ಬೆಂಗಳೂರು: ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೇಂದ್ರದ ನಾಯಕರು ಬೆಂಗಳೂರಿಗೆ ಬಂದು ಸತತ ಸಭೆ ಮಾಡಿದ್ದಾರೆ. ಮೂರು ಹಿರಿಯ ನಾಯಕರು ನಾಲ್ಕು ತಾಸುಗಳ ಕಾಲ ಸಭೆ ನಡೆಸಿದ್ದಾರೆ. ಪಕ್ಷದ ಸಕ್ರೀಯ ಸದಸ್ಯತ್ವ ಮುಂದುವರೆಸುವ ಬಗ್ಗೆ ಚರ್ಚೆ ಆಗಿದೆ.ಬೂತ್ ಸಮಿತಿ, ಮಂಡಲ ಸಮಿತಿ ಬಗ್ಗೆ ಚರ್ಚೆ ಆಗಿದೆ.ಕೆಲವು ಸಲಹೆಗಳನ್ನು ನೀಡಿದ್ದಾರೆ.ಸಂಘಟನೆಯನ್ನು ಬಲ ಪಡಿಸುವ ಸಲುವಾಗಿ ಸಲಹೆ ನೀಡಿದ್ದಾರೆ. ನಾವೆಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಸಂಘಟನೆ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದರು.
ಇನ್ನು ಶಾಸಕ ಯತ್ನಾಳ್ ಉಚ್ಚಾಟನೆ ವಿಚಾರದ ಬಗ್ಗೆ ಮಾತನಾಡಿದ ಅವರು ಸಂಘಟನಾ ಪರ್ವ ಇಡೀ ದೇಶದಲ್ಲಿ ನಡೆಯುತ್ತಿದೆ. ಅದಕ್ಕೆ ಸೀಮಿತವಾಗಿ ಸಭೆ ನಡೆದಿದೆ. ಜಿಲ್ಲಾಧ್ಯಕ್ಷರು ಯಾವುದೇ ಮನವಿಯನ್ನು ನಮ್ಮ ರಾಷ್ಟ್ರೀಯ ನಾಯಕರಿಗೆ ಕೊಟ್ಟಿಲ್ಲ. ಯಾರೂ ಭಯ ಪಡುವ ಅವಶ್ಯಕತೆ ಇಲ್ಲ ಎಂದರು ದೆಹಲಿಯಲ್ಲಿ ಬಿ.ಪಿ. ಹರೀಶ್ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಹರೀಶ್ ಹೆಸರಿನ ಮುಂದೆ ಏನು ಇದೆ?. ಬಿಪಿ ಇದೆ, ಹೀಗಾಗಿ ಸಹನೆಯನ್ನು ಕಳೆದುಕೊಳ್ಳುತ್ತಾರೆ. ಅವರು ಕೂಡಾ ಎರಡನೇ ಬಾರಿ ಗೆದ್ದಿರುವ ಶಾಸಕರಾಗಿದ್ದಾರೆ.ನೋಟಿಸ್ ಎಲ್ಲಾ ಹೈಕಮಾಂಡ್ ನಾಯಕರ ಮುಂದೆ ಇದೆ ಎಂದರು.
ರಾಜ್ಯದ ಅಧ್ಯಕ್ಷರನ್ನಾಗಿ ನನ್ನ ರಾಷ್ಟ್ರೀಯ ಅಧ್ಯಕ್ಷರು ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಸ್ವಂತ ಶಕ್ತಿ ಅಧಿಕಾರಕ್ಕೆ ಬರಬೇಕು. ಇನ್ನು ಹೊಂದಾಣಿಕೆ ರಾಜಕೀಯಕ್ಕೂ ಇತಿಶ್ರೀ ಹಾಡಬೇಕು. ಯತ್ನಾಳ್‌ಗೆ ನೋಟಿಸ್ ಕೊಟ್ಟಾಗಿದೆ. ಕೇಂದ್ರ ವರಿಷ್ಠರು ಗಮನಿಸುತ್ತಿದ್ದಾರೆ. ಶಿಸ್ತು ಕ್ರಮ ಕೈಗೊಳ್ಳಬೇಕಾ ಅಥವಾ ಸುಮ್ಮನೆ ಇರಬೇಕಾ ಅಂತ ಎಲ್ಲವೂ ತೀರ್ಮಾನ ಮಾಡುತ್ತಾರೆ ಎಂದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ನೇತೃತ್ವದಲ್ಲಿ ಸಭೆ
ಬೆಂಗಳೂರು; ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ನೇತೃತ್ವದಲ್ಲಿ ಸಭೆ ನಡೆಯಿತು,. ಇನ್ನು ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದ್ರು.
ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದ ಸಭೆಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಚುಗ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತು ಮಾಜಿ ಎಂಎಲ್ಸಿ ಅರುಣ್ ಶಹಾಪುರ ಈ ವೇಳೆ ಉಪಸ್ಥಿತರಿದ್ದರು.
ಬಳಿಕ ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ನೇತೃತ್ವದಲ್ಲಿ ಸಭೆ ನಡೆಯಿತು. ಸದಸ್ಯತ್ವ ಅಭಿಯಾನ ಸಂಬಂಧ ಸಕ್ರಿಯ ಸದಸ್ಯತ್ವ ಸಮಿತಿಗಳು, ಜಿಲ್ಲಾ ಅಧ್ಯಕ್ಷರು, ಮಂಡಲ, ಬೂತ್ ಸಮಿತಿಗಳ ಪ್ರಮುಖರು ಭಾಗಿಯಾಗಿದ್ದರು. ಸಭೆಯಲ್ಲಿ ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಸದಸ್ಯತ್ವ ಅಭಿಯಾನದ ವೀಕ್ಷಕ ಪೊನ್ನು ರಾಧಾಕೃಷ್ಣನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ರಾಜ್ಯ ಪದಾಧಿಕಾರಿಗಳು, ಶಾಸಕರು ಉಪಸ್ಥಿತರಿದ್ದರು. ಸಭೆಯಲ್ಲಿ ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಭಾಗಿಯಾಗಿದ್ದರು.
ಸಭೆಯಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು, ನಾಯಕರ ಹೇಳಿಕೆಗಳ ಬಗ್ಗೆ ಪ್ರಸ್ತಾಪವಾಯಿತು. ಈ ಬೆಳವಣಿಗೆಗಳಿಂದ ಪಕ್ಷಕ್ಕೆ ಮುಜುಗರವಾಗುತ್ತಿರುವ ಬಗ್ಗೆ ಜಿಲ್ಲಾ ಮುಖಂಡರು ತಿಳಿಸಿದ್ರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಮುಜುಗರ ತಪ್ಪಿಸಬೇಕು ಎಂದು ಮನವಿ ಮಾಡಿದ್ರು. ಈ ವೇಳೆ ಇಲ್ಲಿ ಸಂಘಟನಾತ್ಮಕ ಚರ್ಚೆ ಮಾತ್ರ, ಉಳಿದ ವಿಚಾರ ಚರ್ಚೆ ಮಾಡೋಣ, ವರಿಷ್ಠರ ಗಮನಕ್ಕೆ ತರುತ್ತೇನೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹೇಳಿದರು.
ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಕೋರ್ ಕಮಿಟಿ ಸದಸ್ಯರಾದ ಪ್ರಹ್ಲಾದ್ ಜೋಷಿ, ಬಸವರಾಜ ಬೊಮ್ಮಾಯಿ ಮತ್ತು ಗೋವಿಂದ ಕಾರಜೋಳ ಗೈರಾಗಿದ್ದರು. ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅಭಿಯಾನದ ಉಳಿದ ಪ್ರಗತಿ ಬಗ್ಗೆಯೂ ವರದಿ ಸಲ್ಲಿಸಿ ಎಂದು ಹೇಳಿದ್ರು. ಡಿ. 12 ರೊಳಗೆ ಸದಸ್ಯತ್ವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಭೆಯಲ್ಲಿ ತರುಣ್ ಚುಗ್ ಸೂಚನೆ ನೀಡಿದರು.