ಮನೆ Latest News ಯುವರಾಜ್‌ ಕುಮಾರ್‌-ಶ್ರೀದೇವಿ ವಿಚ್ಛೇದನ ಪ್ರಕರಣ;ಇಂದು ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ; ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ ಶ್ರೀದೇವಿ

ಯುವರಾಜ್‌ ಕುಮಾರ್‌-ಶ್ರೀದೇವಿ ವಿಚ್ಛೇದನ ಪ್ರಕರಣ;ಇಂದು ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ; ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ ಶ್ರೀದೇವಿ

0

ಬೆಂಗಳೂರು : ಸ್ಯಾಂಡಲ್‌ ವುಡ್‌ ನಲ್ಲಿ ಭಾರೀ ಸದ್ದು ಮಾಡಿದ ನಟ ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ವಿಚ್ಛೇದನ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಫ್ಯಾಮಿಲಿ ಕೋರ್ಟ್ ನಲ್ಲಿ ಜೂನ್ 6 ರಂದು ಯುವ ರಾಜ್ ಕುಮಾರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಕಳೆದ ಆರು ತಿಂಗಳಿಂದ ಯುವ ಹಾಗೂ ಶ್ರೀದೇವಿ ಪರಸ್ಪರ ದೂರವಾಗಿದ್ದರು. ಅಲ್ಲದೇ ಶ್ರೀದೇವಿ ಅಮೇರಿಕಾದಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಇನ್ನು ಅರ್ಜಿಯಲ್ಲಿ ಯುವ ಶ್ರೀದೇವಿ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಮಾಡಿದ್ದರು ಎನ್ನಲಾಗಿದೆ. ಶ್ರೀದೇವಿ ಅವರಿಂದ ನನಗೆ ಮಾನಸಿಕ ಕಿರುಕುಳ ಆಗ್ತಿದೆ ಆ ಕಾರಣಕ್ಕೆ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದೇನೆ ಎಂದಿದ್ದರು ಯುವ.

ಇನ್ನು ಯುವ ಡಿವೋರ್ಸ್ ಗಾಗಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಶ್ರೀದೇವಿ ಭೈರಪ್ಪ ಅವರಿಗೆ ಕೋರ್ಟ್ ನಿಂದ ನೋಟಿಸ್ ಜಾರಿಯಾಗಿತ್ತು. 2019ರಲ್ಲಿ ಯುವ ರಾಜ್ ಕುಮಾರ್ ಅವರನ್ನು ಶ್ರೀದೇವಿ ಅವರನ್ನು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. 7 ವರ್ಷಗಳ ಕಾಲ ಪ್ರೀತಿಸಿ ಯುವ ಹಾಗೂ ಶ್ರೀದೇವಿ ವಿವಾಹವಾಗಿದ್ದರು . ರಾಜ್ ಕುಮಾರ್ ಎಐಎಸ್ ಅಕಾಡೆಮಿಯನ್ನು ಶ್ರೀದೇವಿ ನಡೆಸಿಕೊಂಡು ಹೋಗುತ್ತಿದ್ದರು. ಅಲ್ಲ ಇಬ್ಬರ ಮಧ್ಯೆ ಪ್ರೀತಿ ಮೂಡಿತ್ತು.

ಇನ್ನು ಯುವ ಆರೋಪದ ಬೆನ್ನಲ್ಲೇ ಶ್ರೀದೇವಿ ಯುವ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದರು, ನಟಿ ಸಪ್ತಮಿ ಗೌಡ ಜೊತೆ ಯುವ ಸಂಬಂಧ ಹೊಂದಿದ್ದಾರೆ. ನನ್ನ ಕೈಗೆ ಇಬ್ಬರು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು ಎಂದು ಅವರು ಆರೋಪಿಸಿದ್ದರು. ಅಲ್ಲದೇ ಶ್ರೀದೇವಿ ತಂದೆ ಭೈರಪ್ಪ ಅವರು ಕೂಡ ನನ್ನ ಮಗಳಿಗೆ ಯುವ ರಾಜ್ ಕುಮಾರ್ ಕುಟುಂಬ ಮಾನಸಿಕ ಹಿಂಸೆ ನೀಡಿದೆ ಎಂದು ಆರೋಪಿಸಿದ್ದರು. ಇಂದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಂತಿನಗರದ ಫ್ಯಾಮಿಲಿ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು ತೀರ್ಪು ಹೊರ ಬರಲಿದೆ.

ಇನ್ಸ್ಟ್ಟಾಗ್ರಾಂನಲ್ಲಿ ಶ್ರೀದೇವಿ ಭೈರಪ್ಪ ಪೋಸ್ಟ್

ಇನ್ನು ಇಂದು ಪ್ರಕರಣದ ವಿಚಾರಣೆ ನಡೆಯಲಿರುವ ಬೆನ್ನಲ್ಲೇ ಶ್ರೀದೇವಿ ಭೈರಪ್ಪ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಅದರಲ್ಲಿ  ಈ ರೀತಿ ಬರೆದಿದ್ದಾರೆ.

ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ.

ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ. ಆದರೂ ಸಹ, ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಸ್ಥೆರ್ಯಕ್ಕೆ, ಸಹಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸಹೃದಯಿ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ.

ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.

ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ ಎಂದು ನಾನು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ.

ಹಾರ್ವರ್ಡ್ ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಾಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು, ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ.

ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ ಎಂದಿದ್ದಾರೆ.