ಬೆಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿದ್ರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ. ಶ್ರೀರಾಮುಲು, ಶಾಸಕರಾದ ಭೈರತಿ ಬಸವರಾಜ, ಮುನಿರತ್ನ, ಎಸ್.ಆರ್. ವಿಶ್ವನಾಥ್, ಬಸವರಾಜ ಮತ್ತಿಮೂಡ, ಎಂ. ಕೃಷ್ಣಪ್ಪ, ಸಂಸದ ಬ್ರಿಜೇಶ್ ಚೌಟ ಹಾಜರಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬೆಲೆಯೇರಿಕೆ ನಿರಂತರವಾಗಿ ನಡೆಯುತ್ತಿದೆ. ದೇಶದಲ್ಲೇ ಅತ್ಯಂತ ದುಬಾರಿ ಜೀವನವನ್ನು ರಾಜ್ಯದ ಜನ ನಡೆಸುವ ದುಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ನಿರ್ಮಿಸಿದೆ. ಗಾಳಿ ಹೊರತುಪಡಿಸಿ ಎಲ್ಲದರ ಬೆಲೆ ಏರಿಕೆ ನಿರಂತರವಾಗಿ ಮಾಡಲಾಗುತ್ತಿದೆ. ಮತದಾರರಿಗೆ ವರದಾನವಾಗುವ ಬದಲು ಸರ್ಕಾರ ಶಾಪಗ್ರಸ್ಥವಾಗಿದೆ.ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ವೆಚ್ಚ ಹೆಚ್ಚಾಗಿದೆ ಎಂದಿದ್ದಾರೆ.
ವಿಪಕ್ಷವಾಗಿ ಬಿಜೆಪಿ ಬೆಲೆಯೇರಿಕೆ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ಆರಂಭವಾಗಲಿದೆ. ಬೆಳಗ್ಗೆ ೧೧ ಗಂಟೆಗೆ ಧರಣಿ ಆರಂಭವಾಗಲಿದೆ. ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು ಪಾಲ್ಗೊಳ್ಳುತ್ತಾರೆ. ಏಪ್ರಿಲ್ 5 ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.
ಸಿದ್ದರಾಮಯ್ಯ ಬಜೆಟ್ ನಲ್ಲಿ ಮುಸಲ್ಮಾನರ ಓಲೈಕೆಗಾಗಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ಮಾಡಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತರ, ಮುಸಲ್ಮಾನರ ವಿರೋಧಿಯಲ್ಲ. ಆದರೆ ಕೇವಲ ಮುಸ್ಲಿಮರಿಗೆ ಮಾತ್ರ ಯಾಕೆ ಕೊಡುತ್ತಿದ್ದೀರಿ?. ಕೇಂದ್ರ ಸರ್ಕಾರದ ಯೋಜನೆಗಳು ಎಲ್ಲರಿಗೂ ಇವೆ. ಯಡಿಯೂರಪ್ಪ ಭಾಗ್ಯಲಕ್ಷ್ಮೀ ಯೋಜನೆ ಕೇವಲ ಹಿಂದೂಗಳಿಗೆ ಮಾತ್ರ ಕೊಟ್ಟಿಲ್ಲ. ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಬಜೆಟ್ ಮಂಡಿಸಿಲ್ಲ ಅಷ್ಟೇ. ಸಿದ್ದರಾಮಯ್ಯ ಹಾಲಮತ ಸಮಾಜವನ್ನು ಸಂಪೂರ್ಣ ಮರೆತಿದ್ದಾರೆ. ಕಾಂಗ್ರೆಸ್ ಸರ್ಕಾರ ಕಾಯಕ ಸಮುದಾಯಗಳನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಕಾಂಗ್ರೆಸ್ ಕೇವಲ ಅಲ್ಪಸಂಖ್ಯಾತರ ಹಿಂದೆ ಹೊರಟಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ನಾಲ್ಕು ಹಂತಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಬಿಜೆಪಿಯಿಂದ ಜನಾಕ್ರೋಶ ಹೋರಾಟ ನಡೆಯಲಿದೆ. ಏಪ್ರಿಲ್ 7 ರಂದು ಮೈಸೂರಿನಿಂದ ಜನಜಾಗೃತಿ ಹೋರಾಟ ಪ್ರಾರಂಭವಾಗಲಿದೆ. ಮಧ್ಯಾಹ್ನ 3 ಗಂಟೆಗೆ ಪ್ರಹ್ಲಾದ್ ಜೋಷಿ ಚಾಲನೆ ನೀಡಲಿದ್ದಾರೆ. ನಾಲ್ಕು ಹಂತಗಳಲ್ಲಿ ಹೋರಾಟ ಆಯೋಜನೆ ಮಾಡಲಾಗಿದೆ. ಏಪ್ರಿಲ್ 7 ರಂದು ಮೈಸೂರು, ಚಾಮರಾಜನಗರ , ಏಪ್ರಿಲ್ 8 ರಂದು ಮಂಡ್ಯ, ಹಾಸನ ಏಪ್ರಿಲ್ 9 ರಂದು ಕೊಡಗು, ಮಂಗಳೂರು, ಏಪ್ರಿಲ್ 10 ರಂದು ಉಡುಪಿ, ಚಿಕ್ಕಮಗಳೂರು. ಎರಡನೇ ಹಂತದ ಹೋರಾಟ ಏಪ್ರಿಲ್ 13 ರಂದು ಆರಂಭ, ಏಪ್ರಿಲ್ 13 ರಂದು ಶಿವಮೊಗ್ಗ, ಉತ್ತರ ಕನ್ನಡ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕೂಡಾ ಜನಾಕ್ರೋಶ ಯಾತ್ರೆ ನಡೆಯಲಿದೆ. ಪ್ರತಿ ಜಿಲ್ಲೆಯಲ್ಲಿ ನಗರದಲ್ಲಿ 2-3 ಕಿ.ಮೀ. ಪಾದಯಾತ್ರೆ, ಸಭೆಗಳು ಇರಲಿವೆ. ಈ ಜನಾಕ್ರೋಶ ಯಾತ್ರೆಯನ್ನು ಬಿಜೆಪಿ ಮಾತ್ರ ಕೈಗೆತ್ತಿಕೊಂಡಿದೆ ಎಂದರು.
ಗ್ಯಾರಂಟಿಗಳಿಗೆ ಹಣ ಕ್ರೋಢೀಕರಿಸಲು ಸಾಧ್ಯವಿಲ್ಲದೇ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದೆ. ಗ್ಯಾರಂಟಿ ನಿಲ್ಲಿಸಿ ಅಂತಾ ಹೇಳುತ್ತಿಲ್ಲ, ಅದು ಸರ್ಕಾರದ ಕರ್ತವ್ಯ. 20 ತಿಂಗಳಿಂದ ಯಾವುದೇ ಹೊಸ ಕಾರ್ಯಕ್ರಮಗಳಿಗೆ ಚಾಲನೆ ಸಿಕ್ಕಿಲ್ಲ ನಾಲ್ಕು ಹಂತದ ಹೋರಾಟ ವಿಜಯೇಂದ್ರ, ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಆಗುತ್ತದೆ. ಶಾಸಕರ ಅಮಾನತು ಬಗ್ಗೆ ಏಪ್ರಿಲ್ 2 ರಂದು ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಪ್ರತಿಭಟನೆ ಮಾಡುತ್ತೇವೆ ಎಂದರು.











