ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾದಿ ಬೀದಿಯಲ್ಲಿ ಮಾತಾಡುವವರು ಯಾರೇ ಇರಲಿ ಅವರ ಮೇಲೆ ಕ್ರಮ ಆಗಬೇಕು ಎಂದು ಯತ್ನಾಳ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ರು.
ಚೆಂಡು ಹೈಕಮಾಂಡ್ ಅಂಗಳದಲ್ಲಿದೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ನೋಡೋಣ. ಉಪ ಚುನಾವಣೆಯ ಸೋಲಿನ ಬಗ್ಗೆ ಚರ್ಚೆಯಾಗಿದೆ. ಸಂಡೂರು, ಶಿಗ್ಗಾಂವಿ ಸೋಲಿನ ಕುರಿತು ಸತ್ಯ ಶೋಧನೆಗೆ ತೀರ್ಮಾನ ಆಗಿದೆ
ಸದಾನಂದ ಗೌಡ ಹಾಗೂ ಎನ್. ಮಹೇಶ್ ನೇತೃತ್ವದ ಸಮಿತಿ ರಚನೆ ಮಾಡಿದ್ದೇವೆ. ಇವರಿಬ್ಬರು ಕ್ಷೇತ್ರಕ್ಕೆ ಭೇಟಿ ಕೊಟ್ಟು ಸತ್ಯ ಶೋಧನೆ ಮಾಡಲಿದ್ದಾರೆ. ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ವಿಚಾರವೂ ಚರ್ಚೆ ಯಾಗಿದೆ.ಕಾಂಗ್ರೆಸ್ ಜೊತೆ ಅವರಿಬ್ಬರು ಸಕ್ರೀಯ ವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೆ ಇತಿಶ್ರೀ ಹಾಕಬೇಕೆಂದು ತೀರ್ಮಾನವಾಗಿದೆ. ಪಕ್ಷ ವಿರೋದಿ ಹೇಳಿಕೆಗಳ ಬಗ್ಗೆಯೂ ಚರ್ಚೆಯಾಗಿದೆ. ಇದೆಲ್ಲದಕ್ಕೂ ತಾರ್ಕಿಕ ಅಂತ್ಯ ಹಾಡುವ ಸಂಬಂಧ ಚರ್ಚೆಯಾಗಿದೆ. ಸೋಮಶೇಖರ್ ಮತ್ತು ಹೆಬ್ಬಾರ್ ವಿಚಾರವಾಗಿ ಅಮಾನತು ಮಾಡಬೇಕೋ ಅನರ್ಹತೆ ಮಾಡಬೇಕೋ ಎನ್ನುವುದನ್ನು ತೀರ್ಮಾನ ತೆಗೆದು ಕೊಳ್ಳುತ್ತಾರೆ ಎಂದ್ರು.
ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಡಾ. ಅಶ್ವಥ್ ನಾರಾಯಣ್, ಸಂಸದ ಗೋವಿಂದ ಕಾರಜೋಳ ಮತ್ತು ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಿದ್ದರು.
ಸಭೆಗೆ ಸಂಸದ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಗೈರಾಗಿದ್ದರು.ಇನ್ನು ದೆಹಲಿಗೆ ತೆರಳಬೇಕಿರುವ ಹಿನ್ನೆಲೆಯಲ್ಲಿ ಸಭೆಯಿಂದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಬೇಗನೆ ತೆರಳಿದ್ರು. ಬಳಿಕ ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಮುಂದುವರಿಯಿತು.
ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಶಾಸಕ ಯತ್ನಾಳ್ ಗೆ ಈಗಾಗಲೇ ನೋಟಿಸ್ ಕೊಟ್ಟಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿದೆ. ಉತ್ತರ ಬಂದ ಮೇಲೆಯೇ ಮುಂದಿನ ನಡೆ ಎಂದರು.
ಕೋರ್ ಕಮಿಟಿಯಲ್ಲಿ ಸಂಘಟನಾತ್ಮಕ ವಿಚಾರ ಚರ್ಚೆ ಆಗಿದೆ. ಇನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಯತ್ನಾಳ್ ತಂಡದ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಪಕ್ಷದ ನಾಯಕತ್ವ ತೀರ್ಮಾನ ಮಾಡುವುದು ಪಕ್ಷದ ಕಾರ್ಯಕರ್ತರು.ಈಗ ಯಾವ ಸಮಯಕ್ಕೆ ಯಾವ ನಾಯಕರು ಉತ್ತಮವೋ ಅವರ ನಾಯಕತ್ವ ಇರಲಿದೆ.ಪ್ರಸ್ತುತ ವಿಜಯೇಂದ್ರ ಸೂಕ್ತ ಎಂದು ಎನಿಸಿದೆ. ಹೀಗಾಗಿ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿದ್ದಾರೆ.ಕಾಲಕ್ಕೆ ತಕ್ಕಂತೆ ಎಲ್ಲವೂ ನಿರ್ಧಾರ ಆಗಲಿದೆ ಎಂದರು.











