ಮೈಸೂರು; ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಸಾಂಸ್ಕೃತಿಕ ನಗರಿಗೆ ಗಜಪಡೆ ಆಗಮಿಸಿದೆ. ಕಾಡಿನಿಂದ ಇಂದು ಗಜಪಡೆ ಮೈಸೂರಿಗೆ ಆಗಮಿಸಿದೆ.
ಬೆಳಗ್ಗೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದರು. ನಾಗರಹೊಳೆ ಅಭಯಾರಣ್ಯದ ಅಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಬೆಳಿಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಚಿವರಾದ ಕೆ ವೆಂಕಟೇಶ್, ಈಶ್ವರ ಖಂಡ್ರೆ, ಸಂಸದ ಸುನಿಲ್ ಬೋಸ್, ಶಾಸಕರಾದ ಜಿ ಡಿ ಹರೀಶ್ ಗೌಡ, ಡಿ ರವಿಶಂಕರ್, ಅನಿಲ್ ಚಿಕ್ಕಮಾದು, ಎಂಎಲ್ಸಿ ವಿವೇಕಾನಂದ, ಮುಡಾ ಅಧ್ಯಕ್ಷ ಕೆ ಮರೀಗೌಡ, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಗಣ್ಯರಿಂದ ದಸರಾ ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.
ಆರತಿ ಬೆಳಗಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿನತ್ತ ಪಯಣಿಸಿದವು.
ಮೈಸೂರಿಗೆ ಆಗಮಿಸಿದ ಆನೆಗಳ ವಯಸ್ಸು;
ಕ್ಯಾಪ್ಟನ್ ಅಭಿಮನ್ಯು (58)
ಭೀಮ (24)
ಗೋಪಿ (41)
ಧನಂಜಯ (43)
ಕಂಜನ್ (25)
ರೋಹಿತ್ (22)
ಲಕ್ಷ್ಮಿ (53)
ವರಲಕ್ಷ್ಮಿ (67)
ಏಕಲವ್ಯ (38)
ಆನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಿದ್ದು, ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಿದ್ದು, ಹೆಚ್ಚುವರಿಯಾಗಿ 4 ಮೀಸಲು ಆನೆಗಳು ಗುರುತು ಮಾಡಲಾಗಿದೆ.ದಸರಾದಲ್ಲಿ ಪಾಲ್ಗೊಳ್ಳಲು ಒಟ್ಟು ಹದಿನಾಲ್ಕು ಆನೆಗಳು ಮಾತ್ರ ಮೈಸೂರಿಗೆ ಆಗಮಿಸಲಿವೆ.ಅಗತ್ಯ ಬಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾನವನ್ನು ಮಾಡಲಾಗಿದೆ.
ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದ ಆವರಣದಲ್ಲಿ ಇಂದು ಮತ್ತು ನಾಳೆ ಅಭಿಮನ್ಯು ಅಂಡ್ ಟೀಮ್ ವಾಸ್ತವ್ಯ ಹೂಡಲಿದೆ. ಶುಕ್ರವಾರ ಅರಮನೆ ಆವರಣ ಗಜಪಡೆ ಆಗಮಿಸಲಿವೆ.ಆನೆಗಳು, ಮಾವುತರು ಹಾಗು ಕಾವಾಡಿಗಳ ವಾಸ್ತವ್ಯಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಸಕಲ ವ್ಯವಸ್ಥೆಯನ್ನು ಈಗಗಾಲೇ ಮಾಡಲಾಗಿದೆ.
ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ; ನಾಳೆ ಮೈಸೂರಿಗೆ ಆಗಮಿಸಲಿರುವ ಗಜಪಡೆ
ಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರಾವಾಗಿದೆ.ನಾಳೆ ಮೈಸೂರಿಗೆ ಗಜಪಡೆ ಆಗಮಿಸಲಿದೆ. ಹೀಗಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗತ ಕಾಲದ ವೈಭವ ಕಳೆಗಟ್ಟಲಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ನಾಳೆ ಗಜಪಯಣ ಸಮಾರಂಭ ನಡೆಯಲಿದೆ.ಗಜಪಯಣ ಕಾರ್ಯಕ್ರಮದ ಮೂಲಕ ಕಾಡಿನಿಂಡ ನಾಡಿಗೆ ಗಜಪಡೆ ಎಂಟ್ರಿ ಕೊಡಲಿದೆ. ಅಲ್ಲಿಂದ ನೇರವಾಗಿ ಮೈಸೂರಿನ ಅರಣ್ಯ ಭವನದ ಆವರಣಕ್ಕೆ ದಸರಾ ಆನೆಗಳು ಬರಲಿವೆ.ವೀರನಹೊಸಹಳಗಳ್ಳಿಯಿಂದ ಮೈಸೂರಿಗೆ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಆಗಮಿಸಲಿದೆ.
ನಾಳೆ ಬೆಳಗ್ಗೆ 10:20 ರಿಂದ 10:45ರೊಳಗಿನ ಶುಭ ಮುಹೂರ್ತದಲ್ಲಿ ದಸರಾ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿದೆ.ಆರತಿ ಬೆಳಗಿ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ.ಗಜ ಪಯಣದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭಾಗಿಯಾಗಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ,ಮೈಸೂರಿನ ಶಾಸಕರು, ಜನಪ್ರತಿನಿಧಿಗಳು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಬೆಳಿಗ್ಗೆ 10:45ರಿಂದ 11:20ರೊಳಗೆ ಪೂಜಾ ಸ್ಥಳದಿಂದ ತೆರಳಿ ವೇದಿಕೆಗೆ ಕಾರ್ಯಕ್ರಮ ನಡೆಯಲಿದೆ.ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರು ಭಾಷಣ ಮಾಡಲಿದ್ದಾರೆ. ಬಳಿಕ ಆನೆಗಳ ಮಾವುತರು ಕಾವಾಡಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ನಂತರ ಸ್ಥಳೀಯ ಕಲಾವಿದರು, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ.ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಆಗಮಿಸಲಿವೆ.ಎರಡನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ.ಹೆಚ್ಚುವರಿಯಾಗಿ 4 ಮೀಸಲು ಆನೆಗಳು ಆಗಮಿಸಲಿವೆ. ಹದಿನಾಲ್ಕು ಆನೆಗಳು ಮಾತ್ರ ಮೈಸೂರಿಗೆ ಬರಲಿವೆ. ಅಗತ್ಯ ಬಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ಆನೆಗಳು, ಮಾವುತರು ಹಾಗೂ ಕಾವಾಡಿಗಳ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಇನ್ನು ಈ ಬಾರಿಯ ದಸರಾದಲ್ಲಿ ಅರ್ಜುನ ಇಲ್ಲ ಅನ್ನೋದು ಅತ್ಯಂತ ನೋವಿನ ವಿಚಾರ. ಆತನ ಅನುಪಸ್ಥಿತಿಯನ್ನು ತುಂಬಲು ಏಕಲವ್ಯ ಆಗಮಿಸುತ್ತಿದ್ದಾನೆ. ಇದು ಅರ್ಜುನನಿಲ್ಲದ ಮೊದಲ ದಸರಾವಾಗಿದೆ.ಇದೇ ಮೊದಲ ಬಾರಿಗೆ ದಸರೆಯಲ್ಲಿ ಏಕಲವ್ಯ ಆನೆ ಭಾಗಿಯಾಗುತ್ತಿದೆ. 39 ವರ್ಷ ಏಕಲವ್ಯ ಆನೆ ಅರ್ಜುನನ ಸ್ಥಾನ ತುಂಬ ಬಲ್ಲ ಎಂಬ ನಂಬಿಕೆಯಿಂದ ಆತನನ್ನು ಕರೆ ತರಲಾಗುತ್ತಿದೆ. ನಾಳೆ ಮೈಸೂರಿನಲ್ಲಿ ಹಬ್ಬದ ಸಂಭ್ರಮವನ್ನು ಇರಲಿದೆ.










