ ಧರ್ಮಗಳ ಬಗ್ಗೆ ತಪ್ಪು ವಿಚಾರಗಳನ್ನು ಕಲಿಸುವ ಮದರಸಗಳನ್ನು ನಿಷೇಧ ಮಾಡಲಿ. ಸ್ವಾತಂತ್ರ್ಯ ಬಂದು ಏಳು ದಶಕಗಳಾದರೂ ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಕರೆಸಿಕೊಳ್ಳುವ ಹಾಗೂ ಅವರೇ ಪ್ರತಿನಿಧಿಸುವ ಕಲ್ಬುರ್ಗಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲಿ. ಸಂಘದ ನಿಷೇಧ ಕನಸಿನ ಮಾತು ಎಂದಿದ್ದಾರೆ.











